ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ

Mandya News: ತರಗತಿ ಸರಿಯಾಗಿ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೋರ್ವ ಉಪನ್ಯಾಸಕರಿಗೆ ಮಚ್ಚು ತೋರಿಸಿ ಎಚ್ಚರಿಕೆ ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಉಪನ್ಯಾಸಕರಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on: Aug 25, 2023 | 8:52 AM

ಮಂಡ್ಯ, (ಆಗಸ್ಟ್ 25): ಇತ್ತೀಚಿನ ದಿನಗಳಲ್ಲಿ ಶಿಕ್ಷಕರಾದವರು(Teachers) ವಿದ್ಯಾರ್ಥಿಗಳಿಗೆ (Students) ಹೊಡೆಯುವಂತಿಲ್ಲ. ಬುದ್ಧಿ ಮಾತಿಗೆ ನಾಲ್ಕು ಮಾತು ಬೈಯುವಂತಿಲ್ಲ. ಕಾಲ ಬದಲಾದಂತೆ ಶಿಕ್ಷಣದ ವ್ಯವಸ್ಥೆಯಲ್ಲೂ ಬದಲಾಗಿದೆ. ವಿದ್ಯಾರ್ಥಿ ಬಗ್ಗೆ ಆತನ ಪೋಷಕರಿಗೆ ದೂರು ನೀಡಿದ್ರೆ ಶಿಕ್ಷಕರಿಗೆ ಅವಾಜ್​ ಹಾಕುವ ಕಾಲ ಇದು. ಹೀಗಾಗಿ ವಿದ್ಯಾರ್ಥಿಗಳು ತಪ್ಪು ಮಾಡಿದರೂ ಹೊಡೆದು ಬುದ್ಧಿ ಹೇಳುವುದಕ್ಕೂ ಶಿಕ್ಷಕರು ಹೆದರು ಸ್ಥಿತಿ ಬಂದಿದೆ. ಅದೇ ರೀತಿ ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್​ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ(Mandya) ಬೆಳಕಿಗೆ ಬಂದಿದೆ. ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಉದಯ್ ಗೌಡ (18) ಎನ್ನುವ ವಿದ್ಯಾರ್ಥಿ  ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಈತ ತರಗತಿಗೆ ಬರುತ್ತಿರಲ್ಲವಂತೆ. ಹೀಗಾಗಿ ಉಪನ್ಯಾಸಕ ಚಂದನ್, ಉದಯ್​ ಕ್ಲಾಸ್​ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ಬಳಿಕ ಪೋಷಕರು ಮನೆಯಲ್ಲಿ ಉದಯ್​​ಗೆ ಈ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಉದಯ್​ ಮಚ್ಚು ಹಿಡಿದು ಕಾಲೇಜಿಗೆ ಬಂದು ಉಪನ್ಯಾಸಕ ಚಂದನ್​ ಅವರಿಗೆ  ಬೆದರಿಕೆ ಹಾಕಿದ್ದಾನೆ. ನನ್ನ ಬಗ್ಗೆ ನೀವು ನಮ್​ ಮನೆಯವರಿಗೆ ಹೇಗೆ ಹೇಳಿದ್ರಿ ಎಂದು ಪ್ರಶ್ನಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.

ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ , ಕಾಲೇಜಿಗೆ ಲಾಂಗ್ ತಂದು ಉಪನ್ಯಾಸಕ ಚಂದನ್ ಅವರಿಗೆ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಉಪನ್ಯಾಸಕ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ತನ್ನ ತಪ್ಪಿನ ಅರಿವಾಗಿ ವಿದ್ಯಾರ್ಥಿ ಉದಯ್​ ಗೌಡ, ಪೋಷಕರೊಂದಿಗೆ ಬಂದು ಉಪನ್ಯಾಸಕ ಉದಯ್​ ಗೌಡ ಬಳಿ ಕ್ಷಮೆಯಾಚಿಸಿದ್ದಾನೆ.

ನಿಮ್ಮ ಜಿಲ್ಲೆಗಳ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ