AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ

ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ಅದರಂತೆ ಇಂದು ಪ್ರತಿಭಟನಾಕಾರರು ಕಾವೇರಿ ನೀರಿಗೆ ರಕ್ತ ಸುರಿಯಲು ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇದಕ್ಕೆ ಅನುಮತಿ ಇಲ್ಲ, ಪ್ರತಿಭಟನೆ ಬೇರೆ ರೀತಿಯಲ್ಲಿ ಮಾಡಿ ಎಂದು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ ಘಟನೆ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ
ಮಂಡ್ಯದಲ್ಲಿ ರಕ್ತ ಚಳುವಳಿ
ಪ್ರಶಾಂತ್​ ಬಿ.
| Edited By: |

Updated on: Sep 30, 2023 | 3:36 PM

Share

ಮಂಡ್ಯ, ಸೆ.30: ತಮಿಳುನಾಡಿಗೆ ಕಾವೇರಿ ನೀರು(Cauvery) ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶಕ್ಕೆ ನಿನ್ನೆ(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿತ್ತು. ಇದೀಗ ಮತ್ತೆ 3 ಸಾವಿರ ಕ್ಯೂಸೆಕ್​ ನೀರು ತಮಿಳುನಾಡಿಗೆ ಬಿಡುವಂತೆ ಕಾವೇರಿ ಪ್ರಾಧಿಕಾರ ಆದೇಶ ನೀಡಿದೆ. ಈ ಹಿನ್ನೆಲೆ ಇಂದು (ಸೆ.30) ಮಳವಳ್ಳಿ(Malavalli)ಯಲ್ಲಿ ರಕ್ತ ಚಳುವಳಿ ನಡೆಸಲಾಗಿದೆ. ಹೌದು, ಬೈಕ್ ರ್ಯಾಲಿ ಮೂಲಕ ಕಾವೇರಿ ನದಿ ಬಳಿಗೆ ರಕ್ತ ತಂದ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು, ಕಾವೇರಿ ನದಿಗೆ ರಕ್ತ ಸುರಿಯಲು ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಸತ್ತೆಗಾಲ ಸೇತುವೆ ಬಳಿ ನಡೆದಿದೆ.

ರಕ್ತ ಸುರಿಯಲು ಬಿಡದೆ ತಡೆದ ಪೊಲೀಸರು

ಹೌದು, ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ಅದರಂತೆ ಇಂದು ಪ್ರತಿಭಟನಾಕಾರರು ಕಾವೇರಿ ನೀರಿಗೆ ರಕ್ತ ಸುರಿಯಲು ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇದಕ್ಕೆ ಅನುಮತಿ ಇಲ್ಲ, ಪ್ರತಿಭಟನೆ ಬೇರೆ ರೀತಿಯಲ್ಲಿ ಮಾಡಿ ಎಂದು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದರು. ಈ ವೇಳೆ ‘ ಅವರಿಗೆ TMC ಗಟ್ಟಲೇ ನೀರು ಹೋಗುತ್ತಿದ್ದು, ಕೆಆರ್​ಎಸ್ ಬರಿದಾಗುತ್ತಿದೆ. ಅದನ್ನ ಯಾರು ತಡೆಯೋರಿಲ್ಲ. ನಮ್ಮ ರಕ್ತ ಕೊಡ್ತೀವಿ ಅಂದ್ರೆ ತಡೆಯಲು ಬರ್ತೀರಾ? ಎಂದು ಪೊಲೀಸರಿಗೆ ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ. ಬಳಿಕ ರಕ್ತ ಇಲ್ಲೇ ಕೊಟ್ಟು, ನದಿ ಬಳಿ ಹೋಗಿ ಎಂದು ಖಾಕಿ ಸೂಚಿಸಿದ ಸನ್ನವೇಶ ನಡೆಯಿತು.

ಇದನ್ನೂ ಓದಿ:ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ​ ರಾಜ್ಯ ಸರ್ಕಾರ

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಹತ್ವ ಸಭೆ

ಇನ್ನು ಕಾವೇರಿಗಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮಹತ್ವದ ಸಭೆ ನಡೆಯಲಿದೆ. ಹಾಲಿ & ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರಿಗೆ ಈ ಸಭೆಯಲ್ಲಿ ಆಹ್ವಾನಿಸಲಾಗಿದ್ದು, ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಈ ವೇಳೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲವೆಂದು ಸರ್ಕಾರ ದೃಢ ನಿರ್ಧಾರ ಕೈಗೊಳ್ಳುವಂತೆ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಲಿದೆ. CWMA, CWRC ರದ್ದತಿಗೆ ಸರ್ಕಾರ ಕಾನೂನು ಹೋರಾಟ ಮಾಡಬೇಕು. ಈ ವಿಚಾರಗಳ ಬಗ್ಗೆ ಇಂದಿನ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು