AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ವಿಸಿ ನಾಲೆಗೆ ಬಿದ್ದ ಕಾರು: ಸ್ಥಳೀಯರ ಸಮಯ ಪ್ರಜ್ಞೆಯಿಂದ ಕುಟುಂಬ ಪಾರು

ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ.

Mandya News: ವಿಸಿ ನಾಲೆಗೆ ಬಿದ್ದ ಕಾರು: ಸ್ಥಳೀಯರ ಸಮಯ ಪ್ರಜ್ಞೆಯಿಂದ ಕುಟುಂಬ ಪಾರು
ನಾಲೆಗೆ ಬಿದ್ದ ಕಾರು
Follow us
ವಿವೇಕ ಬಿರಾದಾರ
|

Updated on:Jun 04, 2023 | 5:18 PM

ಮಂಡ್ಯ: ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ (Accident) ಸಂಭವಿಸಿದೆ. ಚಾಲಕನ (Driver) ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ (Mandya) ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬ ಕಾರಿನಲ್ಲಿ ಪಾಂಡವಪುರದ ಕಡೆ ತೆರಳುತ್ತಿತ್ತು. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದರಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಬಳಿಯ ವಿಸಿ ನಾಲೆಗೆ ಬಿದ್ದಿದೆ.

ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಕಾರು ಮುಳುಗಿಲ್ಲ. ಅವಘಡ ಕಂಡ ಮಾಚಹಳ್ಳಿ ಗ್ರಾಮಸ್ಥರು ಕೂಡಲೆ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಇಂದು ಬೆಳಿಗ್ಗೆ (ಜೂ.04) ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ. ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಜಿಲ್ಲೆಯ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:17 pm, Sun, 4 June 23

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ