ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 2 ಸಾವು

| Updated By: ವಿವೇಕ ಬಿರಾದಾರ

Updated on: Jan 14, 2024 | 10:27 AM

ಬೆಂಗಳೂರು-ಮೈಸೂರು ಹೆದ್ದಾರಿಯ ಶಿಂಷಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ​ ಮೇಲಿನ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್​ನ ಮ್ಯಾನೇಜರ್​​ ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 2 ಸಾವು
ಅಪಘಾತ
Follow us on

ಮಂಡ್ಯ, ಜನವರಿ.14: ಬೆಂಗಳೂರು-ಮೈಸೂರು ಹೆದ್ದಾರಿಯ (Bengaluru-Mysore Highway) ಶಿಂಷಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ​ ಮೇಲಿನ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್​ನ (ICICI Bank) ಮ್ಯಾನೇಜರ್​​ ಶಂಕರ್ ಹಾಗೂ ಮಹದೇವು ಮೃತ ದುರ್ದೈವಿಗಳು. ಕಿಶೋರ್​​ ಎಂಬುವರಿಗೆ ಗಾಯವಾಗಿದ್ದು, ಮಂಡ್ಯ ಮಿಮ್ಸ್​ಗೆ ದಾಖಲಿಸಲಾಗಿದೆ. ಬ್ಯಾಂಕ್​ ಸಿಬ್ಬಂದಿ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಶಿಂಷಾ ನದಿ ಸೇತುವೆ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದೆ. ಮದ್ದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಬ್ಬಿನ ಗದ್ದೆಯಲ್ಲಿ ಲಾರಿ ಹರಿದು ಕುರಿಗಾಹಿಗಳು ಸಾವು

ಬಳ್ಳಾರಿ: ಕಬ್ಬಿನ ಗದ್ದೆಯಲ್ಲಿ ಲಾರಿ ಹರಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಬಳ್ಳಾರಿ ತಾಲೂಕಿನ ಬೆಂಚಿಕೊಟ್ಟಲು ಗ್ರಾಮದಲ್ಲಿ ನಡೆದಿದೆ. ಮ್ಯಾಗಳಹಟ್ಟಿ ಸಿದ್ದಪ್ಪ(51), ಯರಿಽಸ್ವಾಮಿ(20) ಮೃತ ದುರ್ದೈವಿಗಳು. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕುರಿಗಳನ್ನು ಕಟ್ಟಿಹಾಕಿ, ಕುರಿಗಾಹಿಗಳು ಮಲಗಿದ್ದರು. ಈ ವೇಳೆ ಕಬ್ಬು ಲೋಡ್​​ ಮಾಡಿಕೊಳ್ಳಲು ಲಾರಿ ಬಂದಿದ್ದು, ಮಲಗಿದವರ ಮೇಲೆ ಹರಿದಿದೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ

ಕಾರು ಪಲ್ಟಿಯಾಗಿ ದಂಪತಿ ಹಾಗೂ ಮಕ್ಕಳಿಗೆ ಗಾಯ

ಗದಗ: ಕಾರು ಪಲ್ಟಿಯಾಗಿ ದಂಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ನಡೆದಿದೆ. ಕೆರೆಗೆ ತಡೆಗೋಡೆ ನಿರ್ಮಿಸುವಂತೆ ಜನರು ಒತ್ತಾಯಿಸಿದ್ದಾರೆ. ಹೊಂಬಳ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ