ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕ ಸೆರೆ; ಬಂಧನ ಖಂಡಿಸಿ ಭಜರಂಗದಳದಿಂದ ಧರಣಿ
ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನು ಇದೀಗ ಮಂಡ್ಯ(Mandya) ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ ಬಂಧಿತ ಆರೋಪಿ. ಇತ ಕೋಮುಸೌಹಾರ್ದ ಕದಡುವ ಯತ್ನ ಆರೋಪದಡಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಮಂಡ್ಯ, ನ.15: ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನು ಇದೀಗ ಮಂಡ್ಯ(Mandya) ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ ಬಂಧಿತ ಆರೋಪಿ. ಇತ ಕೋಮುಸೌಹಾರ್ದ ಕದಡುವ ಯತ್ನ ಆರೋಪದಡಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಇನ್ನು ಇದನ್ನು ಖಂಡಿಸಿ ಮದ್ದೂರು ಪೊಲೀಸ್ ಠಾಣೆಯ ಎದುರೇ ಭಜರಂಗದಳದ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಹೌದು, ಪೊಲೀಸರು ಸ್ವಾಮಿಯನ್ನು ಬಂಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಬಳಿಕ ಬಂಧಿತ ಸ್ವಾಮಿಯನ್ನು ಬಿಡುಗಡೆ ಮಾಡಿದ್ದು, ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಹಿರಿಯ ಪೊಲೀಸರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಇನ್ನು ಇದೇ ನ. 13 ರಂದು ಸರ್ಕಾರದ ಶಕ್ತಿ ಯೋಜನೆ ಆರಂಭವಾದ ದಿನ ಫ್ರೀ ಎಂದು ಡ್ಯಾನ್ಸ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯರ ವಿಡಿಯೋವನ್ನು ದುಷ್ಕರ್ಮಿಗಳು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಹೌದು, ಶಕ್ತಿ ಯೋಜನೆ ಜಾರಿಯಾದ ದಿನ ಬೆಳಗಾವಿಯ ಕಾಂಗ್ರೆಸ್ ಕಾರ್ಯಕರ್ತೆ ಆಯಿಶಾ ಸನದಿ ಎಂಬುವವರು ಸೇರಿದಂತೆ ಹಲವರು ಫ್ರೀ ಎಂದು ಬಸ್ನಲ್ಲಿ ಡ್ಯಾನ್ಸ್ ಮಾಡಿದ್ದರು. ಆ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದೀಗ ಈ ವಿಡಿಯೋಗೆ ದುಷ್ಕರ್ಮಿಗಳು “ಉಪೇಂದ್ರ ಚಿತ್ರದ ಎಷ್ಟು ರೇಟ್” ಎಂಬುವ ಸೀನ್ ಅನ್ನು ಅಳವಡಿಸಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಆಯಿಶಾ ಸನದಿ ಅವರು ಬೆಳಗಾವಿ ನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಇನ್ನು ಪ್ರಕರಣ ದಾಖಲಾಗಿ ಐದು ತಿಂಗಳು ಕಳೆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್
ಬೆಂಗಳೂರು: ಕಾರು ಡಿಕ್ಕಿ, ಬೈಕ್ನಲ್ಲಿ ತೆರಳುತ್ತಿದ್ದ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದ ಬಳಿ ನಡೆದಿದೆ. ಆಲೂರು ಗ್ರಾಮದ ನಿವಾಸಿ, ಟೆಕ್ಕಿ ಅರುಣ್ ಕುಮಾರ್(24) ಮೃತ ರ್ದುದೈವಿ. ಕಾರು ಜಪ್ತಿ, ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು, ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:02 pm, Wed, 15 November 23