ರೂಲ್ಸ್ ಮಾಡಿದವರಿಂದಲೇ ರೂಲ್ಸ್ ಬ್ರೇಕ್! ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಬೃಹತ್ ಸಭೆ
ಕೊರೊನಾ ಕಾರಣ ರಾಜ್ಯ ಸರ್ಕಾರ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ನಿಯಮಗಳನ್ನು ಜಾರಿಗೆ ತಂದವರೇ ಇಲ್ಲಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸಿ ಬೃಹತ್ ಜಾಥಾ ನಡೆಸಿದ್ದಾರೆ.
ಮಂಡ್ಯ: ಕೊರೊನಾ (Coronavirus) ಮೂರನೇ ಅಲೆ ಭೀತಿ ಹಿನ್ನೆಲೆ ಜಿಲ್ಲೆಯಲ್ಲಿ ರಾಜಕೀಯ ಸಭೆ, ಸಮಾರಂಭಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಮಂಡ್ಯದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ನಗರದ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆಯುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ. ದೈಹಿಕ ಅಂತರ ಮರೆತು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕೊವಿಡ್ ರೂಲ್ಸ್ ಉಲ್ಲಂಘಿಸಿದಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್ಕುಮಾರ್ಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದೆ. ಆದರೆ ಬಿಜೆಪಿ ನಾಯಕರು ನೊಟೀಸ್ಗೆ ಕ್ಯಾರೆ ಎನ್ನುತ್ತಿಲ್ಲ.
ಕೊರೊನಾ ಕಾರಣ ರಾಜ್ಯ ಸರ್ಕಾರ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ನಿಯಮಗಳನ್ನು ಜಾರಿಗೆ ತಂದವರೇ ಇಲ್ಲಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸಿ ಬೃಹತ್ ಜಾಥಾ ನಡೆಸಿದ್ದಾರೆ. ತೆರೆದ ಜೀಪಿನಲ್ಲಿ ಬಿಜೆಪಿ ನಾಯಕರು ಮೆರವಣಿಗೆಗೆ ನಡೆಸುತ್ತಿದ್ದಾರೆ. ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದಾರೆ.
ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಬಿಜೆಪಿ ನಾಯಕರು ಬೃಹತ್ ಸಭೆ ನಡೆಸಲು ಆಯೋಜನೆ ಮಾಡಿದ್ದಾರೆ. 30ಕ್ಕೂ ಹೆಚ್ಚು ಜನ ಸೇರುವ ಸಭೆ ಸಮಾರಂಭವನ್ನು ಮಂಡ್ಯ ಜಿಲ್ಲಾಡಳಿತ ನಿರ್ಬಂಧಿಸಿದೆ. ಆದರೆ ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೆ ಎನ್ನದೇ ಬಿಜೆಪಿ ನಾಯಕರು ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಸಭೆ ನಡೆಸುತ್ತಿದ್ದಾರೆ. ಜೀಪ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆರವಣಿಗೆ ಮಾಡಿದರು. ಈ ವೇಳೆ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಸಚಿವ ಎ.ಮಂಜು ಇತರೆ ಮುಖಂಡರ ಸಾಥ್ ನೀಡಿದರು.
ಇದನ್ನೂ ಓದಿ
(BJP leaders are holding a meeting in violation of Corona rules in mandya)
Published On - 12:41 pm, Wed, 25 August 21