ಮಂಡ್ಯ: ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, FIRನಲ್ಲಿ ಉಲ್ಲೇಖಿಸಿದ ಅಂಶವೇ ಬೇರೆ ಅಸಲಿಗೆ ನಡೆದಿದ್ದೆ ಬೇರೆ. ಟಿವಿ9ಗೆ ಕೃತ್ಯ ನಡೆದ ದಿನದ ಎಕ್ಸ್ಕ್ಲೂಸಿವ್ ವಿಡಿಯೋ ಸಿಕ್ಕಿದೆ. ಮೈಸೂರಿನ ದರ್ಶನ್ ಲಾಡ್ಜ್ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ. ಕಾಲೇಜ್ ಲೆಕ್ಚರರ್ ಎಂದು ಲಾಡ್ಜ್ನಲ್ಲಿದ್ದು, ಯುವತಿ ಜೊತೆ ಜಗನ್ನಾಥ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಗ್ಯಾಂಗ್ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್ಗೆ ನುಗ್ಗಿದ್ದಾರೆ. ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ, ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಸದ್ಯ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮೂವರು ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದು, ಮಂಡ್ಯ ಪಶ್ಚಿಮ ವಿಭಾಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಹಿಂದೆ ನಡೆದ ಪ್ರಕರಣ ಹಿನ್ನೆಲೆ
ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ (Mandya) ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ನಿನ್ನೆ ದೂರು ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್ ಮಾಲೀಕರಾಗಿದ್ದಾರೆ.
ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಭಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:48 am, Thu, 8 September 22