AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಮ್ಮೇಳನವು ಮೂರು ದಿನಗಳ ಕಾಲ ನಡೆಯುತ್ತಿದೆ. ವಿವಿಧ ಸಾಹಿತ್ಯ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳು ಮತ್ತು ವಾಣಿಜ್ಯ ಮಳಿಗೆಗಳಿವೆ. ಲಕ್ಷಾಂತರ ಜನರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಇದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ
ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಪ್ರಶಾಂತ್​ ಬಿ.
| Edited By: |

Updated on:Dec 20, 2024 | 1:48 PM

Share

ಮಂಡ್ಯ, ಡಿಸೆಂಬರ್​ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Akhil Bharth Kannada Sahitya Sammelana) ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಮ್ಮೇಳನದ ಮಹಾದ್ವಾರಗಳು, ಪ್ರವೇಶದ್ವಾರ, ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆಗಳಿಗೆ ಶಾಸಕರು ಮತ್ತು ಸಚಿವರು ಚಾಲನೆ ನೀಡಿದರು. “ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ” ಎಂಬ ಆಶಯದೊಂದಿಗೆ ಈ ಬಾರಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಶಾಸಕ ನರೇಂದ್ರಸ್ವಾಮಿ ಸಂವಿಧಾನ ಪೀಠಿಕೆ ಬೋಧಿಸಿದರು.

ಸಕ್ಕರೆ ನಾಡು ಮಂಡದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುತ್ತಿದೆ. ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಹೋಗುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ: ಇಲ್ಲಿದೆ ವಿವರ

ಮಂಡ್ಯ ಹೊರವಲಯದ ಸಾಂಜ್ಯೋ ಆಸ್ಪತ್ರೆ ಹಿಂಭಾಗದ ಸುಮಾರು 70 ಎಕರೆ ಪ್ರದೇಶದಲ್ಲಿ ನುಡಿಹಬ್ಬ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದ ಅಂಗವಾಗಿ ಕೆಆರ್​ಎಸ್ ಜಲಾಶಯದ ಮಾದರಿಯಲ್ಲಿ ಪ್ರವೇಶ ದ್ವಾರವನ್ನ ನಿರ್ಮಾಣ ಮಾಡಲಾಗಿದೆ. ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪ್ಪನಂಜಮ್ಮಣಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಅಲ್ಲದೇ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಮಹಾ ಮಂಟಪ ಕೂಡ ನಿರ್ಮಾಣ ಮಾಡಲಾಗಿದೆ. 30 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಚಾರ ಗೋಷ್ಠಿಗಾಗಿ ಎರಡು ಸಮಾನಂತರ ವೇದಿಕೆಗಳನ್ನು ಸಹಾ ನಿರ್ಮಾಣ ಮಾಡಲಾಗಿದೆ.

ಮೆರವಣಿಗೆ ಮುಖಾಂತರ ವೇದಿಕೆಗೆ ಗೌರವಾಧ್ಯಕ್ಷರ ಆಗಮನ

ಸಮ್ಮೇಳನದ ಗೌರವಾಧ್ಯಕ್ಷ ಗೊರಾ ಚನ್ನಬಸಪ್ಪ ಅವರನ್ನು ಮಂಡ್ಯದ ಸರ್​ ಎಂ ವಿಶ್ವೇಶ್ವರ ಅವರ ಪ್ರತಿಮೆ ಮುಂಭಾಗದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೂ ಬೃಹತ್ ಮೆರವಣಿಗೆ ಮುಖಾಂತರ ಕರೆದುಕೊಂಡ ಬರಲಾಯಿತು.

ಸಾಹಿತ್ಯ ಸಮ್ಮೇಳನ ಸಂಬಂಧ ನಗರದಾದ್ಯಂತ ದಸಾರ ಮಾದರಿಯಲ್ಲಿ ಲೈಟಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಇನ್ನು ಸಾಹಿತ್ಯಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ಹಾಗೂ 350 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ನುಡಿಹಬ್ಬಕ್ಕೆ ಲಕ್ಷಾಂತರ ಜನರು ಭಾಗಿಯಾಗುವ ಹಿನ್ನೆಲೆಯಲ್ಲಿ ಬಗೆ ಬಗೆಯ ಖಾದ್ಯಗಳನ್ನು ಕೂಡ ತಯಾರಿ ಮಾಡಲಾಗಿದೆ. ಉಪಹಾರ ಹಾಗೂ ಊಟಕ್ಕಾಗಿ 150 ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಒಂದೇ ಮೆನು ಮಾಡಲಾಗಿದೆ.

ಊಟದ ಮೆನು

ಮೊದಲ ದಿನ ತಿಂಡಿಗೆ ತಟ್ಟೆ ಇಡ್ಲಿ, ವಡೆ, ಚಟ್ನಿ, ಸಾಂಬರ್, ಉಪ್ಮ, ಮೈಸೂರು ಪಾಕ್ ಇತ್ತು. ಮಧ್ಯಾಹ್ನ ಊಟಕ್ಕೆ ಕಾಯಿ ಹೋಳಿಗೆ, ತುಪ್ಪ, ಜೋಳದ ರೊಟ್ಟಿ, ಬದನೆಕಾಯಿ ಎಣಗಾಯಿ, ಚಟ್ನಿಪುಡಿ, ಮೆಂತ್ಯ ಬಾತ್, ಅನ್ನ, ಮೊಳಕೆ ಕಾಳು ಸಾಂಬರ್, ಬಾಳೆಹಣ್ಣು, ಕೋಸಂಬರಿ, ಉಪ್ಪಿನಕಾಯಿ, ಹಪ್ಪಳ, ಸಾಲಡ್ ಇದೆ. ರಾತ್ರಿ ಊಟಕ್ಕೆ ಪೂರಿ-ಸಾಗು, ಮೈಸೂರು ಪಾಕ್, ಅವರೆ ಕಾಳು ಬಾತ್, ರಾಯಿತ, ಮೊಸರು, ಬಾಳೆಹಣ್ಣು, ಕೋಸಂಬರಿ, ಪಲ್ಯ, ಉಪ್ಪಿನಕಾಯಿ, ಹಪ್ಪಳ, ಸಾಲಡ್ ಇರಲಿದ್ದು ಈಗಾಗಲೇ ನೂರಾರು ಬಾಣಸಿಗರು ಅಡುಗೆ ತಯಾರಿಯಲ್ಲಿ ಪಾಲ್ಗೊಂಡಿದ್ದಾರೆ.

ಪೊಲೀಸ್​ ಬಂದೋಬಸ್ತ್​​

ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 14 ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ನಾಲ್ವರು ಎಸ್​​ಪಿ, ಆರು ಮಂದಿ ಎಸ್​ಪಿ, 21 ಮಂದಿ ಡಿವೈಎಸ್​ಪಿ, 63 ಮಂದಿ ಪಿಐ, 190 ಮಂದಿ ಪಿಎಸ್​ಐ, 215 ಮಂದಿ ಎಎಸ್​ಐ, 1700 ಮಂದಿ ಹೆಚ್​ಸಿ, ಪಿಸಿ, 165 ಮಂದಿ ಮಹಿಳಾ ಪೇದೆ, 1000 ಮಂದಿ ಗೃಹರಕ್ಷಕ ದಳ, 12 ಕೆಎಸ್​ಆರ್​ಪಿ, 13 ಡಿಎಆರ್​ ಸೇರಿ ನಾಲ್ಕು ಸಾವಿರ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಪಾರ್ಕಿಂಗ್​ ವ್ಯವಸ್ಥೆ

ಅಲ್ಲದೇ ಇಪ್ಪತ್ತು ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಎಕ್ಸ್​ಪ್ರೆಸ್ ವೇನಲ್ಲಿ ಮಾರ್ಗ ಬದಲಾವಣೆ ಕೂಡ ಮಾಡಲಾಗಿದೆ. ಜೊತೆಗೆ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಉಚಿತ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Fri, 20 December 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ