ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಓರ್ವ ಸಾವು
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಅನೇಕಲ್ ಮೂಲದ ಕಿಶೋರ್ ಬಾಬು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಾಳಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ಸೆ.17: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಅನೇಕಲ್ ಮೂಲದ ಕಿಶೋರ್ ಬಾಬು (47) ಮೃತಪಟ್ಟಿದ್ದಾರೆ.ನಾಲ್ವರಿಗೆ ಗಾಯಗಾಳಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಬಳಿ ಘಟನೆ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಕಾರು ಹಿಂಬದಿಯಿಂದ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೆ ಸ್ಥಳದಲ್ಲಿದ್ದ ಪೊಲೀಸರು ಮತ್ತು ಸ್ಥಳೀಯರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಾರು ನೋಡು ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಜನ ಸಾವು, ಈ ಪೈಕಿ ಬೈಕ್ ಸವಾರರೇ ಹೆಚ್ಚು
10 ಚಕ್ರದ ಲಾರಿ ಪಲ್ಟಿ, ಚಾಲಕ ಮತ್ತು ಕ್ಲೀನರ್ಗೆ ಸಣ್ಣಪುಟ್ಟ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ 10 ಚಕ್ರದ ಲಾರಿ ಪಲ್ಟಿಯಾಗಿದೆ. ಚಾಲಕ ಮತ್ತು ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಮೂಡಿಗೆರೆಯಿಂದ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರ ಕಡೆ ಹೊರಟಿತ್ತು. ಅತಿ ವೇಗವಾಗಿ ಚಲಾಯಿಸುತ್ತಿದ್ದರಿಂದ ಲಾರಿ ಪಲ್ಟಿಯಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:17 pm, Sun, 17 September 23