ಮಂಡ್ಯ, ಜೂನ್ 21: ಚಿತ್ರದುರ್ಗದ ರೇಣುಕಾಸ್ವಾಮಿಯನ್ನ (Renuka Swamy) ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ (Darshan) ಅವರನ್ನು ಬಂಧಿಸಲಾಗಿದೆ. ಇದೀಗ ಆರೋಪಿ ದರ್ಶನ ಅವರ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ದೂರು ನೀಡಿದ್ದಾರೆ.
“ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ” ಎಂದು ಏಕವಚನದಲ್ಲಿ ಸಮಾಜಿಕ ಜಾಲತಾಣದಲ್ಲಿ ದರ್ಶನ ಅಭಿಮಾನಿ ಮಂಗಳಾ ಅವರು ನಿಂದಿಸಿದ್ದಾರೆ.
ಇದನ್ನೂ ಓದಿ: ಪವಿತ್ರಾ ಗೌಡಗೆ ಜೈಲಲ್ಲೂ ಸಿಕ್ತು ‘D’ ಬ್ಯಾರಾಕ್; ನಿದ್ರೆ ಮಾಡದೆ ಜೈಲಿನಲ್ಲಿ ಚಡಪಡಿಕೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದ್ದು, ಹಲವು ಸೆಲೆಬ್ರಿಟಿಗಳು ದರ್ಶನ್ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ ಸೆಲೆಬ್ರಿಟಿಗಳಿಗೆ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನಿಂದನೆ, ಬೆದರಿಕೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಬಳಿ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದ ನಟ ಪ್ರಥಮ್ ವಿರುದ್ಧ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಕೊಲೆ ಬೆದರಿಕೆ ಹಾಕಿದ್ದರು. ಪ್ರಥಮ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.
ಇತ್ತೀಚೆಗಷ್ಟೆ ಮಾಧ್ಯಮಗಳ ಬಳಿ ಮಾತನಾಡಿದ್ದ ನಟ ಪ್ರಥಮ್, ‘ದರ್ಶನ್ ಅನ್ನು ಬಂಧಿಸಿಟ್ಟಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಎದುರು ನಿಂತಿರುವ ದರ್ಶನ್ ಅಭಿಮಾನಿಗಳನ್ನು ಲಾಠಿ ತೆಗೆದುಕೊಂಡು ಹೊಡೆಯಬೇಕು ಅನಿಸುತ್ತದೆ. ಅಲ್ಲಿರುವ ಒಬ್ಬರೂ ಸಹ ಅವರ ಅಪ್ಪ-ಅಮ್ಮನಿಗೆ ಒಂದೊತ್ತು ಊಟ ಹಾಕುವ ಯೋಗ್ಯತೆ ಇಲ್ಲದವರು. ಮೊದಲು ಅವರನ್ನು ಭಾರಿಸಿ ಅಟ್ಟಬೇಕು’ ಎಂದಿದ್ದರು. ಅಲ್ಲದೆ, ದರ್ಶನ್ ಅನ್ನು ಸೂಪರ್ ಸ್ಟಾರ್ ಎಂದು ಕರೆದ ಬಗ್ಗೆಯೂ ಆಕ್ಷೇಪ ಎತ್ತಿದ್ದರು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:02 pm, Fri, 21 June 24