ಇತ್ತ ಮೂವರ ಬಂಧನವಾಗುತ್ತಿದ್ದಂತೆಯೇ ಮಂಡ್ಯದಲ್ಲಿ 2022ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎರಡು ವರ್ಷ ಹಳೆಯ ಕೇಸನ್ನು ಮತ್ತೆ ಕೆದಕಿದ್ದು ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ.

ಇತ್ತ ಮೂವರ ಬಂಧನವಾಗುತ್ತಿದ್ದಂತೆಯೇ ಮಂಡ್ಯದಲ್ಲಿ 2022ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್
2022ರಲ್ಲಿ ಬಿಜೆಪಿ ನಡೆಸಿದ್ದ ಪ್ರತಿಭಟನೆ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on:Mar 05, 2024 | 10:15 AM

ಮಂಡ್ಯ, ಮಾರ್ಚ್.05: ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ (BJP) ಕಾರ್ಯಕರ್ತ ರವಿಯನ್ನು ಮಂಡ್ಯದ (Mandya) ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್ (Congress) ದ್ವೇಷದ ರಾಜಕೀಯಕ್ಕೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ರಾಜ್ಯಸಭೆ ಚುನಾವಣೆ ವೇಳೆ ವಿಧಾನಸೌಧದಲ್ಲೇ ಪಾಕ್​ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಅದು ಪಾಕ್​ ಪರ ಘೋಷಣೆ ಅಲ್ಲ, ಬದಲಿಗೆ ಚುಣಾವಣೆಯಲ್ಲಿ ಗೆದ್ದ ನಾಸಿರ್ ಹುಸೇನ್ ಪರ ಘೋಷಣೆ ಅಂತಾ ಕಾಂಗ್ರೆಸ್ ನಾಯಕರು ಹೇಳಿದ್ರು. ಇದೀಗ, ಇದೇ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮೂವರು ಅರೆಸ್ಟ್ ಆಗುತ್ತಿದ್ದಂತೆ ಮಂಡ್ಯದಲ್ಲೂ ಓರ್ವನನ್ನು ಅರೆಸ್ಟ್ ಮಾಡಲಾಗಿದೆ.  ಪಾಕಿಸ್ತಾನ ಜಿಂದಾಬಾದ್ ಘೋಷಣೆ ಸಮರ್ಥನೆ ಮಾಡಿಕೊಳ್ಳಲು ಬಿಜೆಪಿ ಮೇಲೆ ಕಾಂಗ್ರೆಸ್ ಗೂಬೆ ಕೂರಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

2022ರಲ್ಲಿ ಮಂಡ್ಯದ ಸಂಜಯ್ ಸರ್ಕಲ್​ನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಂದು ಪಾಕ್ ವಿದೇಶಾಂಗ ಸಚಿವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಮಾತ್ರವಲ್ಲ, ವಿಧಾನಸೌಧದಲ್ಲಿ ಆಗಿತ್ತು ಭದ್ರತಾ ಲೋಪ: ತನಿಖೆ ವೇಳೆ ಬಯಲಿಗೆ

ಇದೀಗ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ಎಂಬಾತ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಅನ್ವಯ ಪೊಲೀಸರು ಎ1 ಆರಾಧ್ಯ, ಎ2 ರವಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಹಲವು ಅನುಮಾನ ಹುಟ್ಟಿಸಿದ ಕಾಂಗ್ರೆಸ್ ದೂರು

ಇನ್ನು ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ನನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತ ರವಿ ಎ2 ಆರೋಪಿ ಆಗಿದ್ದಾರೆ. 2022ರಲ್ಲಿ ಕನ್ಫೂಜ್ ಆಗಿ ಡಣಾಯಕನಪುರ ರವಿ ಅವರು ಘೋಷಣೆ ಕೂಗಿದ್ದರು. ಆದರೆ ಎಫ್​ಐಆರ್​ನಲ್ಲಿ ರವಿಯನ್ನು ಎ2 ಆರೋಪಿ ಮಾಡಲಾಗಿದ್ದು ಪ್ರತಿಭಟನೆಯಲ್ಲಿ ಭಾಗಿಯಾಗದ ಶಿವಕುಮಾರ್ ಆರಾಧ್ಯರನ್ನು ಎ1 ಆರೋಪಿ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲದವರ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಇದು ಅನುಮಾನ ಹುಟ್ಟಿಸಿದೆ.

ಕತ್ತು ಕೂಯ್ದರೂ ಪಾಕಿಸ್ತಾನಕ್ಕೆ ಧಿಕ್ಕಾರ ಹೇಳ್ತೇನೆ

ಇನ್ನು ಈ ಘಟನೆ ನಡೆದ ಸಂದರ್ಭದಲ್ಲೇ ರವಿ ಅವರು ಕ್ಷಮೆಯಾಚಿಸಿದ್ದರು. ನನ್ನ ಕತ್ತು ಕೂಯ್ದರೂ ಪಾಕಿಸ್ತಾನಕ್ಕೆ ಧಿಕ್ಕಾರ ಹೇಳ್ತೇನೆ. ಹಿಂದಿ ಪದಗಳು ಅರ್ಥವಾಗದೆ ತಪ್ಪಾದ ಘೋಷಣೆ ಕೂಗಿದ್ದೇನೆ. ನಾನೊಬ್ಬ ರೈತ, ಬಾಯ್ತಪ್ಪಿನಿಂದ ಆದ ತಪ್ಪನ್ನು ಕ್ಷಮಿಸಿ ಎಂದು ಪ್ರಮಾದ ನಡೆದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತ ರವಿ ಕ್ಷಮೆಯಾಚಿಸಿದ್ದರು. ಮೋದಿ ಸಾಹೇಬರಿಗೆ ಬೈದಿದ್ದಾರೆಂದು ಪ್ರತಿಭಟನೆ ನಡೆಸುತ್ತಿದ್ದೆವು. ಮುರ್ದಾಬಾದ್, ಜಿಂದಾಬಾದ್ ಘೋಷಣೆ ಕೂಗಲಾಗುತ್ತಿತ್ತು. ಹಿಂದಿ ಪದಗಳು ಅರ್ಥವಾಗದೆ ತೊದಲು ಮಾತಿನಿಂದ ತಪ್ಪಾದ ಘೋಷಣೆ ಕೂಗಿದ್ದೇನೆ. ನನ್ನ ಕತ್ತು ಕೂಯ್ದರೂ ಪಾಕಿಸ್ತಾನಕ್ಕೆ ನನ್ನ ಧಿಕ್ಕಾರ, ಭಾರತಕ್ಕೆ ನನ್ನ ಜೈಕಾರ. ಬಾಯ್ತಪ್ಪಿನಿಂದಾದ ತಪ್ಪನ್ನು ಕ್ಷಮಿಸಿ ಎಂದಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:23 am, Tue, 5 March 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು