ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು: ರಾಷ್ಟ್ರೀಯ ಜಲನೀತಿ ಜಾರಿಗೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಕೂಡಲಸಂಗಮ ಮಠಾಧೀಶ ಜಯಮೃತ್ಯುಂಜಯ ಸ್ವಾಮೀಜಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಜಲನೀತಿ ಜಾರಿಗೆ ತಂದು ದೇಶವ್ಯಾಪಿ ಅಣೆಕಟ್ಟುಗಳನ್ನು ಜಾರಿಗೆ ತನ್ನಿ. ನೀರಿನ ಹಕ್ಕು ಪ್ರತಿಯೊಬ್ಬನಿಗೂ ಸಲ್ಲುವಂತೆ ಮಾಡಿ. ಈ ಎಲ್ಲ ಸಮಸ್ಯೆಗೆ ಪರಿಹಾರ ರಾಷ್ಟ್ರೀಯ ಜಲ ನೀತಿ ಒಂದೇ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು: ರಾಷ್ಟ್ರೀಯ ಜಲನೀತಿ ಜಾರಿಗೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ
ಜಯಮೃತ್ಯುಂಜಯ ಸ್ವಾಮೀಜಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 20, 2023 | 4:21 PM

ಮಂಡ್ಯ, ಅಕ್ಟೋಬರ್​​​​​ 20: ಮೇಕೆದಾಟು ಯೋಜನೆಗೂ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ. ಪ್ರಾಧಿಕಾರ ಪ್ರತಿ ಬಾರಿಯೂ ಅನ್ಯಾಯ ಮಾಡುತ್ತಾ ಬಂದಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದರ ಜೊತೆಯಲ್ಲಿ ರಾಷ್ಟ್ರೀಯ ಜಲ ನೀತಿ ಜಾರಿಗೆ ತರಬೇಕು ಎಂದು ಕೂಡಲಸಂಗಮ ಮಠಾಧೀಶ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swami) ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಜಲನೀತಿ ಜಾರಿಗೆ ತಂದು ದೇಶವ್ಯಾಪಿ ಅಣೆಕಟ್ಟುಗಳನ್ನು ಜಾರಿಗೆ ತನ್ನಿ. ನೀರಿನ ಹಕ್ಕು ಪ್ರತಿಯೊಬ್ಬನಿಗೂ ಸಲ್ಲುವಂತೆ ಮಾಡಿ. ಈ ಎಲ್ಲ ಸಮಸ್ಯೆಗೆ ಪರಿಹಾರ ರಾಷ್ಟ್ರೀಯ ಜಲ ನೀತಿ ಎಂದು ಹೇಳಿದ್ದಾರೆ.

ಬಹುತೇಕ ನಾಯಕರು ಕಾವೇರಿ ನೀರು ಕುಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ತನ್ನಿ. ರೈತರ ಸಹನೆ ಕಳೆದುಕೊಂಡಿದ್ದಾರೆ. ಇವತ್ತು ಕಾವೇರಿ ಗ್ಯಾರಂಟಿ ಬೇಕಾಗಿದೆ. ಅದನ್ನು ಕೊಡುವ ಕೆಲಸ ಮಾಡಬೇಕು. ಕರ್ನಾಟಕದ ಎಲ್ಲಾ ಮಠಾಧೀಶರ ಬೆಂಬಲ ಇದ್ದೆ ಇರುತ್ತೆ. ಕೃಷ್ಣೆ ಹೋರಾಟಕ್ಕೆ ನೀವು ಬೆಂಬಲಕೊಟ್ಟಿದ್ದಿರಿ. ಕಾವೇರಿ ಹೋರಾಟಕ್ಕೆ ನಾವು ಬೆಂಬಲ ಕೊಡುತ್ತೇವೆ. ಕಿವಿ ಇದ್ದು ಕಿವುಡಾಗಿರುವ ಸರ್ಕಾರದ ನಡೆ ಖಂಡನೀಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು; ಅನ್ನದಾತನ ವಿಭಿನ್ನ ರೀತಿ ಹೋರಾಟ

ಉತ್ತರ ಕರ್ನಾಟಕದ ಎಲ್ಲಾ ಧಾರ್ಮಿಕ ಮುಖಂಡರ ಪರವಾಗಿ ಇಲ್ಲಿಗೆ ಬಂದಿದ್ದೇನೆ. ಕಾವೇರಿ, ಕೃಷ್ಣೆ ನಮ್ಮ ಕಣ್ಣುಗಳಿಂದಂತೆ. ಕಾವೇರಿ ಋಣ ಲಕ್ಷಾಂತರ ಮಂದಿಯ ಮೇಲೆ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗಿಲ್ಲ. ಬರಗಾಲದ ಪರಿಸ್ಥಿತಿ ಇದೆ. ಇಂತಹ ಸಂದರ್ಭಗಳಲ್ಲಿ ಪ್ರಾಧಿಕಾರದ ಸದಸ್ಯರುಗಳು ಅವೈಜ್ಞಾನಿಕ ತೀರ್ಪುಗಳನ್ನು ನೀಡುತ್ತಿದ್ದಾರೆ. ಆದೇಶ ಪಾಲನೆಯ ಹೆಸರಿನಲ್ಲಿ ನೀರು ನೀಡುತ್ತಿರುವುದು ದೊಡ್ಡ ತಪ್ಪು. ಈ ಹಿಂದೆ ನೀಡಿದ್ದ ತೀರ್ಪು ಅಂದಿನ ಕಾಲದ ಜನಸಂಖ್ಯೆಯನ್ನು ಗುರಿಯಾಗಿಟ್ಟುಕೊಂಡು ಕೊಡಲಾಗಿತ್ತು. ಆದರೆ ಇಂದು ಪರಿಸ್ಥಿತಿ ಹಾಗಿಲ್ಲ ಎಂದರು.

ಸಿದ್ದರಾಮಯ್ಯ ಅವರ ನಡೆ ರೈತರಿಗೆ ಬಹಳಷ್ಟು ನೋವು ಉಂಟುಮಾಡಿದೆ

ಬೆಂಗಳೂರಿನ ಜನಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಹಳೆಯ ತೀರ್ಪನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡಿ ಅಂದರೆ ಎಲ್ಲಿಂದ ಬಿಡುವುದು. ಈ ಆದೇಶವೇ ಪಕ್ಷಪಾತವಾಗಿದೆ ಎಂಬುದು ಕಂಡು ಬರುತ್ತಿದೆ. ಸರ್ಕಾರದ ಮೇಲೆ ಜವಾಬ್ದಾರಿ ಹೆಚ್ಚಿದೆ. ಅಧಿಕಾರಕ್ಕಿಂತ ಕಾವೇರಿ ಮುಖ್ಯ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು. ಸಿದ್ದರಾಮಯ್ಯ ಅವರ ನಡೆ ರೈತರಿಗೆ ಬಹಳಷ್ಟು ನೋವು ಉಂಟುಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿಗಾಗಿ ಮುಂದುವರಿದ ಹೋರಾಟ: KRS​ ಡ್ಯಾಂಗೆ ಮುತ್ತಿಗೆ, ವಾಟಾಳ್ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

ಪ್ರಾಧಿಕಾರದ ಅಧಿಕಾರಿಗಳು ಮಲತಾಯಿ ಧೋರಣೆ ತೋರುತ್ತಿದ್ದಾರೆ. ನಮ್ಮ ಪ್ರತಿನಿಧಿಗಳು ಸಹ ಸಮರ್ಥ ವಾದ ಮಂಡನೆ ಮಾಡಲು ವಿಫಲವಾಗಿದ್ದಾರೆ. ಕಾವೇರಿ, ಕೃಷ್ಣೆ ಹಾಗೂ ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ನೀರಿನ ವಿಚಾರಕ್ಕೆ ನೀವು ರಾಜಕೀಯ ಮಾಡಿದ್ದಾದಲ್ಲಿ ನೀವು ಕಂಡಿತ ರೈತರ ಶಾಪಕ್ಕೆ ಗುರಿಯಾಗುತ್ತಿರಿ. ಪ್ರಾಮಾಣಿಕ ಹಾಗೂ ಒಗ್ಗಟಿನ್ನ ಪ್ರದರ್ಶನ ಮಾಡಿ. ಇಲ್ಲವಾದಲ್ಲಿ ರೈತರೇ ನಿಮ್ಮ ಮನೆಬಾಗಿಲ ಮುಂದೆ ಬರಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Fri, 20 October 23

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ