ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ಇಂದು ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಱಲಿ ನಡೆಯಿತು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸರ್ಕಾರಕ್ಕೆ ಜನರ ಶಾಪ ಮಾತ್ರವಲ್ಲ, ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದರು.

ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ
ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on: Feb 06, 2024 | 4:42 PM

ಮಂಡ್ಯ, ಫೆ.6: ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಂಡ್ಯದಲ್ಲಿ (Mandya) ಬಿಜೆಪಿ (BJP) ರೈತ ಮೋರ್ಚಾ ಪ್ರತಿಭಟನೆ ನಡೆಸಿತು. ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು.

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿದ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರ ಗುರಿಯಾಗಿಲ್ಲ, ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ

ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ‌. ಇದರಿಂದ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ. ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ತರಕಾರಿಗೆ ಬೆಲೆ ನಿಗದಿಗೆ ರೈತರ ಪ್ರತಿಭಟನೆ

ಗದಗ: ತರಕಾರಿಗೆ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಗಳ‌ ಈಡೇರಿಕೆಗೆ ಒತ್ತಾಯಿಸಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ತರಕಾರಿಗಳನ್ನು ರಸ್ತೆಗೆ ಚೆಲ್ಲಿ ರೈತರು ಪ್ರತಿಭಟನೆ ನಡೆಸಿದರು. ತರಕಾರಿ ಬೆಲೆ ನಿಗದಿ, ತರಕಾರಿ ಸಂಗ್ರಹಕ್ಕೆ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ರೈತರು ಒತ್ತಾಯಿಸಿದ್ದಾರೆ. ಎಪಿಎಂಸಿಯಲ್ಲಿ ರೈತರಿಗೆ ಶೋಷಣೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬರಪರಿಹಾರ ಇನ್ನೂ ಬಹುತೇಕ ರೈತರಿಗೆ ಸಿಕ್ಕಿಲ್ಲ. ಕೂಡಲೇ ಸರ್ಕಾರ ಬರ ಪರಿಹಾರ ನೀಡಬೇಕು ಅಂತ ಒತ್ತಾಯಿಸಿದ ರೈತರು, ಭೀಕರ ಬರಗಾದ ಸಂದರ್ಭದಲ್ಲಿ ಬ್ಯಾಂಕ್​ಗಳು ನೋಟಿಸ್ ನೀಡಿ ಕಿರುಕುಳ ನೀಡುತ್ತಿವೆ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?