ಮಂಡ್ಯದಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ; ಸರ್ಕಾರದ ವಿರುದ್ಧ ಸಂಸದೆ ಸುಮಲತಾ ಆಕ್ರೋಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 18, 2024 | 6:43 PM

ಮಂಡ್ಯ ಜಿಲ್ಲೆಯ ಪಾಂಡವಪುರದ ಸರ್ಕಾರಿ ವಸತಿ ಗೃಹದಲ್ಲಿ ಭ್ರೂಣಲಿಂಗ ಹತ್ಯೆ(Foeticide)  ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 9 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಮತ್ತಿಬ್ಬರು ಕಿಂಗ್ ಪಿನ್​ಗಳಿಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಈ ಹಿನ್ನಲೆ ಕಿಡಿಕಾರಿರುವ ಸಂಸದೆ ಸುಮಲತಾ(Sumalatha), ‘ಸರ್ಕಾರ ಭ್ರೂಣಲಿಂಗ ಪತ್ತೆ ದಂಧೆ ಮಟ್ಟಹಾಕಲು ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ; ಸರ್ಕಾರದ ವಿರುದ್ಧ ಸಂಸದೆ ಸುಮಲತಾ ಆಕ್ರೋಶ
ಸುಮಲತಾ
Follow us on

ಮಂಡ್ಯ, ಮೇ.18: ಪಾಂಡವಪುರದ ಸರ್ಕಾರಿ ವಸತಿ ಗೃಹದಲ್ಲಿ ಭ್ರೂಣಲಿಂಗ ಹತ್ಯೆ(Foeticide)  ಪ್ರಕರಣಕ್ಕೆ ಸಂಬಂಧಿಸಿದಂತೆ ‘ಜಿಲ್ಲೆಯಲ್ಲಿ ಹಿಂದೆಯೂ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್ ಬೆಳಕಿಗೆ ಬಂದಿತ್ತು. ಆದರೆ, ಸರ್ಕಾರ ಭ್ರೂಣಲಿಂಗ ಪತ್ತೆ ದಂಧೆ ಮಟ್ಟಹಾಕಲು ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಸಂಸದೆ ಸುಮಲತಾ(Sumalatha)​ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್ ಬುಕ್ ಪೋಸ್ಟ್ ಮೂಲಕ ನೋವು ಹೊರಹಾಕಿದ್ದಾರೆ.

ಗಮನಕ್ಕೆ ತಂದು ಎಚ್ಚರಿಸಿದ್ದರೂ ಅಸಡ್ಡೆ ಏಕೆ?

ಈ ಕರಾಳ ದಂಧೆ ನಿರ್ಭಯವಾಗಿ ನಡೆಯುತ್ತಿದ್ದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಈ ಹಿಂದೆ ಎಚ್ಚರಿಸಿತ್ತು. ಆದರೂ ಸರ್ಕಾರದ ನಿರ್ಲಕ್ಷ ಧೋರಣೆ ಯಾಕೆ ಎಂದು ಕಿಡಿಕಾರಿದ್ದಾರೆ. ಸರ್ಕಾರಿ ಕ್ವಾಟ್ರಸ್​ನಲ್ಲಿಯೇ ಇಂತಹ ನೀಚ ಕೃತ್ಯ ನಡೆಯುತ್ತಿರುವುದು ಕಳವಳಕಾರಿಯಾಗಿದೆ. ಹಿಂದೆ ಪ್ರಕರಣ ಬೆಳಕಿಗೆ ಬಂದಾಗ ಕಠಿಣ ಕ್ರಮಕೈಗೊಂಡಿದ್ದರೆ, ಪುನಃ ಇಂತಹ ಪ್ರಕರಣ ನಡೆಯುತ್ತಿತ್ತಾ?, ಈಗಲಾದರೂ ಸರ್ಕಾರ ಈ ದುಷ್ಕೃತ್ಯದಲ್ಲಿ ಶಾಮೀಲಾದ ವೈದ್ಯರು, ತಪ್ಪಿತಸ್ಥರನ್ನ ಶಿಕ್ಷಿಸುತ್ತಾ ಎಂದು ಪ್ರಶ್ನಿಸಿದ ಅವರು, ಒಬ್ಬ ತಾಯಿಯಾಗಿ ಇಂತಹ ಹೇಯ ಕೃತ್ಯದ ಬಗ್ಗೆ ತಿಳಿದು ನೋವಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಇನ್ನು ಹೆಣ್ಣು ಭ್ರೂಣ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನರ್ಸ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದರು. ‘ಈ ಆರೋಪಿಗಳು 25 ರಿಂದ 30 ಸಾವಿರಕ್ಕೆ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು. ಗರ್ಭಿಣಿಯರನ್ನು ಟಾರ್ಗೆಟ್ ಮಾಡಿ ಅವರಿಗೆ ಹೆಣ್ಣು ಮಗು ಬಗ್ಗೆ ನಿರಾಸಕ್ತಿಯಿದ್ರೆ ಭ್ರೂಣ ಹತ್ಯೆ ಮಾಡ್ತಿದ್ದರು ಎಂದು ವಿಚಾರಣೆ ವೇಳೆ ಕರಾಳ ದಂಧೆಯ ಬಗ್ಗೆ ಬಂಧಿತ ನರ್ಸ್ ಬಾಯ್ಬಿಟ್ಟಿದ್ದಾರೆ. ಸ್ಕಾನಿಂಗ್ ಸೆಂಟರ್​ಗಳಿಗೆ ಬರುವ ಗರ್ಭಿಣಿಯರನ್ನು ಟಾರ್ಗೆಟ್ ಮಾಡಿ ಎರಡನೇ ಮಗುವಿನ ಸ್ಕ್ಯಾನಿಂಗ್​ಗೆ ಬಂದಿದ್ದಾರೆ ಎಂದರೆ ಗಾಳ ಹಾಕುತ್ತಿದ್ದರು. ಹೆಣ್ಣು ಮಗು ಬಗ್ಗೆ ನಿರಾಸಕ್ತಿ ತೋರಿಸಿದ್ರೆ ಭ್ರೂಣ ಲಿಂಗ ಪರೀಕ್ಷೆ ಮಾಹಿತಿ ನೀಡುತ್ತಿದ್ದರು. ಒಪ್ಪಿಕೊಂಡ್ರೆ ಒಂಟಿ ಮನೆಯಲ್ಲಿ ಸ್ಕ್ಯಾನಿಂಗ್ ನಡೆಸಿ ಹೆಣ್ಣು ಭ್ರೂಣ ಎಂದು ಖಚಿತವಾದ್ರೆ ಪಾಂಡವಪುರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಿ ಬಳಿಕ ಸರ್ಕಾರಿ ಹೆಲ್ತ್ ಕ್ವಾರ್ಟರ್ಸಿನಲ್ಲಿ ಅಬಾರ್ಷನ್ ಮಾಡುತ್ತಿದ್ದರು ಎಂದು ನರ್ಸ್ ಮಾಹಿತಿ ಕಕ್ಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ