ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ

ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ
ಕೃಷಿ ಖಾತೆ ಸಚಿವ ಎನ್.ಚಲುವರಾಯಸ್ವಾಮಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Jul 16, 2023 | 2:59 PM

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆಯಲಾಗಿದೆ. ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N chaluvaraya swamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ ಎಂದರು.

ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ. ನೀರಾವರಿ ಸಚಿವರ ಜತೆ ಮತ್ತು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಭೆ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಮಳೆ ಬರುತ್ತದೆ ಎಂಬ ನಂಬಿಕೆ ಇದೆ

ಮಳೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂಬ ವರದಿ ಇದೆ. ಆಶಾದಾಯಕವಾಗಿ ಇರಬೇಕಾದ ಅನಿರ್ವಾಯತೆ ಇದೆ. ಕೆಆರ್​ಎಸ್​ನ ಒಳಹರಿವು ಕೂಡ ಕಡಿಮೆ ಆಗಿದೆ. ಸಮಸ್ಯೆಯಂತೂ ಇದೆ ಎಂದು ಹೇಳಿದರು.

ಇದನ್ನೂ ಓದಿ: Mandya: ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಾಗುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಮಾನದಂಡಗಳ ಆಧಾರದ ಮೇಲೆ ಬರಗಾಲ ಘೋಷಣೆ

ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು, ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದರು.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ