ಕಾವೇರಿದ ಕಾವೇರಿ ಕಿಚ್ಚು: ನಾಳೆ ಮಂಡ್ಯ ನಗರ ಬಂದ್, ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ರಾಜ್ಯದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರಲ್ಲಿ ಆಕ್ರೋಶದ ಕಿಚ್ಚು ಹೆಚ್ಚಾಗುತ್ತಿದೆ. ಅಲ್ಲದೆ, ಕಾವೇರಿ ನೀರು ಬಿಡದಂತೆ ಆಗ್ರಹಿಸಿದ ನಾಳೆ ಮಂಡ್ಯ ನಗರ ಬಂದ್‌ಗೆ ಕರೆ ನೀಡಲಾಗಿದೆ.
ಮಂಡ್ಯ, ಸೆ.22: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ (Cauvery) ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ರಾಜ್ಯದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರಲ್ಲಿ ಆಕ್ರೋಶದ ಕಿಚ್ಚು ಹೆಚ್ಚಾಗುತ್ತಿದೆ. ಅಲ್ಲದೆ, ಕಾವೇರಿ ನೀರು ಬಿಡದಂತೆ ಆಗ್ರಹಿಸಿದ ನಾಳೆ ಮಂಡ್ಯ ನಗರ ಬಂದ್‌ಗೆ (Mandya City Bandh) ಕರೆ ನೀಡಲಾಗಿದೆ.
ಮಂಡ್ಯದಲ್ಲಿ ಕಾವೇರಿಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರ ಬಂದ್‌ಗೆ ಕರೆ ನೀಡಲಾಗಿದೆ. ಶಾಂತಿಯುತ ಬಂದ್‌ಗೆ ಕರೆ ನೀಡಲಾಗಿದ್ದು, ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ. ಅದರಂತೆ, ನಾಳೆ ಬೆಳಗ್ಗೆ 8 ಗಂಟೆಯಿಂದ ಸಂಜೆ 6ರ ವರೆಗೆ ಮಂಡ್ಯ ನಗರ ಬಂದ್ ಆಗಲಿದೆ.
ಇದನ್ನೂ ಓದಿ: ಸೆ.23 ಮಂಡ್ಯ ಬಂದ್‌ಗೆ ಕರೆ: ಕಾನೂನು ಬಾಹಿರ ಚಟುವಟಿಕೆಗಳು ನಡೆದರೇ ಕ್ರಮ ಕೈಗೊಳ್ಳಲಾಗುವುದು: ಜಿ ಪರಮೇಶ್ವರ್
ಮಂಡ್ಯ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಲಿದ್ದು, ಆಟೋ ಸಂಚಾರ, ಖಾಸಗಿ ಬಸ್ ಸಂಚಾರ ನಡೆಸದಂತೆ, ಶಾಲಾ-ಕಾಲೇಜುಗಳನ್ನು ತೆರೆಯದಂತೆ ಮನವಿ ಮಾಡಲಾಗಿದೆ. ಸರ್ಕಾರಿ ಕಚೇರಿ ಬಂದ್ ಮಾಡುವಂತೆ ಈಗಾಗಲೇ ಮನವಿ ಮಾಡಲಾಗಿದೆ.
ಇದರ ಹೊರತಾಗಿ ಮೆಡಿಕಲ್, ಆಸ್ಪತ್ರೆ, ಹಾಲಿನ ಬೂತ್ ಮಾತ್ರ ತೆರೆದಿರಲಿದೆ. ನಗರದಲ್ಲಿನ ಪರಿಸ್ಥಿತಿ ನೋಡಿಕೊಂಡು ಕೆಎಸ್ಆರ್ಟಿಸಿ ಬಸ್ ಸಂಚಾರ ನಡೆಸಲು ನಿರ್ಧರಿಸಲಾಗಿದೆ.
ಮಂಡ್ಯ ನಗರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ ವೃತ್ತ, ಮಹಾವೀರ ವೃತ್ತ, ವಿವಿ ರೋಡ್, ಡಬಲ್ ರೋಡ್, ಪೇಟೆ ಬೀದಿ ಸೇರಿ ಹಲವು ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ. ಮಂಡ್ಯ ನಗರದಾದ್ಯಂತ ಬೈಕ್ ರ್ಯಾಲಿ ನಡೆಸಲು ರೈತರು ಪ್ಲಾನ್ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ