ಮಂಡ್ಯ: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೇ 16 ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪಕ್ಷದ ಮುಖಂಡರ ಜೊತೆ ಪ್ರಚಾರ ಸಭೆ ನಡೆಸಿದ್ದರು. ಈ ಮೂಲಕ ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು. ಈ ಕಾರಣ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. IPC ಸೆಕ್ಷನ್ 1860 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಅಶ್ವತ್ಥ್ ನಾರಾಯಣ್ ವಿರುದ್ಧ ಕೇಸ್ ದಾಖಲಿಸಲಾಗಿದೆ. 1989ರ ಅಡಿ ಮಂಡ್ಯದ ಪೂರ್ವ ಠಾಣೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Virat Kohli: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಸಂಭ್ರಮಿಸಿದ್ದು ಹೇಗೆ ನೋಡಿ
ಮಂಡ್ಯದ ಮಹಿಳಾ ಕಾಲೇಜು ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಅಶ್ವತ್ಥ್ ನಾರಾಯಣ್ ಚುನಾವಣಾ ಪ್ರಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಕೋರ್ಟ್ನಲ್ಲಿ ಖಾಸಗಿ ಮೊಕದ್ದಮೆ ದಾಖಲಾಗಿದ್ದು, FIR ದಾಖಲಿಸಿ, ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ.
ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ಸಚಿವ ಅಶ್ವಥ್ ನಾರಾಯಣಗೆ ನೋಟಿಸ್ ಜಾರಿ!
ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣಗೆ (Ashwath Narayan) ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ನೋಟಿಸ್ (Notice) ಜಾರಿಯಾಗಿದೆ. ಮೇ 16 ರಂದು ಮಂಡ್ಯ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವರು ಭೇಟಿ ಕೊಟ್ಟಿದ್ದರು. ಮಿಮ್ಸ್ ಸೇರಿದಂತೆ ಮಂಡ್ಯದ ಹಲವೆಡೆ ಭೇಟಿ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಕಾಂಗ್ರೆಸ್ ನೀಡಿದ ದೂರಿನ ಅನ್ವಯ ಜಿಲ್ಲಾಡಳಿತ ವರದಿ ತರೆಸಿಕೊಂಡಿದೆ. ತಹಶೀಲ್ದಾರ್ ನೀಡಿದ ವರದಿಯಲ್ಲಿ ಮೇಲ್ನೊಟಕ್ಕೆ ನೀತಿ ಸಂಹಿತೆ ಉಲ್ಲಂಘಿಸಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವರಿಗೆ ನೋಟಿಸ್ ನೀಡಿ ಸ್ಪಷ್ಟನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಕೇಳಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.