ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಅಸಂವಿಧಾನಿಕ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ, ಪ್ರದೀಪ್ ಈಶ್ವರ್ ಅವರನ್ನು NIMHANS ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಮತ್ತು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ವಿಲಕ್ಷಣ ಬೇಡಿಕೆ ಇಟ್ಟಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ
ಪ್ರದೀಪ್ ಈಶ್ವರ್ , ಬಿಜೆಪಿ ಪ್ರತಿಭಟನೆ
Image Credit source: Tv9 kannada
Edited By:

Updated on: Mar 25, 2026 | 3:17 PM

ಮಂಡ್ಯ, ಮಾ.25: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಅಸಂವಿಧಾನಿಕ ಪದಬಳಕೆ ಹಾಗೂ ಲಘುವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿಕೆಗಳು ಸಂಸ್ಕಾರಯುತವಾಗಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ನಿಮಾನ್ಸ್ (NIMHANS) ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಾನಸಿಕವಾಗಿ ಸದೃಢರಾಗಿದ್ದಾರೆ ಎಂಬ ಪ್ರಮಾಣಪತ್ರ ತರುವವರೆಗೆ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂಬ ವಿಲಕ್ಷಣ ಬೇಡಿಕೆಯನ್ನು ಇಡಲಾಗಿದೆ.

ಇದನ್ನೂ ಓದಿ: ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಇಲ್ಲಿದೆ ನೋಡಿ ವಿಡಿಯೋ:

ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಶಾಂತಿ ಕದಡುತ್ತಿದ್ದಾರೆ ಎಂಬ ಕಾರಣ ನೀಡಿ, ಅವರನ್ನು ದಾವಣಗೆರೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಬಹುವಚನ ಬಳಕೆ ಮತ್ತು ಸಂವಿಧಾನಿಕ ಪದಗಳ ಬಗ್ಗೆ ಪಾಠ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Wed, 25 March 26

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us