AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ ಜು.1ರಿಂದ​ ಆರಂಭ, ಇಲ್ಲಿದೆ ಟೋಲ್ ದರ ವಿವರ

Bangalore Mysuru Expressway Toll: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ​ ಆರಂಭಕ್ಕೆ ಸಜ್ಜಾಗಿದೆ. ಇದರಿಂದ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತೊಂದು ಟೋಲ್ ಕಟ್ಟಬೇಕು. ಹಾಗಾದ್ರೆ, ಹೊಸ ಟೋಲ್ ಪ್ಲಾಜಾನಲ್ಲಿ ಯಾವ ವಾಹನಗಳಿಗೆ ಎಷ್ಟು ಹಣ? ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ ಜು.1ರಿಂದ​ ಆರಂಭ, ಇಲ್ಲಿದೆ ಟೋಲ್ ದರ ವಿವರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jun 28, 2023 | 10:25 AM

Share

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ (Bengaluru Mysuru Expressway) ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್ (Toll Plaza)​ ಆರಂಭಕ್ಕೆ ಸಜ್ಜಾಗಿದೆ. ಜುಲೈ 1ರಿಂದ ಮಂಡ್ಯ (Mandya) ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  •  ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.

ಅದೇ ದಿನ ಹೋಗಿಬರುವುದಕ್ಕೆ (up and down Toll)

  • ಕಾರು, ಜೀಪು, ವ್ಯಾನು – 235 ರೂ
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ

ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

  • ಕಾರು, ಜೀಪು, ವ್ಯಾನು – 80 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
  • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:14 am, Wed, 28 June 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ