AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಗೂ ಮುನ್ನಾ ಜಾಮೀಯ ಮಸೀದಿ ಒಳಗೆ ಹೋಗಿ ಹನುಮಾನ್ ಚಾಲೀಸ್ ಪಠಣೆ! ಸಿಸಿ ಟಿವಿ ದೃಶ್ಯ ಟಿವಿ9ಗೆ ಲಭ್ಯ

ಜಾಮೀಯ ಮಸೀದಿಯಲ್ಲಿ ಹನುಮಾನ್ ಚಾಲೀಸ್ ಪಠಿಸೇ ತೀರುತ್ತೇವೆ ಎಂದಿದ್ದ ಭಜರಂಗದಳ, ಅದರಂತೆ ನಿನ್ನೆ ಮಧ್ಯಾಹ್ನ ವಿಡಿಯೋ ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮಸೀದಿ ಒಳಗೆ ಹೋಗಿ ಜೈ ಶ್ರೀರಾಮ್, ಜೈ ಹನುಮಾನ್ ಎಂದು ಕೂಗಿದ್ದರು.

ಪ್ರತಿಭಟನೆಗೂ ಮುನ್ನಾ ಜಾಮೀಯ ಮಸೀದಿ ಒಳಗೆ ಹೋಗಿ ಹನುಮಾನ್ ಚಾಲೀಸ್ ಪಠಣೆ! ಸಿಸಿ ಟಿವಿ ದೃಶ್ಯ ಟಿವಿ9ಗೆ ಲಭ್ಯ
ಮಸೀದಿ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Updated By: sandhya thejappa|

Updated on:Jun 05, 2022 | 2:12 PM

Share

ಮಂಡ್ಯ: ಜಾಮೀಯ ಮಸೀದಿ (Masjid) ಇದ್ದ ಸ್ಥಳದಲ್ಲಿ ಮೂಡಲ ಬಾಗಿಲು ಶ್ರೀ ಆಂಜನೇಯ ದೇವಾಲಯವಿತ್ತು ಎಂದು ಆರೋಪಿಸಿರುವ ಹಿಂದೂ ಸಂಘಟನೆ ಮುಖಂಡರು (Hindu Organizations), ನಿನ್ನೆ (ಜೂನ್ 4) ಶ್ರೀರಂಗಪಟ್ಟಣ ಚಲೋ ಜಾಥಾ ನಡೆಸಿದ್ದರು. ಜಾಮೀಯ ಮಸೀದಿಯಲ್ಲಿ ಹನುಮಾನ್ ಚಾಲೀಸ್ ಪಠಿಸೇ ತೀರುತ್ತೇವೆ ಎಂದಿದ್ದ ಭಜರಂಗದಳ, ಅದರಂತೆ ನಿನ್ನೆ ಮಧ್ಯಾಹ್ನ ವಿಡಿಯೋ ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮಸೀದಿ ಒಳಗೆ ಹೋಗಿ ಜೈ ಶ್ರೀರಾಮ್, ಜೈ ಹನುಮಾನ್ ಎಂದು ಕೂಗಿದ್ದರು. ಮಸೀದಿ ಒಳಗೆ ಹೋಗಿ ಹನುಮಾನ್ ಚಾಲೀಸ್ ಪಠಿಸಿದ್ದ ಇಬ್ಬರು ಹಿಂದಿನ ದಿನವೇ ಅಂದರೆ ಜೂನ್ 3ಕ್ಕೆ ಹೋಗಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಇದಕ್ಕೆ ಸಂಬಂಧಿಸಿದ ಸಿಸಿ ಟಿವಿ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಶ್ರೀರಂಗಪಟ್ಟಣ ಚಲೋ ಬಳಿಕ ಹಿಂದೂಪರ ಸಂಘಟನೆಗಳು ಲೀಗಲ್ ವಾರ್​ಗೆ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಜಿಲ್ಲೆಯ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ನಿಂದ ಹೊಸ ತಂತ್ರ ಸಿದ್ಧವಾಗುತ್ತಿದೆ. ಹಿಂದೂಪರ ಸಂಘಟನೆಗಳು ಮಸೀದಿಯಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಸರ್ವೆ ನಡೆಸುವಂತೆ ಪಟ್ಟು ಹಿಡಿದಿದ್ದವು. ಜಿಲ್ಲಾಡಳಿತ 30 ದಿನದೊಳಗೆ ಪ್ರತಿಕ್ರಿಯೆ ನೀಡದೆ ಹೋದರೆ ಮದರಸ ಖಾಲಿ ಮಾಡಿಸದೆ ಹೋದರೆ ಮತ್ತೊಂದು ಹೋರಾಟಕ್ಕೆ ಚಿಂತನೆ ಮಾಡಲಾಗುತ್ತದೆ ಎಂದು ಗಡುವು ನೀಡಿದ್ದವು.

ಇದನ್ನೂ ಓದಿ: ಅಮೇರಿಕಾದಲ್ಲಿ ಹೆಚ್ಚುತ್ತಿದೆ ಶೂಟೌಟ್ ಪ್ರಕರಣ; ಗ್ಯಾಸ್​​ ಸ್ಟೇಷನ್​ನಲ್ಲಿ ಗುಂಡು ಹಾರಿಸಿ ದರೋಡೆ ಮಾಡಿದ 12 ವರ್ಷದ ಬಾಲಕ

ಇದನ್ನೂ ಓದಿ
Image
ಅಮೇರಿಕಾದಲ್ಲಿ ಹೆಚ್ಚುತ್ತಿದೆ ಶೂಟೌಟ್ ಪ್ರಕರಣ; ಗ್ಯಾಸ್​​ ಸ್ಟೇಷನ್​ನಲ್ಲಿ ಗುಂಡು ಹಾರಿಸಿ ದರೋಡೆ ಮಾಡಿದ 12 ವರ್ಷದ ಬಾಲಕ
Image
India Covid Updates: ಭಾರತದಲ್ಲಿ 4,270 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು
Image
Pranayama: ಹೃದ್ರೋಗದಿಂದ ದೂರವಿರಬೇಕೆ? ಈ ಪ್ರಾಣಾಯಾಮಗಳನ್ನು ಮಾಡಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ RSS ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದೇನು? ಇಲ್ಲಿದೆ ವಿಡಿಯೋ

ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಹಿಂದೂಪರ ಮುಖಂಡರು, ಇಷ್ಟು ದಿನ ಮಾರ್ನಮೆಂಟ್ ಆಕ್ಟ್ ಅಡಿಯಲ್ಲಿ ಬರುತ್ತ. ಇಲ್ಲ ವರ್ಷಿಪ್ ಆಕ್ಟ್ ಬರುತ್ತಾ ಎಂಬ ಗೊಂದಲವಿತ್ತು. ಈ ಹಿನ್ನೆಲೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ರಾಜ್ಯ ಹಿಂದೂ ಸಂಚಾಲಕರು ಹಾಗೂ ರಾಜ್ಯ ಮುಖಂಡರ ಜೊತೆ ಚರ್ಚಿಸಿ ಬಳಿಕ ಹೋರಾಟಕ್ಕೆ ಚಿಂತನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಂದುವರೆದ ಬಿಗಿ ಪೊಲೀಸ್ ಬಂದೋಬಸ್ತ್: 144 ಸೆಕ್ಷನ್ ತೆರವು ಗೊಳಿಸಿದ್ದರೂ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಜಿಲ್ಲಾಡಳಿತ ಬೆಳಗ್ಗೆ 6 ಗಂಟೆಗೆ 144 ಸೆಕ್ಷನ್ ತೆರವುಗೊಳಿಸಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಬ್ಯಾರಿಕೇಡ್ ಹಾಕಿ 2 ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sun, 5 June 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!