ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ; ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲು
ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆ್ಯಕ್ಟ್ ಅಂದ್ರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ. ಮೊದಲ ದಿನವಾದ ನಿನ್ನೆ(ಜ.09) ಪಾದಯಾತ್ರೆ 15 ಕಿಲೋ ಮೀಟರ್ ಸಾಗಿ ಬಂದಿದೆ. ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಊರು ದೊಡ್ಡಆಲಹಳ್ಳಿಗೆ ಪಾದಯಾತ್ರೆ ತಲುಪಿದೆ. ಸದ್ಯ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ಮಾಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆ್ಯಕ್ಟ್ ಅಂದ್ರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀಕೆಂಡ್ ಕರ್ಫ್ಯೂ ನಡುವೆ ರೂಲ್ಸ್ ಫಾಲೋ ಮಾಡಿಯೇ ಪಾದಯಾತ್ರೆ ಮಾಡುತ್ತೇವೆ ಅಂತ ಸ್ವತಃ ಕಾಂಗ್ರೆಸ್ ನಾಯಕರೇ ಹೇಳಿದ್ರು. ಆದ್ರೆ ಪಾದಯಾತ್ರೆ ಶುರುವಾಗ್ತಿದ್ದಂತೆ ಎಲ್ಲವೂ ಮಾಯವಾಗಿತ್ತು. ಕಾರ್ಯಕರ್ತರು ಗುಂಪು ಗುಂಪಾಗಿ ನಡಿದ್ರೆ, ಇನ್ನು ಬಹುತೇಕ ಮಂದಿ ಮಾಸ್ಕ್ನ್ನೆ ಧರಿಸಿರಲಿಲ್ಲ. ಅಲ್ಲದೆ ಕಾನೂನು ಬಾಹಿರವಾಗಿ ಸಭೆ ಸೇರಿರುವುದರಿಂದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ನವರು ಮೊಣಕಾಲು ಮೇಲೆ ಕುಳಿತು, ಕಿವಿ ಹಿಡಿದುಕೊಂಡು ಕ್ಷಮೆ ಕೇಳಬೇಕು ಇನ್ನು 30 ನಾಯಕರ ವಿರುದ್ಧ ಎಫ್‌ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಎಲ್ಲವನ್ನು ರಾಮನಗರ ಜಿಲ್ಲಾಡಳಿತಕ್ಕೆ ಬಿಡಲಾಗಿದೆ. ಮೊದಲು ಕಾರಣಕರ್ತರ ವಿರುದ್ಧ ಪ್ರಕರಣ ಆಗುತ್ತೆ. ನಂತರ ತನಿಖೆ ಬಳಿಕ ಇತರರ ವಿರುದ್ಧ ಕ್ರಮವಾಗುತ್ತೆ. 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ್ದರು. ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಏನು ಮಾಡಿದ್ದಾರೆ?. ಆಡಳಿತದಲ್ಲಿದ್ದಾಗ ಯೋಜನೆ ಮಾಡಿಲ್ಲ ಈಗ ಪಾದಯಾತ್ರೆ. ಹೀಗಾಗಿ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು. ಮೊಣಕಾಲು ಮೇಲೆ ಕುಳಿತು, ಕಿವಿ ಹಿಡಿದುಕೊಂಡು ಕ್ಷಮೆ ಕೇಳಬೇಕು. ಕಾಂಗ್ರೆಸ್ ನಾಯಕರು ರಾಜ್ಯದ ಜನರ ಕ್ಷಮೆಯಾಚಿಸಬೇಕು. ನಾವು ಅಧಿಕಾರದಲ್ಲಿದ್ದಾಗ ಯೋಜನೆ ಮಾಡುವುದಕ್ಕೆ ಆಗಿಲ್ಲ. ಇದಕ್ಕಾಗಿ ಕ್ಷಮೆ ಕೇಳುತ್ತಿದ್ದೇವೆ ಎಂದು ಅವರು ಹೇಳಲಿ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಎಲ್ಲರ ವಿರುದ್ಧವೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ.‘ನಾವು ಅಸಹಾಯಕರೂ ಅಲ್ಲ, ಅಸಮರ್ಥರೂ ಅಲ್ಲ’ ಕಾನೂನು ರೀತಿಯಲ್ಲಿ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗರಂ ಆಗಿದ್ದಾರೆ.
ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಡಿಕೆಶಿ ನಿರಾಕರಣೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು. ‘ನನಗೆ ಅಂಥ ಯಾವುದೇ ಟೆಸ್ಟಿಂಗ್ ಅಗತ್ಯವಿಲ್ಲ. ನಾನು ಫಿಟ್ ಅಂಡ್ ಫೈನ್ ಇದ್ದೀನಿ’ ಎಂದು ಡಿ.ಕೆ.ಶಿವಕುಮಾರ್ ಖಡಾಖಂಡಿತವಾಗಿ ನಿರಾಕರಿಸಿದರು.
ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಹಾಗೂ ಜಿಲ್ಲಾ ವೈದ್ಯಾಧಿಕಾರಿ ನಿರಂಜನ್ ಅವರ ವಿರುದ್ಧ ಡಿಕೆಶಿ ಹರಿಹಾಯ್ದರು. ನಾನೊಬ್ಬ ಜನಪ್ರತಿನಿಧಿ ನನಗೇ ಬ್ಲ್ಯಾಕ್ಮೇಲ್ ಮಾಡ್ತಿದ್ದೀರಾ? ನೀವು ನಿಮ್ಮ ಆರೋಗ್ಯ ಇಲಾಖೆ ಸಚಿವರಿಗೆ ಹೋಗಿ ಹೇಳಿ. ಬಚ್ಚಾಗಳ ಹತ್ತಿರ ಆಟ ಆಡಲು ಹೋಗಿ ಹೇಳಿ. ನನಗೆ ಏನಾಗಿದೆ ಎಂದು ಟೆಸ್ಟ್ ಮಾಡಲು ಬಂದಿದ್ದೀರಿ. ನಿಮ್ಮ ಹುದ್ದೆ ಯಾವುದು ಎಂದೆಲ್ಲಾ ಡಿಕೆಶಿ ಪ್ರಶ್ನೆ ಮಾಡಿದರು. ಕೊನೆಗೆ ನಾನು ಟೆಸ್ಟ್ ಮಾಡಿಸಿಕೊಳ್ಳಲ್ಲ ಎಂದು ಅಧಿಕಾರಿಗಳನ್ನು ವಾಪಸ್ ಕಳುಹಿಸಿದರು.
ಇದನ್ನೂ ಓದಿ: ‘ನಟ ಸಾರ್ವಭೌಮ’ ಸಿನಿಮಾ ನಟಿಯ ಲಿಪ್ ಕಿಸ್ ಪುರಾಣ; ಸಖತ್ ಟ್ರೋಲ್ ಆಗುತ್ತಿರುವ ಅನುಪಮಾ
Published On - 10:31 am, Mon, 10 January 22