Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಏಕಾಏಕಿ ಕೇಳಿಬಂದ ಭಾರಿ ಶಬ್ದ; ಹುಟ್ಟಿಕೊಂಡಿತು ಅಕ್ರಮ ಗಣಿಗಾರಿಕೆಯ ಗುಮಾನಿ

ಇದ್ದಕ್ಕಿದ್ದ ಹಾಗೆ ಭಾರಿ ಶಬ್ದ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ತಿಳಿಸುತ್ತೇನೆ ಎಂದು ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

ಮಂಡ್ಯದಲ್ಲಿ ಏಕಾಏಕಿ ಕೇಳಿಬಂದ ಭಾರಿ ಶಬ್ದ; ಹುಟ್ಟಿಕೊಂಡಿತು ಅಕ್ರಮ ಗಣಿಗಾರಿಕೆಯ ಗುಮಾನಿ
ಕೃಷ್ಣರಾಜ ಸಾಗರ ಜಲಾಶಯ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Aug 12, 2021 | 4:00 PM

ಮಂಡ್ಯ: ಬೇಬಿ ಬೆಟ್ಟ, ಚಿನಕುರುಳಿ ವ್ಯಾಪ್ತಿ ಹಲವೆಡೆಯೂ ಸೇರಿದಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ವ್ಯಾಪ್ತಿಯಲ್ಲಿ ಮಧ್ಯಾಹ್ನ 12.45ರ ಸುಮಾರಿಗೆ ಭಾರಿ ಶಬ್ದ ಕೇಳಿಬಂದಿದೆ. ಈ ಕುರಿತು ಪಾಂಡವಪುರ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯಾವ ಕಾರಣಕ್ಕೆ ಶಬ್ದ ಕೇಳಿ ಬಂದಿದೆ ಎಂದು ಗೊತ್ತಿಲ್ಲ. ಆದರೆ ಇದ್ದಕ್ಕಿದ್ದ ಹಾಗೆ ಭಾರಿ ಶಬ್ದ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಆದರೆ ಕೇಳಿಬಂದ ಭಾರಿ ಶಬ್ದ ಅನುಮಾನಕ್ಕೆ ಕಾರಣವಾಗಿದ್ದು, ಕದ್ದುಮುಚ್ಚಿ ಗಣಿಗಾರಿಕೆ ನಡೆಯುತ್ತಿದೆಯೇ ಎಂಬ ಗುಮಾನಿಯನ್ನು ಸ್ಥಳಿಯರಲ್ಲಿ ಹುಟ್ಟುಹಾಕಿದೆ. 2018ರಲ್ಲೂ ಕೆ ಆರ್ ಎಸ್  ಆಣೆಕಟ್ಟು ಸುತ್ತ ಮುತ್ತಲ‌ ಪ್ರದೇಶದಲ್ಲೂ ಇಂತಹುದೇ ಭಾರಿ ಶಬ್ದ ಕೇಳಿಬಂದಿತ್ತು ಎಂದು ಸ್ಥಳೀಯರು ನೆನೆಸಿಕೊಂಡಿದ್ದಾರೆ.  ಒಟ್ಟಿನಲ್ಲಿ ಇಂದು ಪಾಂಡವಪುರ ತಾಲೂಕಿನಲ್ಲಿ ಕೇಳಿಬಂದಿರುವ ಭಾರಿ ಶಬ್ದ ಆತಂಕಕ್ಕೂ ಕಾರಣವಾಗಿದೆ. 

ಸದ್ಯ ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯ ಕುರಿತು ಸದ್ದು ಗದ್ದಲ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೇಳಿಬಂದಿರುವ ಭಾರಿ ಸದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅಕ್ರಮ ಕಲ್ಲು ಗಣಿಗಾರಿಕೆ ನಿಯಂತ್ರಣಕ್ಕೆ ಕ್ರಮ; 11 ಕಲ್ಲು ಗಣಿ ಗುತ್ತಿಗೆಗಳ ರದ್ದು, 11 ಹೊಸ ಚೆಕ್‌ಪೋಸ್ಟ್ ಸ್ಥಾಪನೆ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದ ಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 11 ಕ್ರಷರ್ ಘಟಕಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಜುಲೈ 28 ರಂದು ನಡೆದ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ತೀರ್ಮಾನದಂತೆ ರದ್ದುಪಡಿಸಿದೆ.

ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವ ಕ್ರಷರ್ ಪರವಾನಿಗೆಗಳನ್ನು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 22 ಕ್ರಷರ್‌ಗಳ ಕ್ರಷರ್‌ ಪರವಾನಿಗೆ ( ಫಾರಂ- A ) ಯನ್ನು ರದ್ದುಪಡಿಸಿದ್ದಾರೆ.

ಚಾಲಿತ ದಳದ ರಚನೆ : ಮಂಡ್ಯ ಜಿಲ್ಲೆಯ ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ಅನಧಿಕೃತ ಕಲ್ಲುಗಣಿಗಾರಿಕೆ / ಸಾಗಾಣಿಕೆ ನಿಯಂತ್ರಣ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ವತಿಯಿಂದ ತಾಲ್ಲೂಕುವಾರು ಕಂದಾಯ ಇಲಾಖೆ , ಅರಣ್ಯ ಇಲಾಖೆ, ಪಂಚಾಯತ್‌ ರಾಜ್ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ / ಸಿಬ್ಬಂದಿಯನ್ನು ಒಳಗೊಂಡಂತೆ ಚಾಲಿತ ದಳವನ್ನು ರಚಿಸಲಾಗಿದೆ. ಅದರಂತೆ ಚಾಲಿತ ದಳವು ಕಾರ್ಯನಿರ್ವಹಿಸುತ್ತಿದೆ.

ಚೆಕ್‌ಪೋಸ್ಟ್ ಸ್ಥಾಪನೆ: ಮಂಡ್ಯ ಜಿಲ್ಲೆಯಾದ್ಯಂತ ಅನಧಿಕೃತ ಕಲ್ಲು ಗಣಿಗಾರಿಕೆ / ಸಾಗಾಣಿಕೆ ನಿಯಂತ್ರಣ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ವತಿಯಿಂದ ಕಂದಾಯ ಇಲಾಖೆ, ಅರಣ್ಯ ಇಲಾಖೆ , ಪಂಚಾಯತ್‌ರಾಜ್‌ ಇಲಾಖೆ , ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ / ಸಿಬ್ಬಂದಿಯನ್ನು ಒಳಗೊಂಡಂತೆ 11 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: 

ಗಣಿಗಾರಿಕೆ ಸ್ಥಗಿತದಿಂದ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ

ಕೆಆರ್​ಎಸ್​ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಮಂಡ್ಯ ಜೆಡಿಎಸ್​ ಶಾಸಕರಿಂದ ಸಿಎಂ ಬೊಮ್ಮಾಯಿಗೆ ಆಹ್ವಾನ

(A loud noise heard in Mandya Pandavapura and baby hill region)

Published On - 3:54 pm, Thu, 12 August 21

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ