AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ರದಾಯಕ್ಕೆ ಎಳ್ಳು-ನೀರು: ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ

ಹಿಂದೂ ಸಂಪ್ರದಾಯಗಳ ಪ್ರಕಾರ ಒಂದು ಒಳ್ಳೆ ಕಾರ್ಯ ಮಾಡುವಾಗ, ಚಾಲನೆ ನೀಡುವಾಗ ಸಿಹಿ ಊಟ ಆಯೋಜಿಸುವುದು ವಾಡಿಕೆ ಆದ್ರೆ, ಕಾವೇರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಸಂಪ್ರದಾಯ ಮುರಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಸಂಪ್ರದಾಯಕ್ಕೆ ಎಳ್ಳು-ನೀರು: ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ
ಕಾವೇರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಬಾಡೂಟ
ಪ್ರಶಾಂತ್​ ಬಿ.
| Edited By: |

Updated on:Jul 29, 2024 | 4:39 PM

Share

ಮಂಡ್ಯ, (ಜುಲೈ 29): ಕೆಲ ವರ್ಷಗಳಿಂದ ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು (ಜುಲೈ 29) ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಹೌದು…ಕೆಆರ್​ಎಸ್​​ನ​​ ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಣೆ ಮಾಡಿ ತೆರಳಿದ್ದು, ಇತ್ತ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳ ಬೆಂಬಲಿಗರು KRSನ ಖಾಸಗಿ ಹೋಟೆಲ್ ನಲ್ಲಿ ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಪ್ರದಾಯ ಮುರಿದಿದ್ದಾರೆ.

ಇದನ್ನೂ ಓದಿ: KRS Dam: ಮೂರನೇ ಬಾರಿಗೆ ಕಾವೇರಿಗೆ ಬಾಗಿನ ಅರ್ಪಿಸಿದ ನಾಡದೊರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಇನ್ನು ಇದಕ್ಕೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ಏನು ಹೇಳುತ್ತಾರೆ? ಈ ರೀತಿ ಬಾಡೂಟ ಆಯೋಜಿಸಿರುವ ಅಧಿಕಾರಿಗಳ ವಿರುದ್ಧ ಮುಖ್ಯಂಂತ್ರಿ ಸಿದ್ದರಾಮಯ್ಯ ಶಿಸ್ತು ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:29 pm, Mon, 29 July 24