AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪ ಚುನಾವಣೆಗೆ ಬಹುತೇಕ ಅಭ್ಯರ್ಥಿ ಫಿಕ್ಸ್, ಜೆಡಿಎಸ್ ಪಾಲಾದ ಟಿಕೆಟ್

ಚನ್ನಪಟ್ಟಣದಿಂದ ಸಿಪಿ ಯೋಗೇಶ್ವರ್ ಅವರನ್ನು ಸ್ಪರ್ಧೆ ಮಾಡಿಸುವ ಬಗ್ಗೆ ಬಿಜೆಪಿ ನಾಯಕರು ಹೆಚ್​ಡಿ ಕುಮಾರಸ್ವಾಮಿ ಮನವೊಲಿಕೆಗೆ ಮುಂದಾಗಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕುಮಾರಸ್ವಾಮಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದು ಇದೀಗ ಚನ್ನಪಟ್ಟಣ ಉಪ ಚುನಾವಣೆ ಜೆಡಿಎಸ್ ಪಾಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆಗೆ ಬಹುತೇಕ ಅಭ್ಯರ್ಥಿ ಫಿಕ್ಸ್, ಜೆಡಿಎಸ್ ಪಾಲಾದ ಟಿಕೆಟ್
ಹೆಚ್​ಡಿ ಕುಮಾರಸ್ವಾಮಿ
Sunil MH
| Edited By: |

Updated on:Sep 02, 2024 | 9:35 AM

Share

ಮಂಡ್ಯ, ಸೆಪ್ಟೆಂಬರ್.02: ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಉಪ ಚುನಾವಣೆ (Channapatna by-election) ಅಖಾಡ ರಂಗೇರುತ್ತಿದೆ. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜೆಡಿಎಸ್ (JDS) ಬಿಜೆಪಿ (BJP) ನಡುವೆ ಇದ್ದ ಟಿಕೆಟ್ ಗೊಂದಲಕ್ಕೆ ಬಹುತೇಕ ತೆರೆ ಬಿದ್ದಿದೆ. ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರವನ್ನ ಬಿಟ್ಟುಕೊಡದಿರಲು ಜೆಡಿಎಸ್ ನಿರ್ಧಾರ ಮಾಡಿದ್ದು ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ.

ಚನ್ನಪಟ್ಟಣದಿಂದ ಸಿಪಿ ಯೋಗೇಶ್ವರ್ ಅವರನ್ನು ಸ್ಪರ್ಧೆ ಮಾಡಿಸುವ ಬಗ್ಗೆ ಬಿಜೆಪಿ ನಾಯಕರು ಹೆಚ್​ಡಿ ಕುಮಾರಸ್ವಾಮಿ ಮನವೊಲಿಕೆಗೆ ಮುಂದಾಗಿದ್ದರು. ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಹೇಳಿಕೆಯಿಂದ ತೀವ್ರ ಸಮಾಧಾನಗೊಂಡಿದ್ದಾರೆ. ಹೀಗಾಗಿ ಸಿಪಿವೈಗೆ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಮಾಡಲು ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.

ಸದ್ಯ ಬಿಜೆಪಿ ಹೈಕಮಾಂಡ್ ನಾಯಕರಿಂದ ಚನ್ನಪಟ್ಟಣ ಜೆಡಿಎಸ್​ಗೆ ಬಿಟ್ಟುಕೊಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ದರಿಂದ ಜೆಡಿಎಸ್ ನಿಂದ ಅಭ್ಯರ್ಥಿ ಕಣಗಿಳಿಸಿ ಮತ್ತೆ ಗೆಲುವಿನ ಬಾವುಟ ಹಾರಿಸಲು ಕುಮಾರಸ್ವಾಮಿ ಸಿದ್ದತೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರಕ್ಕೆ ತಾನೇ ಪಕ್ಷದ ಅಭ್ಯರ್ಥಿ ಎಂದು ಪುನರುಚ್ಛರಿಸಿದ ಡಿಸಿಎಂ ಡಿಕೆ ಶಿವಕುಮಾರ್!

ಉಪ ಚುನಾವಣಾಯಲ್ಲಿ ಗಣೇಶ ರಾಜಕಾರಣ

ಮೈತ್ರಿ ಟಿಕೆಟ್ ಆಕಾಂಕ್ಷಿಗಳಾದ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್‌ನ ಎಚ್.ಸಿ. ಜಯಮುತ್ತು ಅವರು ಗೌರಿ ಗಣೇಶ ಹಬ್ಬಕ್ಕೆ ಸಾವಿರಾರು ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ. ಸಿ.ಪಿ. ಯೋಗೇಶ್ವರ್ ಕ್ಷೇತ್ರದಲ್ಲಿ ಹಿಡಿತ ಇಟ್ಟುಕೊಳ್ಳಲು ಬೇಕಾದ ಎಲ್ಲಾ ಮಾರ್ಗ ಅನುಸರಿಸುತ್ತಿದ್ದಾರೆ. ಗೌರಿ ಗಣೇಶ ಹಬ್ಬದಂದು ಸಾವಿರ ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ.

ಎರಡು ಬಾರಿ ಗೆದ್ದಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರವನ್ನು ಜೆಡಿಎಸ್‌ ಬಳಿಯೇ ಉಳಿಸಿಕೊಳ್ಳಲು ನಿರ್ಧರಿಸಿದ್ದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ನಿಖಿಲ್ ಕಣಕ್ಕಿಳಿಯದಿದ್ದರೆ ತಮಗೆ ಅವಕಾಶ ಸಿಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಜಯಮುತ್ತು ಇದ್ದಾರೆ. ಹೀಗಾಗಿ ಜಯಮುತ್ತು ಅವರು ತಮ್ಮ ತಾಯಿಯ ಹೆಸರಿನಲ್ಲಿ ಸ್ಥಾಪಿಸಿರುವ ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ವರ್ಷ 1001 ಗಣೇಶ ಮೂರ್ತಿಗಳನ್ನು ಹಂಚಲು ನೋಂದಣಿ ಆರಂಭಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:32 am, Mon, 2 September 24