AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಸಂಸದ ಪ್ರತಾಪ್ ಸಿಂಹಾಗೆ ಗಡುವು

ಬೆಂಗಳೂರು-ಮೈಸೂರು ಹೆದ್ದಾರಿ ವಿಚಾರವಾಗಿ ಮಾತನಾಡಿದ ಜೆಡಿಎಸ್ ಶಾಸಕ ಪುಟ್ಟರಾಜು, ಮೇಲುಕೋಟೆ ವ್ಯಾಪ್ತಿಯಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಲು ಸಂಸದ ಪ್ರತಾಪ್ ಸಿಂಹ ಅವರಿಗೆ ಗಡುವು ನೀಡಿದ್ದಾರೆ. ಗಡುವು ಮೀರಿದರೆ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಸಂಸದ ಪ್ರತಾಪ್ ಸಿಂಹಾಗೆ ಗಡುವು
ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿಗೆ ಸಂಸದ ಪ್ರತಾಪ್ ಸಿಂಹಾಗೆ ಗಡುವು
TV9 Web
| Edited By: |

Updated on:Nov 19, 2022 | 11:25 AM

Share

ಮಂಡ್ಯ: ಮೇಲುಕೋಟೆ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಭಾರೀ ಗಾತ್ರದ ವಾಹನಗಳು ಸಂಚರಿಸುತ್ತಿರುವುದರಿಂದ ಮೇಲುಕೋಟೆ ಕ್ಷೇತ್ರದ ಹೆದ್ದಾರಿ ವ್ಯಾಪ್ತಿಯಲ್ಲಿನ ಬಹುತೇಕ ರಸ್ತೆಗಳು ಗುಂಡಿಗಳು ಬಿದ್ದು ಹಾಳಾಗಿವೆ. ಹೀಗಾಗಿ ಳನ್ನು ದುರಸ್ತಿ ಮಾಡುವಂತೆ ಆಗ್ರಹಗಳು ಕೇಳಿಬರುತ್ತಿದೆ. ಆದಷ್ಟು ಬೇಗ ಹೆದ್ದಾರಿಯನ್ನು ದುರಸ್ತಿ ಮಾಡಬೇಕು ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್​ ಶಾಸಕ ಸಿ.ಎಸ್.ಪುಟ್ಟರಾಜು (C.S.Puttaraju) ಅವರು ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಗಡುವು ನೀಡಿದ್ದಾರೆ. ಹೆದ್ದಾರಿ ಕೆಲಸ ಮುಗಿದ ಬಳಿಕ ರಸ್ತೆ ದುರಸ್ಥಿ ಮಾಡಿಸಿ ಕೊಡುವುದಾಗಿ ಸಂಸದ ಪ್ರತಾಪ್ ಸಿಂಹ ಅವರು ಮಾತುಕೊಟ್ಟಿದ್ದರು. ಸದ್ಯ ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಬಹುತೇಕ ಅಂತ್ಯಗೊಂಡಿದೆ. ಹೀಗಾಗಿ ಸಂಸದ ಪ್ರತಾಪ್ ಸಿಂಹ ಮಾತು ಉಳಿಸಿಕೊಳ್ಳದೆ ಹೋದರೆ ಪ್ರತಿಭಟನೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಹೆದ್ದಾರಿ ಕಾಮಗಾರಿ ಅವೈಜ್ಞಾನವಾಗಿದೆ, ಸಾವಿರಾರು ಜನರ ಅನ್ನ ಕಿತ್ತುಕೊಂಡಿದೆ. ಪ್ರತಾಪ್ ಸಿಂಹ ಕಾಂಟ್ರ್ಯಾಕ್ಟರ್ ಮೇಲೆ ಈತನೊಬ್ಬ ಕಾಂಟ್ರ್ಯಾಕ್ಟರ್. ರಸ್ತೆಗಳನ್ನು ಗಮನಿಸಿದಾಗ ಕಳಪೆ ಕಾಮಗಾರಿ ಅನ್ನೋದು ಬಟಾ ಬಯಲಾಗಿದೆ. ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಮಾತು ತಪ್ಪಿದರೆ ನಿಮ್ಮ ಮನೆ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು. ಕೆ.ಆರ್.ಎಸ್ ಬೃಂದಾವನಕ್ಕೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಕಳೆದ 15 ದಿನಗಳಿಂದ ಪ್ರವಾಸಿಗರಿಗೆ ನಿರ್ಭಂದ ಹೇರಲಾಗಿದೆ. ಸರ್ಕಾರಕ್ಕೆ ಮತ್ತು ಅರಣ್ಯ ಇಲಾಖೆಯವರಿಗೆ ಮಾನ ಮರ್ಯಾದೆ ಇಲ್ಲ, ಕೇಲವ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: Bengaluru Metro: 2025ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದಲಿದೆ

ವಿಧಾನಸಭೆ ಚುನಾವಣೆ ವಿಚಾರವಾಗಿ ಪಾಂಡವಪುರದಲ್ಲಿ ಮಾತನಾಡಿದ ಶಾಸಕರು, ಮಂಡ್ಯ ಜೆಡಿಎಸ್ ಭದ್ರಕೋಟೆಯಲ್ಲಿ 7ಕ್ಕೆ 7 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ. ಹೋದ ಬಾರಿ ಕಾಂಚಾಣದ (ಹಣ) ಬಲದಿಂದ ಚುನಾವಣೆಯನ್ನ ಕೆ.ಆರ್ ಪೇಟೆಯಲ್ಲಿ ಗೆದ್ದಿದ್ದರು. ಆದರೆ ಈ ಬಾರಿ ಹಾಗೆ ಆಗುವುದಿಲ್ಲ. ಕೆ.ಆರ್ ಪೇಟೆಯಲ್ಲಿ ಸಮರ್ಥ ಅಭ್ಯರ್ಥಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಗ್ರಾಮಕ್ಕೆ ರಸ್ತೆ ಸರಿಪಡಿಸುವಂತೆ ಮನವಿ ಸಲ್ಲಿಸಿ ಸುಸ್ತಾದ ಗ್ರಾಮಸ್ಥರು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಸರಿಪಡಿಸುವಂತೆ ಮನವಿ ಸಲ್ಲಿಸಿ ಗ್ರಾಮಸ್ಥರು ಸುಸ್ತಾಗಿದ್ದಾರೆ. ಸಾಸಲುಕುಂಟೆ ಗ್ರಾಮದಿಂದ ಪೆನ್ನೋಬನಹಳ್ಳಿ, ಲಿಂಗದಹಳ್ಳಿಗೆ ಹೋಗುವ ಮುಖ್ಯ ರಸ್ತೆಯ ಸಂಪೂರ್ಣ ಹದಗೆಟ್ಟಿದ್ದು, ಸುಮಾರು 30 ವರ್ಷಗಳಿಂದ ಡಾಂಬರನ್ನೇ ನೋಡದ ರಸ್ತೆ ಇದಾಗಿದೆ. ಡಾಂಬರು ಹಾಕಿಸುವಂತೆ ಜನಪ್ರತಿನಿಧಿಗಳಿಗೆ ಗ್ರಾಮಸ್ಥರು ಮನವಿ ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ವಿಧಿ ಇಲ್ಲದೆ ಗ್ರಾಮಸ್ಥರೇ ಚಂದಾ ವಸೂಲಿ‌ ಮಾಡಿ ಮಣ್ಣು ಹಾಕಿಸಿದ್ದಾರೆ.

ರಸ್ತೆ ದುರಸ್ತಿಗೆ ಹಣ ಸಂಗ್ರಹ ಮಾಡಿದ ಜನರು ಜೆಸಿಬಿ ಹಾಗೂ ಟ್ರಾಕ್ಟರ್ ಮೂಲಕ ಗುಂಡಿಗಳಿಗೆ ಮಣ್ಣು ಹಾಕಿದ್ದಾರೆ. ಗಡಿಭಾಗದಲ್ಲಿರುವ ನಮ್ಮನ್ನು ಕೇಳುವವರಿಲ್ಲ ಎನ್ನುವಂತಾಗಿದೆ. ರಸ್ತೆ ಸರಿ ಇಲ್ಲದ ಹಿನ್ನೆಲೆ ತಮ್ಮ ಗ್ರಾಮಕ್ಕೆ ನೆಂಟರೂ ಕೂಡ ಬರುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sat, 19 November 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ