ಮಂಡ್ಯ, ಆ.10: ಸಕ್ಕರೆ ನಾಡು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ(N. Chaluvaraya Swamy) ಅವರ ಪರ ಹಾಗೂ ವಿರುದ್ಧ ಪ್ರತಿಭಟನೆ ನಡೆದಿದೆ. ಮಂಡ್ಯ ಬಿಜೆಪಿ ಕಾರ್ಯಕರ್ತರು(BJP Protest) ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ (Pay CS)ಎಂಬ ಫೋಸ್ಟರ್ ಅಂಡಿಸಿ ಅಭಿಯಾನ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದೆಡೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪರ ಕಾಂಗ್ರೆಸ್ ಪ್ರತಿಭಟನೆ(Congress Protest) ನಡೆಸಿದೆ.
ಬಿಜೆಪಿ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ ಎಂಬ ಫೋಸ್ಟರ್ ಅಂಡಿಸಿ ಅಭಿಯಾನ ಮಾಡಿದರು. ‘ಸ್ಕಾೃನ್ ಮಾಡಿ ನೋಡಿ, ಚೆಲುವ ಚನ್ನಿಗರಾಯನ ಭ್ರಷ್ಟಾಚಾರ ಬರಬಹುದು’ ಎನ್ನುವ ಶೀರ್ಷಿಕೆಯಡಿ ವ್ಯಂಗ್ಯ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದರು. ಇನ್ನು ಮತ್ತೊಂದೆಡೆ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಱಲಿ ನಡೆಸಿದರು. ಸಚಿವ ಎನ್.ಚಲುವರಾಯಸ್ವಾಮಿ ಏಳಿಗೆ ಸಹಿಸದೆ ಷಡ್ಯಂತ್ರ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಮಾಜಿ ಶಾಸಕ ಸುರೇಶ್‌ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದರು.
ಸಚಿವ ಚಲುವರಾಯಸ್ವಾಮಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಚಿವರ ವಿರುದ್ಧದ ಷಡ್ಯಂತ್ರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ತಮ್ಮ ಹಿಡಿತದಲ್ಲಿದ್ದ ಮಂಡ್ಯ ಜಿಲ್ಲೆಯನ್ನ ಕಾಂಗ್ರೆಸ್ ವಶಕ್ಕೆ ಪಡೆದ ಹಿನ್ನೆಲೆ ಹತಾಶೆಯಿಂದ ಚಲುವರಾಯಸ್ವಾಮಿ ನಾಯಕತ್ವಕ್ಕೆ ಕಳಂಕ ತರಲು ಯತ್ನ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ
ಕೃಷಿ ಇಲಾಖೆಯ ಅಧಿಕಾರಿಗಳು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಲಕ್ಷಾಂತರ ರೂ ಕೊಡುವಂತೆ ಒತ್ತಡ ಹಾಕಿಸುತ್ತಿದ್ದು, ಇದರ ಬಗ್ಗೆ ಕ್ರಮ ವಹಿಸದಿದ್ದರೆ ಕುಟುಂಬದವರೊಂದಿಗೆ ವಿಷ ಕುಡಿಯುವುದಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಣ ಕೇಳಿದ್ದಾರೆಂದು ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಇಬ್ಬರು ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ