ಕೆಆರ್​ಎಸ್​ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ, ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ?

| Updated By: Rakesh Nayak Manchi

Updated on: Aug 14, 2023 | 9:13 PM

ಒಂದೆಡೆ, ತಮಿಳುನಾಡಿಗೆ ನೀರು ಬಿಡದಂತೆ ಕರ್ನಾಟಕದ ರೈತರು ಪ್ರತಿಭಟನೆಗೆ ಇಳಿಯಲು ಮುಂದಾಗಿದ್ದಾರೆ. ಇನ್ನೊಂದೆಡೆ, ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಹಾಗಾದರೆ ತಮಿಳುನಾಡು ಸರ್ಕಾರದ ಒತ್ತಡಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಎದ್ದಿದೆ.

ಕೆಆರ್​ಎಸ್​ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ, ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ?
ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ (PTI Photo)
Follow us on

ಮಂಡ್ಯ, ಆಗಸ್ಟ್ 14: ರೈತರ ವಿರೋಧದ ನಡುವೆಯೂ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ‌ಕೆಆರ್​ಎಸ್ (KRS)​​ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನಾಲ್ಕು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹಾಗಾದರೆ ತಮಿಳುನಾಡು (Tamil Nadu) ಸರ್ಕಾರದ ಒತ್ತಡಕ್ಕೆ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಉದ್ಭವಿಸಿದೆ.

ಇಂದು ಬೆಳಗ್ಗೆ ಕೆಆರ್​ಎಸ್​ನಿಂದ 5,243 ಕ್ಯೂಸೆಕ್​ ನೀರು ಬಿಡಲಾಗಿತ್ತು. ಸಂಜೆ ವೇಳೆಗೆ ಇದೇ ಜಲಾಶಯದಿಂದ 9,273 ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ. ಅಂದರೆ, ಹೆಚ್ಚುವರಿ 4 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಖಂಡಿಸಿ ಸೋಮವಾರ ನಂಜನಗೂಡು ರೈತರ ಪ್ರತಿಭಟನೆ

ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ನಡುವೆ ಕರ್ನಾಟಕ ಸರ್ಕಾರ ಹೆಚ್ಚುವರಿ ನೀರು ಬಿಡುಗಡೆ ಮಾಡಿದೆ. ಕೆಆರ್​ಎಸ್​​ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಸದ್ಯ ಜಲಾಶಯದಲ್ಲಿ ನೀರಿನ ಮಟ್ಟ 112.07 ಅಡಿ ಇದ್ದು, 33.853 ಟಿಎಂಸಿ ನೀರು ಸಂಗ್ರಹವಿದೆ.

ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನೀರು ಹರಿಸದ ಪರಿಣಾಮ ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆ ಹಾನಿಯಾಗುತ್ತಿವೆ. ಹೀಗಾಗಿ ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡುವಂತೆ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Mon, 14 August 23