AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ನಾಲ್ವರ ಪೈಕಿ ಮೂವರು ಸಾವು, ಓರ್ವನ ರಕ್ಷಣೆ

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ಕಾರು ನಾಲೆಗೆ ಉರುಳಿಬಿದ್ದ ಘಟನೆಯಲ್ಲಿ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಓರ್ವನ ರಕ್ಷಣೆ ಮಾಡಿಲಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ. ತಡೆಗೋಡೆ ಇಲ್ಲದಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ನಾಲ್ವರ ಪೈಕಿ ಮೂವರು ಸಾವು, ಓರ್ವನ ರಕ್ಷಣೆ
ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಓರ್ವನ ರಕ್ಷಣೆ, ಇಬ್ಬರು ನಾಪತ್ತೆ
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 03, 2025 | 5:33 PM

Share

ಮಂಡ್ಯ, ಫೆಬ್ರವರಿ 03: ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದು (death), ಓರ್ವನ ರಕ್ಷಣೆ ಮಾಡಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್, ಅಸ್ಲಂಪಾಷಾ ಮತ್ತು ಪೀರ್​ಖಾನ್​ ಮೃತರು. ನಯಾಜ್ ರಕ್ಷಣೆಗೊಳಗಾದ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂ ನಿವಾಸಿಗಳು. ಘಟನಾ ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ

ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ. ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆ ಕಾರು ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಶಿವಳ್ಳಿ ಠಾಣೆ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು, ಅಪಾರ ಪ್ರಮಾಣದಲ್ಲಿ ನೀರು‌ ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿದೆ. ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.

ಇದನ್ನೂ ಓದಿ: ಕುವೈತ್​​ನಲ್ಲಿ ಅರಳಿದ್ದ ಪ್ರೀತಿ ವಿಜಯಪುರದಲ್ಲಿ ಅಂತ್ಯ: ಪ್ರೇಮಿಯನ್ನೇ ನಂಬಿ ಮೋಸ ಹೋದ ಆಂಧ್ರ ಬೆಡಗಿ

ಇನ್ನು ತಡೆಗೋಡೆ ಇಲ್ಲದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿಸಿ ನಾಲೆಗೆ ಕಾರು, ಬಸ್ ಬೀಳ್ಳುತ್ತಿವೆ. ಹೀಗಿದ್ದರೂ ತಡೆಗೋಡೆ ಮಾತ್ರ ಹಾಕುತ್ತಿಲ್ಲ. ಜನರ ಪ್ರಾಣಕ್ಕೆ ಇವರ ಬಳಿ ಬೆಲೆ ಇಲ್ಲ ಎಂದು ಸರ್ಕಾರಕ್ಕೆ ಜನರು ಇಡಿ ಶಾಪ ಹಾಕುತ್ತಿದ್ದಾರೆ.

ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರು ಪ್ರತಿಭಟನೆ

ಇನ್ನು ದುರಂತದ ಸ್ಥಳಕ್ಕೆ ಬಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಇಂಜಿನಿಯರ್ ಜಗದೀಶ್‌ಗೆ ಜನರು ತರಾಟೆ ತೆಗೆದುಕೊಂಡಿದ್ದಾರೆ. ನಿಮ್ಮಿಂದಲೇ ದುರಂತ, ಕಾರಣವೇ ನೀವು ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತವಾಗಿದೆ. ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ರಸ್ತೆಯಲ್ಲಿಯೇ ಕೂತು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ.

ಮಂಡ್ಯ ಡಿಸಿ ಡಾ.ಕುಮಾರ ಹೇಳಿದ್ದಿಷ್ಟು 

ಮಂಡ್ಯ ಡಿಸಿ ಡಾ.ಕುಮಾರ ಪ್ರಕ್ರಿಯಿಸಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೋರ್ವ ಜೀವಂತವಾಗಿ ಸಿಕ್ಕಿದ್ದಾನೆ. ಇಬ್ಬರು ನಾಪ್ಪತ್ತೆಯಾಗಿದ್ದಾರೆ. ಅವರ ಹುಡುಕಾಟ ನಡೆಯುತ್ತಿದೆ. ವಿಸಿ ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನೀರನ್ನು ನಿಲ್ಲಿಸಲು ಹೇಳಿದ್ದೇವೆ. 5 ಗಂಟೆಗೆ ನೀರು ಕಡಿಮೆಯಾಗುತ್ತದೆ. ಬಳಿಕ ಕಾರು, ನಾಪತ್ತೆಯಾಗಿರುವವರನ್ನು ಹುಡುಕುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್, ಸುಲಿಗೆ

ಈ ಘಟನೆ ನಡೆದಿರುವುದು ದುರ್ದೈವ. ಕಾರು ಯಾವ ರೀತಿ ಅಪಘಾತ ಆಗಿದೆ ಎಂದು ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಮಾಡುತ್ತೇವೆ. 560 ಕಿಮೀ ಉದ್ದ ವಿಸಿ‌ ನಾಲೆ ಇದೆ. ಎಲ್ಲಿ ಅಪಘಾತ ಹೆಚ್ಚಾಗಿ ನಡೆಯುತ್ತಿವೆ, ಯಾವ ಜಾಗ ಡೇಂಜರ್ ಎಂದು‌ ತಿಳಿಯಲು ತಂಡ ನಿಯೋಜನೆ ಮಾಡಿದ್ದು, ಆ ತಂಡ ವರದಿಯನ್ನು ಸಹ ಕೊಟ್ಟಿದೆ. ಅದನ್ನು ಕಾರ್ಯರೂಪವಲ್ಲಿ ಕೆಲಸ ಸಹ ನಡೆಯುತ್ತಿದೆ. ಏಕಕಾಲದಲ್ಲಿ 560 ಕಿಮೀ ದೂರ ತಡೆಗೋಡೆ ನಿರ್ಮಾಣ ಕಷ್ಟ. ಹಂತ ಹಂತವಾಗಿ ತಡೆಗೋಡೆ ನಿರ್ಮಾಣ ಕೆಲಸ ಕಾರ್ಯ ಆಗುತ್ತಿದೆ. ಇದು ತೀವ್ರಗತಿಯಲ್ಲಿ ಮಾಡಲು ನಾನು ಇನ್ನಷ್ಟು ಕ್ರಮವಹಿಸುತ್ತೇವೆ. ಈ ರಸ್ತೆಯ ಅಗಲ ಸಾಕಾಗುವುದಿಲ್ಲ. ಇದನ್ನು ಇನ್ನಷ್ಟು ಅಗಲೀಕರಣ ಮಾಡಲು ಕ್ರಮವಹಿಸುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Mon, 3 February 25

W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ