ಲೋಕಸಭೆ ಸಮರ: ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ಬಿಜೆಪಿ ಅಲರ್ಟ್; ಇಂದು ಕಾರ್ಯಕಾರಿಣಿ ಸಭೆ

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ನಡುವೆ ಮಂಡ್ಯದಲ್ಲಿ ಅಲರ್ಟ್ ಆದ ಬಿಜೆಪಿ ಇಂದು ಕಾರ್ಯಕಾರಿಣಿ ಸಭೆ ನಡೆಸಲು ಮುಂದಾಗಿದೆ. ಮಂಡ್ಯ ಟಿಕೆಟ್ ಸುಮಲತಾ ಅವರಿಗೇ ನೀಡಬೇಕು ಎಂದು ಪಟ್ಟುಹಿಡಿದಿರುವ ಮಾಜಿ ಸಚಿವ ಕೆಸಿ ನಾರಾಯಣಗೌಡ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಲೋಕಸಭೆ ಸಮರ: ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ಬಿಜೆಪಿ ಅಲರ್ಟ್; ಇಂದು ಕಾರ್ಯಕಾರಿಣಿ ಸಭೆ
ಲೋಕಸಭೆ ಸಮರ: ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ಬಿಜೆಪಿ ಅಲರ್ಟ್; ಇಂದು ಕಾರ್ಯಕಾರಿಣಿ ಸಭೆ Image Credit source: bn.wikipedia
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on: Feb 04, 2024 | 7:41 AM

ಮಂಡ್ಯ, ಫೆ.4: ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ನಡುವೆ ಮಂಡ್ಯದಲ್ಲಿ (Mandya) ಅಲರ್ಟ್ ಆದ ಬಿಜೆಪಿ (BJP) ಇಂದು ಕಾರ್ಯಕಾರಿಣಿ ಸಭೆ ನಡೆಸಲು ಮುಂದಾಗಿದೆ. ಮಂಡ್ಯ ಟಿಕೆಟ್ ಸುಮಲತಾ ಅವರಿಗೇ ನೀಡಬೇಕು, ಜೆಡಿಎಸ್​ಗೆ ಯಾಕೆ ನೀಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ಕೆಸಿ ನಾರಾಯಣಗೌಡ (KC Narayana Gowda) ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಚುನಾವಣೆಗೆ ತಯಾರಿ ನಡೆಸಲು ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಾಂಡವಪುರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಸಭೆಯಲ್ಲಿ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಪ್ರೀತಮ್ ಗೌಡ, ರಾಮದಾಸ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಜೆಡಿಎಸ್​ಗೆ ಕ್ಷೇತ್ರ ಬಿಟ್ಟುಕೊಡದಿರುವ ಹಾಗೂ ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವಂತೆ ಬಗ್ಗೆ ರಾಜ್ಯ ನಾಯಕರಿಗೆ ಒತ್ತಡ ಹಾಕುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ನಾರಾಯಣಗೌಡ ಸೇರಿದಂತೆ ಹಲವು ಮುಖಂಡರು ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಭೆಯಲ್ಲಿ ಪ್ರಮುಖ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಜಿಲ್ಲಾಧ್ಯಕ್ಷರು ಅಭಿಪ್ರಾಯ ಸಂಗ್ರಹಿಸಿ ರಾಜ್ಯ ನಾಯಕರ ಗಮನಕ್ಕೆ ತರಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿ ಕುಮಾರಸ್ವಾಮಿ ನಡುವೆ ಪೈಪೋಟಿ ನಡೆಯುತ್ತಿದೆ. ಕುಮಾರಸ್ವಾಮಿ ಅವರನ್ನು ಕೇಂದ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡುಲು ಎನ್​ಡಿಎ ನಿರ್ಧರಿಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅಲ್ಲದೆ, ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಒತ್ತಾಯಗಳು ಕೇಳಿಬಂದಿದ್ದರೂ ಅವರು ಸ್ಪರ್ಧೆಯಿಂದ ದೂರ ಸರಿದಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ನಾಯಕರು ದಂಬಾಲು ಬಿದಿದ್ದಾರೆ.

ಇದನ್ನೂ ಓದಿ: ಮಂಡ್ಯದಿಂದಲೇ ಸ್ಪರ್ಧಿಸುವ ಹಟಹಿಡಿದಿರುವ ಸುಮಲತಾ ಅಂಬರೀಶ್ ಆಪ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಶುರುಮಾಡಿದ ದೇವೇಗೌಡ!

ಆದರೆ, ಇದಕ್ಕೆ ಜಿಲ್ಲೆಯ ಬಿಜೆಪಿ ನಾಯಕರು ಒಪ್ಪುತ್ತಿಲ್ಲ. ಮಂಡ್ಯ ಕ್ಷೇತ್ರದ ಟಿಕೆಟ್ ಬಿಡಲು ಸುಮಲತಾ ಅವರಿಗೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಸದೆ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು. ಮಂಡ್ಯವನ್ನ ಜೆಡಿಎಸ್ ನಾಯಕರಿಗೆ ಯಾಕೆ ಕೊಡಬೇಕು ಎಂದು ನಾರಾಯಣಗೌಡ ಹೇಳಿಕೆ ನಿಡಿದ್ದರು. ಜಿಲ್ಲೆಯಲ್ಲಿ ಬಿಜೆಪಿ ಚಿಗುರುತ್ತಿದೆ, ನಾನು ಶಾಸಕ ಆಗಿದ್ದವನು. ಹೈಕಮಾಂಡ್ ಸುಮಲತಾ ಸ್ಪರ್ಧೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದರು.

ಅಲ್ಲದೆ, ಜನವರಿ 25 ರಂದು ಸುಮಲತಾರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ವೇಳೆ ಬಿಜೆಪಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ತೆಗೆದುಕೊಂಡಿದ್ದಾರೆ. ಅಲ್ಲದೇ ಮಂಡ್ಯ ಬಿಟ್ಟು ನನಗೆ ಬೇರೆ ಕಡೆ ಟಿಕೆಟ್‌ ನೀಡಿದರೆ ರಾಜಕೀಯವೇ ಬೇಡ ಎಂದಿದ್ದಾರೆ. ಭೇಟಿ ಬಗ್ಗೆ ಮಾತನಾಡಿದ್ದ ನಾರಾಯಣಗೌಡ, ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಈ ಬಗ್ಗೆ ನಮ್ಮ ವಿರೋಧ ಇಲ್ಲ. ಸುಮಲತಾ ಅವರು ಕುಮಾರಸ್ವಾಮಿ ಅವರ ಜೊತೆ ಮಾತುಕತೆ ಮಾಡಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ. ಅದೇ ವಿಚಾರದ ಬಗ್ಗೆ ಮಾತನಾಡಲು ಬಂದಿದ್ದೇವೆ ಎಂದಿದ್ದರು.

ಇನ್ನೋಂದೆಡೆ, ಯಾರೇನೇ ಮೈತ್ರಿ ಮಾಡಿಕೊಂಡರೂ ನನ್ನ ನಿಲುವಿಗೆ ನಾನು ಬದ್ಧ ಎಂದು ಸುಮಲತಾ ಅವರು ಕಡ್ಡಿಮುರಿದ ಹಾಗೆ ಹೇಳಿಕೆ ನೀಡಿದ್ದರು. ಎಲ್ಲೂ ನನ್ನ ಬಗ್ಗೆ ಕಳಂಕ ಕಪ್ಪು ಚುಕ್ಕೆ ಇಲ್ಲ. ಪಾರ್ಲಿಮೆಂಟ್ ನಲ್ಲಿ ಮಾತಾಡಿರುವುದು ಎಲ್ಲರಿಗೂ ಗೊತ್ತಿದೆ. ಬಿಜೆಪಿನೇ ಮಂಡ್ಯ ಸೀಟು ಉಳಿಸಿಕೊಳ್ಳುತ್ತೆ ಅನಿಸುತ್ತದೆ. ನಾನು ಕಾಂಗ್ರೆಸ್​ನಿಂದ ಸ್ಪರ್ಧಿಸಲು ಪ್ರಯತ್ನಿಸಿಲ್ಲ. ನನ್ನ ಬೆಂಬಲಿಗರಲ್ಲಿ ಇರುವ ಸುಮಾರು ಜನ ಕಾಂಗ್ರೆಸ್ ಕಾರ್ಯಕರ್ತರು ಅವರ ಪಕ್ಷಕ್ಕೆ ಕರೆಯುತ್ತಿದ್ದಾರೆ. ಆದರೆ, ನನಗೆ ಒಂದು ಕಮಿಟ್ ಮೆಂಟ್ ಇದೆ. ಮೋದಿ ನೇತೃತ್ವ ಸರಿ ಅನ್ನಿಸುತ್ತಿದೆ ಎಂದು ಹೇಳುವ ಮೂಲಕ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಬಿಜೆಪಿ ಟಿಕೆಟ್ ನೀಡದಿದ್ದರೂ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಹಾಲಿ ಸಂಸದೆ ಪಟ್ಟುಹಿಡಿದಿರುವ ಹಿನ್ನೆಲೆಯಲ್ಲಿ ಅವರ ಆಪ್ತರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಯತ್ನ ದೇವೇಗೌಡರು ಮಾಡುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಸಭೆಯೊಂದರಲ್ಲಿ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದರನ್ನು ಹೊಗಳಿ ತಮ್ಮೆಡೆ ವಾಲುವಂತೆ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ