Mandya News: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

|

Updated on: Jun 04, 2023 | 10:00 AM

ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ.

Mandya News: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಮಂಡ್ಯ
Follow us on

ಮಂಡ್ಯ: ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ(Nagamangala) ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ. ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು. ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ‌ ಮುಂಡರಗಿ ಪಟ್ಟಣದ ಕೆಇಬಿ ಕಚೇರಿ ಬಳಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಡರಗಿ ಪಟ್ಟಣದ ನಿವಾಸಿ ಮಂಜುನಾಥ್(45) ಮೃತ ಬೈಕ್ ಸವಾರ. ಇನ್ನು ಈ ವೇಳೆ ಸಾರಿಗೆ ಬಸ್ ಚಾಲಕನ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Delhi: ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಸಾವು, ವಾಯುಪಡೆ ಅಧಿಕಾರಿ ಪುತ್ರನ ಬಂಧನ

ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ