ಹೆಚ್​ಡಿ ಕುಮಾರಸ್ವಾಮಿಗೆ ನಿಂದಿಸಿದ ನಟ ದರ್ಶನ್​ ಮಹಿಳಾ ಅಭಿಮಾನಿ ವಿರುದ್ಧ ದೂರು

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್​ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್​ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್​ ದೂರು ನೀಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿಗೆ ನಿಂದಿಸಿದ ನಟ ದರ್ಶನ್​ ಮಹಿಳಾ ಅಭಿಮಾನಿ ವಿರುದ್ಧ ದೂರು
ದರ್ಶನ ಅಭಿಮಾನಿ ವಿರುದ್ಧ ದೂರು
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Jun 21, 2024 | 2:49 PM

ಮಂಡ್ಯ, ಜೂನ್​ 21: ಚಿತ್ರದುರ್ಗದ ರೇಣುಕಾಸ್ವಾಮಿಯನ್ನ (Renuka Swamy) ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್​​ (Darshan) ಅವರನ್ನು ಬಂಧಿಸಲಾಗಿದೆ. ಇದೀಗ ಆರೋಪಿ ದರ್ಶನ ಅವರ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್​​ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್​ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್​ ದೂರು ನೀಡಿದ್ದಾರೆ.

“ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್​ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್​ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ‌ ಅವರಿಂದ ಭಿಕ್ಷೆ ಹಾಕಿಸಿಕೊ‌ಂಡ ಮಗ” ಎಂದು ಏಕವಚನದಲ್ಲಿ ಸಮಾಜಿಕ ಜಾಲತಾಣದಲ್ಲಿ ದರ್ಶನ ಅಭಿಮಾನಿ ಮಂಗಳಾ ಅವರು ನಿಂದಿಸಿದ್ದಾರೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ

ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ: ದೂರು ನೀಡಿದ ಪ್ರಥಮ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದ್ದು, ಹಲವು ಸೆಲೆಬ್ರಿಟಿಗಳು ದರ್ಶನ್ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ ಸೆಲೆಬ್ರಿಟಿಗಳಿಗೆ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನಿಂದನೆ, ಬೆದರಿಕೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಬಳಿ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಪ್ರಥಮ್ ವಿರುದ್ಧ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಕೊಲೆ ಬೆದರಿಕೆ ಹಾಕಿದ್ದರು. ಪ್ರಥಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

ಇತ್ತೀಚೆಗಷ್ಟೆ ಮಾಧ್ಯಮಗಳ ಬಳಿ ಮಾತನಾಡಿದ್ದ ನಟ ಪ್ರಥಮ್, ‘ದರ್ಶನ್ ಅನ್ನು ಬಂಧಿಸಿಟ್ಟಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಎದುರು ನಿಂತಿರುವ ದರ್ಶನ್ ಅಭಿಮಾನಿಗಳನ್ನು ಲಾಠಿ ತೆಗೆದುಕೊಂಡು ಹೊಡೆಯಬೇಕು ಅನಿಸುತ್ತದೆ. ಅಲ್ಲಿರುವ ಒಬ್ಬರೂ ಸಹ ಅವರ ಅಪ್ಪ-ಅಮ್ಮನಿಗೆ ಒಂದೊತ್ತು ಊಟ ಹಾಕುವ ಯೋಗ್ಯತೆ ಇಲ್ಲದವರು. ಮೊದಲು ಅವರನ್ನು ಭಾರಿಸಿ ಅಟ್ಟಬೇಕು’ ಎಂದಿದ್ದರು. ಅಲ್ಲದೆ, ದರ್ಶನ್ ಅನ್ನು ಸೂಪರ್ ಸ್ಟಾರ್ ಎಂದು ಕರೆದ ಬಗ್ಗೆಯೂ ಆಕ್ಷೇಪ ಎತ್ತಿದ್ದರು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:02 pm, Fri, 21 June 24

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ