ಮಂಡ್ಯ, ಅ.31: ಮಂಡ್ಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಸಿಎಂಗೆ ವ್ಯಂಗ್ಯವಾಗಿ ಸ್ವಾಗತ ಕೋರಿದೆ. ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂಗೆ ಸ್ವಾಗತ (Cauvery Water Dispute) . ರೈತರ ಪಂಪ್ ಸೆಟ್ಗಳಿಗೆ ಸರಿಯಾಗಿ ಕರೆಂಟ್ ನೀಡದೆ, ರೈತರ ಬಾಳನ್ನು ಕತ್ತಲೆ ಮಾಡಿ ಜಿಲ್ಲೆಗೆ ಆಗಮಿಸ್ತಿರುವ ಸಿಎಂಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ಅನೇಕ ಪೋಸ್ಟ್ಗಳನ್ನು ಹಾಕಿ ವ್ಯಂಗ್ಯವಾಡಿದೆ.
ಇನ್ನು ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಮಂಡ್ಯಕ್ಕೆ ಸಿಎಂ ಭೇಟಿ ಹಿನ್ನೆಲೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲು ಮುಂದಾಗಿದೆ. ರೈತರ ಪ್ರತಿಭಟನೆ ನಡೆಯುವ ಸ್ಥಳದ ಮುಂಭಾಗದ ರಸ್ತೆಯ ಮೂಲಕವೇ ಸಿಎಂ ಸಿದ್ದರಾಮಯ್ಯ ಸಂಚರಿಸಲಿದ್ದಾರೆ. ಹೀಗಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂಗೆ ಮುತ್ತಿಗೆ ಸೇರಿ ಇನ್ಯಾವುದೇ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪತ್ನಿ ಸ್ವರ್ಧೆ? ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಧನಲಕ್ಷ್ಮೀಗೆ ಫಿಕ್ಸ್?
ಸಕ್ಕರೆ ನಗರಿ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಸಿಎಂ ಆದ ಬಳಿಕ ಎರಡನೇ ಬಾರಿಗೆ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಹಾಗೂ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಳಿಯಲಿದ್ದು ಮೊದಲಿಗೆ ಮಂಡ್ಯದ ಕಲ್ಲಹಳ್ಳಿ ಬಳಿ ಖಾಸಗಿ ಕಲ್ಯಾಣ ಮಂಪಟದಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಅಂತರ ಜಿಲ್ಲಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಇನ್ನು ಮೊದಲ ಬಾರಿಗೆ ಸಭೆ ನಡೆಸಲು ಆಗಮಿಸುತ್ತಿರೋ ಸಿಎಂಗೆ, ಕೈ ಪಡೆ
ಭರ್ಜರಿ ಸ್ವಾಗತ ಕೋರಲು ಕೂಡ ಸಜ್ಜಾಗಿದೆ. ಮಂಡ್ಯದ ಫ್ಯಾಕ್ಟರಿ ಸರ್ಕಲ್ ನಿಂದ ಸಂಜಯ್ ಸರ್ಕಲ್ ವರೆಗೂ ಬೃಹತ್ ಮೆರವಣಿಗೆ ನಡೆಸಲು ಕೂಡ ಪ್ಯ್ಲಾನ್ ಮಾಡಿದೆ.
ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:48 am, Tue, 31 October 23