ಆದಿಚುಂಚನಗಿರಿ ಗಂಗಾಧರೇಶ್ವರಸ್ವಾಮಿ ರಥೋತ್ಸವ: ಸಾವಿರಾರು ಜನರು ಭಾಗಿ

ಈ ಬಾರಿ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಅದ್ಧೂರಿಯಾಗಿ ನಡೆಯಿತು. ರಥೋತ್ಸವದ ಪ್ರಯುಕ್ತ ಆದಿಚುಂಚನಗಿರಿ ಕ್ಷೇತ್ರವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಆದಿಚುಂಚನಗಿರಿ ಗಂಗಾಧರೇಶ್ವರಸ್ವಾಮಿ ರಥೋತ್ಸವ: ಸಾವಿರಾರು ಜನರು ಭಾಗಿ
ಆದಿಚುಂಚನಗಿರಿ ರಥೋತ್ಸವವನ್ನು ಜನರು ಕಣ್ತುಂಬಿಕೊಂಡರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 18, 2022 | 9:28 AM

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು. ಮುಂಜಾನೆ 4.58ರ ಬ್ರಾಹ್ಮಿ ಮುಹೂರ್ತದಲ್ಲಿ ನಡೆದ ಮಹಾರಥೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಕಾಲಭೈರವೇಶ್ವರ, ಗಂಗಾಧರೇಶ್ವರನಿಗೆ ಭಕ್ತರು ಜಯಕಾರ ಮೊಳಗಿಸಿದರು. ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭಕ್ತರು ಅಡ್ಡಪಲ್ಲಕ್ಕಿಯಲ್ಲಿ ಹೊತ್ತರು. ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಲ್ಲಿಯೂ ರಥೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಈ ಬಾರಿ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಅದ್ಧೂರಿಯಾಗಿ ನಡೆಯಿತು. ರಥೋತ್ಸವದ ಪ್ರಯುಕ್ತ ಆದಿಚುಂಚನಗಿರಿ ಕ್ಷೇತ್ರವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಸಂಜೆ 6 ಗಂಟೆಯ ನಂತರ ತಾಲ್ಲೂಕಿನ ನೂರಾರು ಗ್ರಾಮ ದೇವತೆಗಳ ಮೆರವಣಿಗೆ ಮೂಲಕ ಗಿರಿಪ್ರದಕ್ಷಿಣೆ ಮತ್ತು ಸಂಜೆ 7ಕ್ಕೆ ಸೋಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ.

ನಾಳೆ (ಮಾರ್ಚ್ 19) ಬೆಳಿಗ್ಗೆ 9ಕ್ಕೆ ಧರ್ಮ ಧ್ವಜಾರೋಹಣ, 9.30ಕ್ಕೆ ಬಿಂದು ಸರೋವರದಲ್ಲಿ ಅವಭೃತ ಸ್ನಾನ, 10.30ಕ್ಕೆ ಸಭಾ ಕಾರ್ಯಕ್ರಮ ನಡೆಯುವುದರೊಂದಿಗೆ ರಥೋತ್ಸವದ ಕಾರ್ಯಕ್ರಮಗಳು ಮುಕ್ತಾಯವಾಗಲಿವೆ.

ಆದಿಚುಂಚನಗಿರಿಯಲ್ಲಿ ಮಾರ್ಚ್‌ 11ರಂದು ಬೆಳಿಗ್ಗೆ 8.30ಕ್ಕೆ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಧರ್ಮಧ್ವಜ ಸ್ಥಾಪನೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದರು. ನಾಂದಿ ಪೂಜೆ ಮತ್ತು ಯುವ ಸಮ್ಮೇಳನಗಳೂ ನಡೆದಿದ್ದವು. 12ರಂದು ಬೆಳಿಗ್ಗೆ 10.30ಕ್ಕೆ ಚುಂಚಾದ್ರಿ ಮಹಿಳಾ ಸಮಾವೇಶ ಮತ್ತು ರಾತ್ರಿ 7ಕ್ಕೆ ಚಂದ್ರಮೌಳೇಶ್ವರ ಸ್ವಾಮಿ ಉತ್ಸವ, 13ರಂದು ಬೆಳಿಗ್ಗೆ 10.30ಕ್ಕೆ ಸಂಗೀತೋತ್ಸವ, ರಾತ್ರಿ 7ಕ್ಕೆ ಮಲ್ಲೇಶ್ವರ ಸ್ವಾಮಿ ಉತ್ಸವ, 14ರಂದು ಬೆಳಿಗ್ಗೆ 10.30ಕ್ಕೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಕಾರ್ಯಕ್ರಮ, ರಾತ್ರಿ 7.30ಕ್ಕೆ ಸಿದ್ದೇಶ್ವರಸ್ವಾಮಿ ಉತ್ಸವ ಜರುಗಿತ್ತು.

15ರಂದು ಬೆಳಿಗ್ಗೆ 7.30ಕ್ಕೆ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚಾಲಂಕಾರ ಪೂಜೆ ಮತ್ತು ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆಗಳು ನಡೆದಿತ್ತು. ಉತ್ಸವದ ಅಂಗವಾಗಿ ನಡೆದ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ 200ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ. ರಾತ್ರಿ 7ಕ್ಕೆ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವಗಳು ನಡೆದವು.

16ರಂದು ಬೆಳಿಗ್ಗೆ 9.30ಕ್ಕೆ ಸರಳ ಸಾಮೂಹಿಕ ವಿವಾಹ ನಡೆಯಿತು. ಅಂದು ಸುವರ್ಣ ಮಹೋತ್ಸವನ್ನು ಆಚರಿಸಿಕೊಂಡ ದಂಪತಿಗಳನ್ನು ಸನ್ಮಾನಿಸಲಾಯಿತು. ರಾತ್ರಿ 7ಕ್ಕೆ ಸ್ವಾಮೀಜಿ ಅವರ ಜ್ವಾಲಪೀಠಾರೋಹಣ ಮತ್ತು ಸಿದ್ಧ ಸಿಂಹಾಸನ ಪೂಜೆ, 9ಕ್ಕೆ ಚಂದ್ರ ಮಂಡಲೋತ್ಸವ ನಡೆದಿತ್ತು. 17ರಂದು ರಾತ್ರಿ 7.30ಕ್ಕೆ ಸರ್ವಧರ್ಮ ಸಮ್ಮೇಳನ, 8ಕ್ಕೆ ಕಾಲಭೈರವೇಶ್ವರ ಸ್ವಾಮಿ ತಿರುಗಣಿ ಉತ್ಸವ, 9ಕ್ಕೆ ಪುಷ್ಕರಣಿ ತೆಪ್ಪೋತ್ಸವ ಮತ್ತು 9.30ಕ್ಕೆ ನಾಟಕ ಪ್ರದರ್ಶನ ನಡೆಯಿತು.

ಇದನ್ನೂ ಓದಿ: 2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ಇದನ್ನೂ ಓದಿ: ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ

Published On - 9:26 am, Fri, 18 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ