ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು: ಬರಿದಾಗುತ್ತಿರುವ ಕೆಆರ್​ಎಸ್​, 12 ಟಿಎಂಸಿ ನೀರು ಖಾಲಿ

ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿದಿದೆ. ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 12 ಟಿಎಂಸಿ ನೀರು ಖಾಲಿಯಾಗಿದೆ. ಇದರಿಂದ ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿದೆ. ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಿದರೆ ಇತ್ತ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ.

ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು: ಬರಿದಾಗುತ್ತಿರುವ ಕೆಆರ್​ಎಸ್​, 12 ಟಿಎಂಸಿ ನೀರು ಖಾಲಿ
ಕೆಆರ್​ಎಸ್​ ಡ್ಯಾಂ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Sep 08, 2023 | 1:49 PM

ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ (Cauvery River) ನೀರು ಬಿಡುವ ವಿಚಾರವಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದ ಮೇರೆಗೆ ರಾಜ್ಯ ಸರ್ಕಾರ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸುತ್ತಿದ್ದು, ಇದು ರಾಜ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸೆ.12ರ ನಂತರ ತಮಿಳುನಾಡಿಗೆ (Tamil Nadu) ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರಿಂಕೋರ್ಟ್​​ನಲ್ಲಿ ಅಫಿಡವಿಟ್​ ಸಲ್ಲಿಸಿದೆ. ಇತ್ತ ಕಾವೇರಿ ಜಲಾಶಯ ಪ್ರದೇಶದಲ್ಲಿ ಉತ್ತಮ ಮಳೆಯಾಗದೆ ಕೆಆರ್​ಎಸ್​​ ಡ್ಯಾಂನಲ್ಲಿ (KRS Dam) ದಿನೇ ದಿನೇ ನೀರು ಕಡಿಮೆಯಾಗುತ್ತಿದೆ. ಈ ವರ್ಷ ಜಲಾಶಯದಲ್ಲಿ 112 ಅಡಿಯಷ್ಟು ಭರ್ತಿಯಾಗಿತ್ತು. ಇದೀಗ 98 ಅಡಿಗೆ ನೀರು ಕುಸಿದಿದೆ.

ಸದ್ಯ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿದಿದೆ. ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 12 ಟಿಎಂಸಿ ನೀರು ಖಾಲಿಯಾಗಿದೆ. ಇದರಿಂದ ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿದೆ. ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಿದರೆ ಇತ್ತ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ. ಬೆಳೆಗೆ ನೀರಿಲ್ಲದೆ ರೈತರು ಆತಂಕದಲ್ಲಿದ್ದು, ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ತಮಿಳುನಾಡು ಮತ್ತಷ್ಟು ನೀರಿಗೆ ಬೇಡಿಕೆ ಇಟ್ಟಿದೆ. ಒಂದುವೇಳೆ ಮತ್ತಷ್ಟು ನೀರನ್ನು ಬಿಟ್ಟರೇ ಕುಡಿಯುವ ನೀರುಗೂ ಆಹಾಕಾರ ಉಂಟಾಗುತ್ತದೆ. ಸದ್ಯ ಬೆಳೆಗಳಿಗೆ ನೀರಿಲ್ಲದೆ ರೈತರು ಆತಂಕದಲ್ಲಿದ್ದಾರೆ.

ತಮಿಳುನಾಡಿಗೆ ನೀರು ಬಿಡುವುದನ್ನು ರಾಜ್ಯ ಸರ್ಕಾರ ಸ್ವಲ್ಪ ಪ್ರಮಾಣ ಕಡಿಮೆ‌ ಮಾಡಿದೆ. ಗುರುವಾರದವರೆಗೂ 5 ರಿಂದ 6 ಸಾವಿರ ಕ್ಯೂಸೆಕ್ ನೀರು ಬಿಡುತ್ತಿದ್ದ ಸರ್ಕಾರ ಇದೀಗ ನದಿಗೆ 3,980 ಕ್ಯೂಸೆಕ್​ಗೆ ಇಳಿಸಿದೆ. ಡ್ಯಾಮ್​ನ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದಿನ ಮಟ್ಟ 98.06 ಅಡಿ ಇದೆ. ಒಳ ಹರಿವು 2873 ಕ್ಯೂಸೆಕ್ ಇದೆ. ಹೊರ ಹರಿವು 3980 ಕ್ಯೂಸೆಕ್ ಇದೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಕರ್ನಾಟಕ ಸಲ್ಲಿಸಿದ ಅಫಿಡೆವಿಟ್​​​ನಲ್ಲಿ ಏನಿದೆ

ಸೆಪ್ಟೆಂಬರ್ 12 ರ ನಂತರ ಕರ್ನಾಟಕದ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವುದು ಸಾಧ್ಯವಾಗುವುದಿಲ್ಲ. ಆಗಸ್ಟ್​ 28 ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀಡಿರುವ ನಿರ್ದೇಶನಗಳನ್ನು ಪಾಲಿಸಿದ ನಂತರ ಸದ್ಯ ಕರ್ನಾಟಕದ ಅಗತ್ಯಗಳಿಗೆ ಅಪಾಯವಿಲ್ಲ. ಆದರೆ, ಮುಂದೆ ನೀರುವು ಬಿಡುವುದು ಸಾಧ್ಯವಿಲ್ಲ ಎಂದು ಅಫಿಡವಿಟ್​​ನಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಲ್ಲೇಖಿಸಿದ್ದಾರೆ.

ತಮಿಳುನಾಡಿನ ಮೆಟ್ಟೂರು ಜಲಾಶಯದ ಹೊರಹರಿವನ್ನು 10,000 ಕ್ಯೂಸೆಕ್‌ನಿಂದ 8,000 ಕ್ಯೂಸೆಕ್‌ಗೆ ಇಳಿಸಿದೆ. ಈ ಹಿನ್ನೆಲೆಯಲ್ಲಿ, ಪ್ರತಿ ದಿನ ತಮಿಳುನಾಡಿಗೆ ಬಿಡುವ ನೀರಿನ ಪ್ರಮಾಣವನ್ನು 5,000 ಕ್ಯೂಸೆಕ್‌ ಬದಲು 3,000 ಕ್ಯೂಸೆಕ್‌ಗೆ ಇಳಿಕೆ ಮಾಡುವಂತೆ ಕೋರಿ ಕರ್ನಾಟಕವು ಸೆಪ್ಟೆಂಬರ್ 2 ರಂದು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ ಎಂದು ಅಫಿಡವಿಟ್ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು