Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಯ 3 ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿತ, ಕಳೆದ 10 ವರ್ಷಕ್ಕಿಂತ ಈ ವರ್ಷ ಭಾರಿ ಕಡಿಮೆ

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಕುಡಿಯಲು ಮತ್ತು ಬಿತ್ತನೆಗೆ ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ. ಅದರಲ್ಲಂತೂ ಕಾವೇರಿ ನದಿಯ ಪ್ರಮುಖ ಮೂರು ಜಲಾಶಯಗಳಿಂದ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಬಿಡಬೇಕು ಎಂಬ ಪ್ರಾಧಿಕಾರದ ಆದೇಶ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಾಗಿದ್ದರೇ ಕಳೆದ 10 ವರ್ಷಕ್ಕೆ ಹೋಲಿಸಿದರೇ ಸದ್ಯ ಈ ಡ್ಯಾಂಗಳಲ್ಲಿ ನೀರಿ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ..

ಕಾವೇರಿ ನದಿಯ 3 ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿತ, ಕಳೆದ 10 ವರ್ಷಕ್ಕಿಂತ ಈ ವರ್ಷ ಭಾರಿ ಕಡಿಮೆ
ಕೆಆರ್​ಎಸ್​ ಜಲಾಶಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 15, 2023 | 7:37 AM

ಬೆಂಗಳೂರು ಸೆ.15: ಈ ಬಾರಿ ಮುಂಗಾರು (Monsoon) ಕೈ ಕೊಟ್ಟಿದ್ದರಿಂದ 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಸರ್ಕಾರ ತಿಳಿಸಿದೆ. ಇದರಿಂದ ಬಿತ್ತನೆಗೆ ನೀರಿಲ್ಲದೆ ರೈತ ಪರದಾಡುತ್ತಿದ್ದಾನೆ. ಕೃಷ್ಣರಾಜಸಾಗರ ಜಲಾಶಯದಲ್ಲಿ (KRS Dam) ನೀರಿಲ್ಲದೇ ರೈತರು ಕಂಗಾಲು ಆಗಿದ್ದಾರೆ. ಆದರೂ ತಮಿಳುನಾಡಿಗೆ (Tamil Nadu) ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಡ್ಯಾಂಗಳಲ್ಲಿ ನೀರಿನ ಮಟ್ಟವು ಕುಸಿಯುತ್ತಲೇ ಇದೆ. ಹೀಗೆ ಮುಂದುವರೆದರೇ ಮುಂಬರುವ ವಾರಗಳಲ್ಲಿ ನೀರಿಲ್ಲದೆ ಪರದಾಡುವಂತಾಗುತ್ತದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಪ್ರಕಾರ, ಸೆಪ್ಟೆಂಬರ್ 9ರ ವೇಳೆಗೆ ಕೆಆರ್‌ಎಸ್, ಹೇಮಾವತಿ ಮತ್ತು ಕಬಿನಿ ಜಲಾಶಯಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತಿ ಕಡಿಮೆ ನೀರು ಇತ್ತು. ಸೆಪ್ಟೆಂಬರ್ 14 ರಂದು 124.80 ಅಡಿ ಸಾಮರ್ಥ್ಯದ ಕೆಆರ್‌ಎಸ್​ನಲ್ಲಿ 97.50 ಅಡಿ ನೀರು ಇತ್ತು. ಕಳೆದ ವರ್ಷ ಇದೇ ದಿನ 124.60 ಅಡಿಯಷ್ಟು ನೀರು ಇತ್ತು. ಕೆಎಸ್‌ಎನ್‌ಡಿಎಂಸಿ ಪ್ರಕಾರ, ಸೆಪ್ಟೆಂಬರ್ 3 ರಿಂದ 9ರ ವರೆಗೆ ನೀರಿನ ಮಟ್ಟವು ಕಳೆದ 10 ವರ್ಷಗಳ ಸರಾಸರಿ ಮಟ್ಟಕ್ಕಿಂತ 17.83 ಅಡಿ ಕಡಿಮೆಯಾಗಿದೆ.

ಕಳೆದ ವರ್ಷಕ್ಕ ಹೋಲಿಸಿದರೆ ನೀರಿನ ಮಟ್ಟವು 26.10 ಅಡಿಗಳಷ್ಟು ಕಡಿಮೆಯಾಗಿದೆ. ಸೆ.14 ರಂದು ಹೇಮಾವತಿಯಲ್ಲಿ 2,897.86 ಅಡಿ ​ನೀರು ಇತ್ತು. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 2,921.65 ಅಡಿ ನೀರು ಇತ್ತು. ಸೆ.9ರ ವರೆಗಿನ ಅಂಕಿ-ಅಂಶಗಳ ಪ್ರಕಾರ ಕಳೆದ 10 ವರ್ಷಗಳಲ್ಲೇ ಇದೆ ಮೊದಲಬಾರಿಗೆ 10.78 ಟಿಎಂಸಿ ನೀರಿನ ಮಟ್ಟ ಕಡಿಮೆಯಾಗಿದೆ. ಕಳೆದ ವರ್ಷ ಇದೇ ದಿನ 36.91 ಟಿಎಂಸಿ ಅಡಿ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೇ 20.13 ಟಿಎಂಸಿ ಅಡಿಯಷ್ಟು ಕಡಿಮೆಯಾಗಿದೆ. ಸದ್ಯ ಡ್ಯಾಂನಲ್ಲಿ 18.56 ಟಿಎಂಸಿ ನೀರು ಇದೆ. ಅಣೆಕಟ್ಟಿನ ಒಟ್ಟು ಸಂಗ್ರಹಣಾ ಸಾಮರ್ಥ್ಯವು 37.10 ಟಿಎಂಸಿ ಆಗಿದೆ.

ಇದನ್ನೂ ಓದಿ: ಸೆ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕಬಿನಿ ಜಲಾಶಯವು ಕುಡಿಯುವ ಮತ್ತು ನೀರಾವರಿಗೆ ಮತ್ತೊಂದು ಪ್ರಮುಖ ನೀರಿನ ಮೂಲವಾಗಿದೆ. ಕಬಿನಿ ಜಲಾಶಯದಲ್ಲಿ ಕಳೆದ 10 ವರ್ಷಗಳ ಸರಾಸರಿ ನೀರಿನ ಮಟ್ಟಕ್ಕಿಂತ 5.53 ಅಡಿ ಕಡಿಮೆಯಾಗಿದೆ. ಮತ್ತು ಕಳೆದ ವರ್ಷಕ್ಕೆ ಹೋಲಿಸಿದರೆ 8.39 ಅಡಿ ಕಡಿಮೆಯಾಗಿದೆ. ಸೆಪ್ಟೆಂಬರ್ 14 ರಂದು ಕಬಿನಿ ನೀರಿನ ಮಟ್ಟ 2,276.08 ಅಡಿ ಇತ್ತು. ಒಟ್ಟು ಸಂಗ್ರಹಣಾ ಸಾಮರ್ಥ್ಯ 19.52 ಟಿಎಂಸಿ ಆಗಿದ್ದು, ಸದ್ಯ 14.92 ಟಿಎಂಸಿ ನೀರು ಇದೆ. ಕಳೆದ ವರ್ಷ ಇದೇ ದಿನ 18.87 ಟಿಎಂಸಿ ನೀರು ಇತ್ತು.

ಹಾರಂಗಿಯಲ್ಲಿ ಚಿಕ್ಕ ಅಣೆಕಟ್ಟು ಆಗಿದ್ದು, ನೀರಿನ ಮಟ್ಟವು ಸ್ವಲ್ಪ ಉತ್ತಮವಾಗಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 8.5 ಟಿಎಂಸಿ ಅಡಿ ಇದ್ದು, ಲಭ್ಯವಿರುವ ನೀರು 8.29 ಟಿಎಂಸಿ. ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಸದ್ಯ ನೀರು ಕೇವಲ 62.69 ಟಿಎಂಸಿ ಅಡಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ