ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

| Updated By: Ganapathi Sharma

Updated on: Sep 21, 2023 | 4:25 PM

Farmers Protest at Mandya; ಕಾವೇರಿ ಕೊಳ್ಳದ ಡ್ಯಾಮ್​ಗಳಲ್ಲಿ ನೀರೇ ಇಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕ ಉತ್ತರ ನೀಡುತ್ತೇವೆ. ಸಂಸದರು, ಶಾಸಕರು ಬಂದರೆ ಕಲ್ಲಿನಲ್ಲಿ ಹೊಡೆಯುತ್ತೇವೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುಖ್ಯಮಂತ್ರಿಗಳು ಓಡಾಡದಂತೆ ಮಾಡುತ್ತೇವೆ ಎಂದು ಪ್ರತಿಭಟನಾನಿರತ ರೈತ ಮುಖಂಡ ಸಿದ್ದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
Follow us on

ಮಂಡ್ಯ, ಸೆಪ್ಟೆಂಬರ್ 21: ತಮಿಳುನಾಡಿಗೆ ಮತ್ತೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ (Mandya) ರೈತರ ಪ್ರತಿಭಟನೆ (Farmers Protest) ತೀವ್ರಗೊಂಡಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಲಗಿ ರೈತರು ಪ್ರತಿಭಟನೆ ಮಾಡಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಸವಾರರಿಗೆ ಅನಾನುಕೂಲವಾಯಿತು.

ಕಾವೇರಿ ಕೊಳ್ಳದ ಡ್ಯಾಮ್​ಗಳಲ್ಲಿ ನೀರೇ ಇಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕ ಉತ್ತರ ನೀಡುತ್ತೇವೆ. ಸಂಸದರು, ಶಾಸಕರು ಬಂದರೆ ಕಲ್ಲಿನಲ್ಲಿ ಹೊಡೆಯುತ್ತೇವೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುಖ್ಯಮಂತ್ರಿಗಳು ಓಡಾಡದಂತೆ ಮಾಡುತ್ತೇವೆ ಎಂದು ಪ್ರತಿಭಟನಾನಿರತ ರೈತ ಮುಖಂಡ ಸಿದ್ದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಮತ್ತೆ ಆದೇಶ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಸಮರ್ಥ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಆರಂಭಿಸಿದ್ದಾರೆ.

ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಚರ್ಚಿಸಲು ಮಂಡ್ಯ ಸಂಸದೆ ಸುಮಲತಾ ಅವರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ.

ನೀರೇ ಇಲ್ಲದ ಸಂದರ್ಭದಲ್ಲಿ ಎಲ್ಲಿಂದ ಹರಿಸುವುದು; ಪರಮೇಶ್ವರ್ ಪ್ರಶ್ನೆ

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ನೀರೇ ಇಲ್ಲದ ಸಂದರ್ಭದಲ್ಲಿ ನಮ್ಮ ಅಹವಾಲು ಆಲಿಸದೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದುವರೆಗೆ ನೀರು ಹರಿಸಿರುವ ಬಗ್ಗೆ ವಕೀಲರು ದಾಖಲೆ ಸಲ್ಲಿಸಿದ್ದಾರೆ. ಕಾವೇರಿ ಕೊಳ್ಳದ ಡ್ಯಾಮ್​​​​ಗಳಲ್ಲಿ ಎಷ್ಟು ನೀರಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ. ಆದರೂ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ನೀರೇ ಇಲ್ಲದ ಸಂದರ್ಭದಲ್ಲಿ ಎಲ್ಲಿಂದ ತಮಿಳುನಾಡಿಗೆ ಹರಿಸುವುದು ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ: ಸಮರ್ಥ ವಾದ ಮಂಡಿಸುವಲ್ಲಿ ವಿಫಲವಾದ ಕರ್ನಾಟಕ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ರೈತರು

ಸುಪ್ರೀಂಕೋರ್ಟ್ ಆದೇಶದ ನಂತರ ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಗ್ಗೆ ಸಿಎಂ, ಡಿಸಿಎಂ ಬಂದ ಮೇಲೆ ಸಭೆ ನಡೆಸಿ ಚರ್ಚಿಸುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪರಮೇಶ್ವರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 21 September 23