ಬೆಂಗಳೂರು -ಮೈಸೂರು ಹೈವೇಯಲ್ಲಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ(Srirangapatna) ತಾಲೂಕಿನ ಗಣಂಗೂರು ಸಮೀಪ ನಡೆದಿದೆ. ಕಾರಿನಲ್ಲಿದ್ದ ಐವರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಇನ್ನು ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ, ಮಾ.14:ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ(Srirangapatna) ತಾಲೂಕಿನ ಗಣಂಗೂರು ಸಮೀಪ ನಡೆದಿದೆ. ಕಾರಿನಲ್ಲಿದ್ದ ಐವರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಇನ್ನು ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
2 ಕೆಎಸ್ಆರ್ಟಿಸಿ ಬಸ್ಗಳು ಡಿಕ್ಕಿ-15 ಜನರಿಗೆ ಗಾಯ
ತುಮಕೂರು: ಜಿಲ್ಲೆಯ ಕೊರಟಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಎರಡು ಕೆಎಸ್ಆರ್ಟಿಸಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಸ್ಥಳೀಯ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೌರಿಬಿದನೂರುನಿಂದ ತುಮಕೂರಿಗೆ ಹೋಗುತ್ತಿದ್ದ ಬಸ್ಗೆ ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡ ಪ್ರಕರಣ ದಾಖಲು ಮಾಡಿದ್ದಾರೆ.
ಇದನ್ನೂ ಓದಿ:ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು
ಮಂಗಳೂರು: ಕಳೆದ 2023 ಡಿಸೆಂಬರ್ 24 ರಂದು ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೇಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬುವವರು ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾ.12 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹಿನ್ನಲೆ NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಿ ಘಟನೆ ಕುರಿತು ಸರಿಯಾದ ರೀತಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:36 pm, Thu, 14 March 24