ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಈ ಹಿಂದೆಯೂ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ  ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ
ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಶ್ರೀ ಭವಿಷ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 09, 2022 | 2:57 PM

ಮಂಡ್ಯ : ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು (Shivananda Shivayogi Rajendra Swami) ಮತ್ತೊಮ್ಮೆ ರಾಜ್ಯದ ಆಗುಹೋಗುಗಗಳ ಬಗ್ಗೆ ಗಂಭೀರ ಭವಿಷ್ಯ ನುಡಿದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಗೆ (Bukanakere) ಭೇಟಿ ನೀಡಿರುವ ಕೋಡಿ ಮಠದ ಶ್ರೀಗಳು (Kodi Mutt Shree) ರಾಜ್ಯಾದ್ಯಂತ ಮಳೆ ಅನಾಹುತ ಮುಂದುವರಿಯಲಿದೆ. ದೇಶದಲ್ಲಿ ಸುನಾಮಿ (Tsunami) ಬರುವ ಸಾಧ್ಯತೆಯೂ ಇದೆ ಎಂದು ಅಪಾಯದ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ (Natural Calamities).

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಜನರು ಓಡಾಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಈ ಹಿಂದೆಯೂ ನಾನು ಕೊರೊನಾ ಬಗ್ಗೆ ಭವಿಷ್ಯ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ಮಠದ ಶರಣರ ವಿರುದ್ಧ ಆರೋಪ -ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಮಾರ್ಮಿಕ ಮಾತು

ಈ ಹಿಂದಿನ ನನ್ನ ಎಲ್ಲಾ ಮಾತುಗಳು ನಿಜವಾಗಿವೆ. ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ. ಇದಕ್ಕೆಲ್ಲಾ ಪರಿಹಾರ ದೇವರನ್ನು ಪೂಜಿಸುವುದು. ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ. ಯೋಗ್ಯ ಸಾಧುಗಳಿದ್ದಾರೆ, ಗದ್ದುಗೆಗಳಿವೆ, ಎಲ್ಲರೂ ಸೇರಿ ಪ್ರಾರ್ಥಿಸಿದರೆ ಜಗತ್ತು ಉಳಿಯುತ್ತದೆ. ಮಠದ ವಿರುದ್ಧ ಹಾಗೂ ಶರಣರ ವಿರುದ್ಧ ಆರೋಪ ವಿಚಾರವಾಗಿ ಕೋಡಿ ಶ್ರೀ ಮಾರ್ಮಿಕವಾಗಿ ಉತ್ತರಿಸಿದರು.

ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವು, ಮೂಢಂಗೆ ಗುರುತನವೂ ಸಿಕ್ಕಿರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಇಂತಹ ಆರೋಪಗಳು ಮುಂದೆ ಮತ್ತಷ್ಟು ಹೆಚ್ಚಾಗಲಿವೆ ಎಂದು ಬೂಕನಕೆರೆಯಲ್ಲಿ ಭವಿಷ್ಯ ನುಡಿದ ಕೋಡಿ ಶ್ರೀಗಳು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

Published On - 2:35 pm, Fri, 9 September 22

New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ