ಹರಕೆ ಹೊತ್ತ 22 ಗಂಟೆಗಳಲ್ಲಿ ಸ್ಯಾಂಟ್ರೋ ರವಿ ಬಂಧನ: ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್

ಸ್ಯಾಂಟ್ರೋ ರವಿ ಬೇಗ ಸಿಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿಕೊಂಡಿದ್ದು, ಇದೀಗ ಆ ಹರಕೆಯನ್ನು ತೀರಿಸಿದ್ದಾರೆ. ಈ ಹಿಂದೆಯೂ ದೇವಿಗೆ ಪೂಜೆ ಸಲ್ಲಿಸಿದ ಐದೇ ಗಂಟೆಯಲ್ಲಿ ಆರೋಪಿ ಸಿಕ್ಕಿದ್ದರಂತೆ.

ಹರಕೆ ಹೊತ್ತ 22 ಗಂಟೆಗಳಲ್ಲಿ ಸ್ಯಾಂಟ್ರೋ ರವಿ ಬಂಧನ: ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್
ದೇವಿಗೆ ಪೂಜೆ ಸಲ್ಲಿಸಿದ ಅಲೋಕ್ ಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jan 14, 2023 | 4:34 PM

ಮಂಡ್ಯ: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ (Santro Ravi). ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್​ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ದೇವರಿಗೆ ಹರಕೆ ಹೊತ್ತಿದ್ದರಂತೆ. ಇದೀಗ ಸ್ಯಾಂಟ್ರೋ ರವಿ ಬಂಧನವಾಗಿದ್ದರಿಂದ ಹರಕೆ ತೀರಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಟು ಕೇರಳ ಬಳಿಕ ಪುಣೆ: ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್​ಗೆ ಕರೆದುಕೊಂಡು ಹೋಗಿದ್ಯಾರು? ಹೆಚ್​ಡಿಕೆ ಹೊಸ ಬಾಂಬ್

ಹೌದು…ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಅದರಂತೆ ಇದೀಗ ಸ್ಯಾಂಟ್ರೋ ಪೊಲೀಸ್ ಬಲೆ ಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಇಂದು ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಇನ್ನು ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಖು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ಆತನಿಂದಾಗಿ (ಸ್ಯಾಂಟ್ರೋ ರವಿ) ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಈಗ ಸ್ಯಾಂಟ್ರೋ ರವಿ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ. ಬಳಿಕ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ರು ಎನ್ನುವ ಬಗ್ಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ