Mandya Bandh; ಕಾವೇರಿ ಹೋರಾಟ ತೀವ್ರ; ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​

Mandya bandh on September 23; ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.

Mandya Bandh; ಕಾವೇರಿ ಹೋರಾಟ ತೀವ್ರ; ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​
ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ
Follow us
| Updated By: ಗಣಪತಿ ಶರ್ಮ

Updated on: Sep 21, 2023 | 4:38 PM

ಮಂಡ್ಯ, ಸೆಪ್ಟೆಂಬರ್ 21: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ (Mandya Bandh) ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸೇರಿದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್​ ಮೂಲಕ ಪ್ರತಿಭಟನೆ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡಿದೆ. ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.

ಕೆಆರ್​​​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು ಪೊಲೀಸ್ ವಶಕ್ಕೆ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭೂಮಿ ತಾಯಿ ಹೋರಾಟ ಸಮಿತಿಯಿಂದ ಕೆಆರ್​​​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಮುತ್ತಿಗೆ ಹಾಕಲು ಬಂದಿದ್ದ ರೈತರನ್ನು ಗೇಟ್ ಬಳಿಯೇ ತಡೆದ ಪಲೀಸರು ಅವರನ್ನು ವಶಕ್ಕೆ ಪಡೆದರು. ಡ್ಯಾಂಗೆ ಮುತ್ತಿಗೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮೊದಲೇ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಮುಖ್ಯ ಗೇಟ್ ಬಳಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆಯಿಂದ ಗೇಟ್ ಬಳಿಯೇ ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತ ನಾಯಕ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಈ ಮಧ್ಯೆ, ರೈತರ ಪ್ರತಿಭಟನೆ ತೀವ್ರಗೊಂಡಿರುವ ಕಾರಣ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಎಸ್ಪಿ ಜಯಪ್ರಕಾಶ್ ಅವರು ಜಲಾಶಯಕ್ಕೆ‌ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ಹೋರಾಟ ತೀವ್ರಗೊಂಡಿದೆ. ಹೀಗಾಗಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಎಸ್ಪಿ ಜಯಪ್ರಕಾಶ್ ಅವರು ಜಲಾಶಯದ ನೀರಿನ ಮಟ್ಟ, ಹೊರ‌ಹರಿವು, ಒಳಹರಿವಿನ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅದೇ ರೀತಿ ಜಲಾಶಯದಲ್ಲಿ ಸೀಪೇಜ್ ಇದೆಯಾ ಎಂಬುದರ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್