AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಕರ್ನಾಟಕ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ, ಅರೆಬೆತ್ತಲೆ ಮೆರವಣಿಗೆ; ಚಾಮರಾಜನಗರದಲ್ಲೂ ಹೋರಾಟ

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದ್ದು, ಇದರ ಅನ್ವಯ ಕರ್ನಾಟಕ ಸರ್ಕಾರವು ಹರಿಸುತ್ತಿರುವ ನೀರಿನ ಪ್ರಮಾಣವನ್ನು ಹೆಚ್ಚಿಸಿದೆ. ಇದರ ವಿರುದ್ಧ ಮಂಡ್ಯದ ರೈತರು ಸಿಡಿದೆದ್ದಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದು, ಚಾಮರಾಜನಗರ ಜಿಲ್ಲೆಯಲ್ಲೂ ಹೋರಾಟ ನಡೆಯುತ್ತಿದೆ.

ಕಾವೇರಿ ವಿವಾದ: ಕರ್ನಾಟಕ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ, ಅರೆಬೆತ್ತಲೆ ಮೆರವಣಿಗೆ; ಚಾಮರಾಜನಗರದಲ್ಲೂ ಹೋರಾಟ
ತಮಿಳುನಾಡಿಗೆ ಕೆಆರ್​ಎಸ್ ಜಲಾಶಯದಿಂದ ನೀರು ಬಿಡುತ್ತಿರುವುದನ್ನು ಖಂಡಿಸಿ ರೈತರು ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: Rakesh Nayak Manchi|

Updated on: Aug 31, 2023 | 1:13 PM

Share

ಮಂಡ್ಯ, ಆಗಸ್ಟ್ 31: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸಿದ್ದು, ಇದರ ಅನ್ವಯ ಕರ್ನಾಟಕ ಸರ್ಕಾರವು ಹರಿಸುತ್ತಿರುವ ನೀರಿನ ಪ್ರಮಾಣವನ್ನು ಹೆಚ್ಚಿಸಿದೆ. ಇದರ ವಿರುದ್ಧ ಮಂಡ್ಯದ (Mandya) ರೈತರು ಸಿಡಿದೆದ್ದಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ ನಡೆಸಿದ್ದು, ಚಾಮರಾಜನಗರ ಜಿಲ್ಲೆಯಲ್ಲೂ (Chamarajanagara) ಹೋರಾಟ ನಡೆಯುತ್ತಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು. ಭೂಮಿತಾಯಿ ಹೋರಾಟ ಸಮಿತಿಯು ಶ್ರೀರಂಗಪಟ್ಟಣದ ಕಾವೇರಿ ನದಿ ಸ್ನಾನಘಟ್ಟದಿಂದ ತಾಲೂಕು ಕಚೇರಿವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪಕ್ಷಾತೀತವಾಗಿ ನಡೆದ ಪ್ರತಿಭಟನೆಯಲ್ಲಿ ಕೈ ಕಾರ್ಯಕರ್ತರು ಭಾಗಿ

ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟವು ದಿನೇ ದಿನೇ ಕಾವೇರುತ್ತಿದೆ. ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್​ ನೀರು ಬಿಡಲು ಸೂಚನೆ ಹಿನ್ನೆಲೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್​​, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ತಮಿಳುನಾಡಿಗೆ ಒಂದೇ ಒಂದು ಕ್ಯೂಸೆಕ್ ನೀರನ್ನೂ ಬಿಡಬಾರದು: ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಆಗ್ರಹ

ರೈತ ಪರ, ಕನ್ನಡ ಪರ ಸೇರಿದಂತೆ ಹಲವು ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಲಾಯಿತು. ರಕ್ತ ಕೊಟ್ಟಿವು ನೀರು ಕೊಡಲ್ಲ ಎಂದು ಘೋಷಣೆಗಳನ್ನು ಕೂಗಲಾಯಿತು. ಈ ವೇಳೆ ಮಾಜಿ ಸಚಿವ ಆತ್ಮಾನಂದ, ರೈತ ಹೋರಾಗಾರ್ತಿ ಸುನಂದಾ ಜಯರಾಂ, ಮಾಜಿ ಎಂಎಲ್‌ಸಿ ಕೆಟಿ ಶ್ರೀಕಂಠೇಗೌಡ ಭಾಗಿಯಾದರು.

ಚಾಮರಾಜನಗರದಲ್ಲೂ ರೈತ ಹೋರಾಟ

ಚಾಮರಾಜನಗರ: ಗಡಿ ನಾಡು ಚಾಮರಾಜನಗರ ಜಿಲ್ಲೆಯಲ್ಲೂ ಕಾವೇರಿ ಹೋರಾಟದ ಕಿಚ್ಚು ಜೋರಾಗಿದೆ. ನಗರದ ಭುವನೇಶ್ವರಿ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರತಿ ಹರಿದು ಹಾಕಿದವು.

ಮುಂದಿನ ದಿನದಲ್ಲಿ ಸಂಸದರು ಹಾಗೂ ರಾಜ್ಯ ಸಂಪುಟದ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ನಮಗೆ ಕುಡಿಯಲು, ಬೆಳೆ ಬೆಳೆಯಲು ನೀರಲ್ಲದೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವುದು ಎಷ್ಟು ಸರಿ? ತಮಿಳುನಾಡಿನವರು ಮೂರನೇ ಬೆಳೆ ಬೆಳೆಯಲು ನೀರು ಕೇಳುತ್ತಿದ್ದಾರೆ? ಸುಪ್ರೀಂ ಕೋರ್ಟ್ ಆದೇಶ ಬರುವ ಮುನ್ನವೇ ಆತುರದಲ್ಲಿ ನೀರು ಬಿಡಲು ಕಾರಣವೇನು? ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು