Bengaluru-Mysore Expressway: ಸರಣಿ ಅಪಘಾತ: ಮುಂದೆ ತೆರಳುತ್ತಿದ್ದ 3 ಕಾರುಗಳಿಗೆ KSRTC ಬಸ್​ ಡಿಕ್ಕಿ, ಇಬ್ಬರ ಸ್ಥಿತಿ ಗಂಭೀರ

ಮುಂದೆ ತೆರಳುತ್ತಿದ್ದ 3 ಕಾರುಗಳಿಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Bengaluru-Mysore Expressway: ಸರಣಿ ಅಪಘಾತ: ಮುಂದೆ ತೆರಳುತ್ತಿದ್ದ 3 ಕಾರುಗಳಿಗೆ KSRTC ಬಸ್​ ಡಿಕ್ಕಿ, ಇಬ್ಬರ ಸ್ಥಿತಿ ಗಂಭೀರ
ಸರಣಿ ಅಪಘಾತ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 16, 2023 | 7:34 PM

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇನಲ್ಲಿ (Bengaluru-Mysore Expressway) ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿ ಬಳಿ ಅಪಘಾತ ನಡೆದಿದೆ. ಸದ್ಯ ಸ್ಥಳೀಯರು ಗಾಯಗೊಂಡಿರುವವರನ್ನು ಮದ್ದೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮುಂದೆ ತೆರಳುತ್ತಿದ್ದ 3 ಕಾರುಗಳಿಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್​ಜಾಮ್ ಉಂಟಾಗಿದೆ.​ ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: Kolar News: ಮರ್ಯಾದಾ ಹತ್ಯೆ ಪ್ರಕರಣ: ಕರ್ತವ್ಯಲೋಪವೆಸಗಿದ ಪೋಲಿಸ್​ ಅಮಾನತು

ಬೆಂಗಳೂರಿನಲ್ಲಿ 50 ಲಕ್ಷ ರೂ. ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಹಗಲು ವೇಳೆ ದರೋಡೆ ನಡೆಸಿದ್ದ‌ ರೌಡಿ ಶೀಟರ್ ಮತ್ತು ಸಹಚರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆ.ಜೆ.ನಗರ ರೌಡಿಶೀಟರ್ ರಿಯಾಜ್, ಸಹಚರ ಇಮ್ರಾನ್‌ ಬಂಧಿತರು. ತಲೆಮರೆಸಿಕೊಂಡಿರುವ ಉಳಿದ ನಾಲ್ವರಿಗಾಗಿ ಪೊಲೀಸರು ಶೋಧ ಆರಂಭಸಿದ್ದಾರೆ. ಬಂಧಿತರಿಂದ 44 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಉದ್ಯಮಿಯೊಬ್ಬರಿಗೆ ಹಲ್ಲೆ ನಡೆಸಿ 50 ಲಕ್ಷ ರೂ. ದರೋಡೆ ಮಾಡಿದ್ದರು. ಹೊಸಗುಡ್ಡದಹಳ್ಳಿ ಬಳಿ ಕೃತ್ಯವೆಸಗಲಾಗಿತ್ತು. ಉದ್ಯಮಿ ನೀಡಿದ್ದ ದೂರಿನ ಮೇರೆಗೆ ಬ್ಯಾಟರಾಯನಪುರ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ.

ಈಜಲು ಹೋದ ಮೂವರು ಯುವಕರು ನಾಪತ್ತೆ

ಮೈಸೂರು: ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾಗಿದ್ದು, ಒಬ್ಬನ ಶವ ಪತ್ತೆಯಾಗಿದೆ. ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ. ತಾಲ್ಲೂಕಿನ ಮೀನಾಕ್ಷಿ ಪುರ ಕಾವೇರಿ‌ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಭರತ್ (20), ಪ್ರವೀಣ್ (20), ವರುಣ್ (20) ನಾಪತ್ತೆಯಾಗಿದ್ದ ಯುವಕರು.

ಇದನ್ನೂ ಓದಿ: Bengaluru News: ಪ್ರೀತಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿಗಳು. ಒಟ್ಟು 5 ಜನ ಸ್ನೇಹಿತರು ಕಾವೇರಿ ಹಿನ್ನೀರಿಗೆ ಈಜಲು ತೆರಳಿದ್ದರು. ಈಜುವ ವೇಳೆ ನೀರಿನ ಸೆಳೆತಕ್ಕೆ ಮೂವರು ಸಿಲುಕಿದ್ದಾರೆ. ಸದ್ಯ ಭರತ್ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರೆದಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:31 pm, Sun, 16 July 23

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?