ರಾಜ್ಯದಲ್ಲಿ ಹೆಚ್ಚಾದ ಕಾವೇರಿ ಕಿಚ್ಚು; ಇಂದು ಕೂಡ ಹಲವೆಡೆ ಪ್ರತಿಭಟನೆ, ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಇಂದು ಕೂಡ ಹಲವೆಡೆ ಕಾವೇರಿಗಾಗಿ ಪ್ರತಿಬಟನೆಗಳು ನಡೆಯುತ್ತಿವೆ, ಮಂಡ್ಯದಲ್ಲಿ ಬೆಳಗ್ಗೆ 10ರಿಂದ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಹೆಚ್ಚಾದ ಕಾವೇರಿ ಕಿಚ್ಚು; ಇಂದು ಕೂಡ ಹಲವೆಡೆ ಪ್ರತಿಭಟನೆ, ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ
ಕರವೇ ಪ್ರತಿಭಟನೆ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Sep 30, 2023 | 9:02 AM

ಮಂಡ್ಯ, ಸೆ.30: ಅ.15ರವರೆಗೆ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ಮಾಡಿರುವ ಹಿನ್ನೆಲೆ ಪ್ರಾಧಿಕಾರದ ಆದೇಶ ಖಂಡಿಸಿ ಇಂದು ಮಂಡ್ಯದಲ್ಲಿ (Mandya) ಸಾಲು ಸಾಲು ಪ್ರತಿಭಟನೆಗಳನ್ನು (Protest) ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿಯಿಂದ ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ನಂತರ ಮಂಡ್ಯದ ಸಂಜಯ್ ಸರ್ಕಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಅಖಂಡ ಕರ್ನಾಟಕ ರಕ್ಷಣಾ ಸೇವಾದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರಿಂದ ಶ್ರೀರಂಗಪಟ್ಟಣದಲ್ಲಿ ಬಾರುಕೋಲು ಚಳವಳಿ ನಡೆಯಲಿದೆ.

ಮಹತ್ವದ ಸಭೆ ಕರೆದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಇಂದು ಮಹತ್ವದ ಸಭೆ ನಡೆಯಲಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಹತ್ವದ ಸಭೆ ಕರೆದಿದೆ. ಹಾಲಿ & ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರಿಗೆ ಆಹ್ವಾನಿಸಲಾಗಿದೆ. ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. CWMA, CWRC ರದ್ದತಿಗೆ ಸರ್ಕಾರ ಕಾನೂನು ಹೋರಾಟ ಮಾಡಬೇಕು. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲವೆಂದು ನಿರ್ಧಾರ ಮಾಡಬೇಕು. ಸರ್ಕಾರ ದೃಢ ನಿರ್ಧಾರ ಕೈಗೊಳ್ಳುವಂತೆ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಲಿದೆ. ಈ ವಿಚಾರಗಳ ಬಗ್ಗೆ ಇಂದಿನ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತೆ.

ಇದನ್ನೂ ಓದಿ: Karnataka Breaking Kannada News Live: ಮಂಡ್ಯದಲ್ಲಿ ಸಾಲು ಸಾಲು ಪ್ರತಿಭಟನೆ

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಟಾಳ್​​​ ಚಳವಳಿ

ಇನ್ನು ಮತ್ತೊಂದೆಡೆ CWMA ಆದೇಶ ಖಂಡಿಸಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ವಾಟಾಳ್ ನೇತೃತ್ವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುತ್ತೆ. ಜೊತೆಗೆ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‌ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ಎ.ಗಿರೀಶ್‌ ಗೌಡ ಸೇರಿ ಹಲವು ಕನ್ನಡಪರ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.

ಮತ್ತೊಂದೆಡೆ ಅ.5ರಂದು ಬೆಂಗಳೂರಿನಿಂದ ವಾಹನಗಳಲ್ಲಿ ಕೆಆರ್‌ಎಸ್‌ಗೆ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್