AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕಮ್ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ: ಚುರುಕುಗೊಂಡ ವಿಚಾರಣೆ

ಜಗನ್ನಾಥ ಶೆಟ್ಟಿಯಂತೆ ಮತ್ತಷ್ಟು ಜನರಿಗೆ ಜೇನಿನ ಜಾಲದಲ್ಲಿ ಸಿಲುಕಿಸಿರುವ ಶಂಕೆ ಹಿನ್ನೆಲೆ ಆರೋಪಿ ಸಲ್ಮಾಭಾನು ವಿಚಾರಣೆ ಚುರುಕುಗೊಂಡಿದೆ.

ಉದ್ಯಮಿ ಕಮ್ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ: ಚುರುಕುಗೊಂಡ ವಿಚಾರಣೆ
ಆರೋಪಿ ಸಲ್ಮಾ ಭಾನು, ಉದ್ಯಮಿ ಕಮ್ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ
TV9 Web
| Edited By: |

Updated on: Aug 22, 2022 | 10:06 AM

Share

ಮಂಡ್ಯ: ಉದ್ಯಮಿ ಕಮ್ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ (Honeytrap) ಪ್ರಕರಣ ಸಂಬಂಧ ವಿಚಾರಣೆ ಚುರುಕುಗೊಂಡಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಡ್ರಿಲ್ ಮಾಡುತ್ತಿದ್ದಾರೆ. ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಸದ್ಯ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಆರೋಪಿತೆ ಸಲ್ಮಾ ಭಾನುವನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. ಜಗನ್ನಾಥ ಶೆಟ್ಟಿಯಂತೆ ಮತ್ತಷ್ಟು ಜನರಿಗೆ ಜೇನಿನ ಜಾಲದಲ್ಲಿ ಸಿಲುಕಿಸಿರುವ ಶಂಕೆ ಹಿನ್ನೆಲೆ ಆರೋಪಿ ಸಲ್ಮಾಭಾನು ವಿಚಾರಣೆ ಚುರುಕುಗೊಂಡಿದೆ. ಆಕೆಗೆ ಸಹಕಾರ ಕೊಟ್ಟವರು, ವಿಡಿಯೋ ರೆಕಾರ್ಡ್ ಮಾಡಿದವರು, ಹಣ ಪೀಕಿದವರು ಯಾರ್ಯಾರೆಂದು ಪೊಲೀಸರು ವಿಚಾರಣೆ ಮಾಡಲಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಸುಳಿಯಲ್ಲಿ ಸಿಲುಕಿದ ಆರ್​ಎಸ್​ಎಸ್, ಬಿಜೆಪಿ ಮುಖಂಡ; ಚಿನ್ನದ ವ್ಯಾಪಾರಿಯಿಂದ 50 ಲಕ್ಷ ಹಣವನ್ನು ಸುಲಿಗೆ ಮಾಡಿದ ಆರೋಪಿಗಳು

ಪ್ರಕರಣ ಹಿನ್ನೆಲೆ ಏನು?

ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ (Mandya) ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ನಿನ್ನೆ ದೂರು ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್​ ಮಾಲೀಕರಾಗಿದ್ದಾರೆ.

ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್​ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್​ ರೂಮ್​ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್​ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ನಗರದ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಣೆ

ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಭಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.