Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಚರ್ಚೆಯಾಗಾದ ಕಾವೇರಿ ವಿಚಾರ: ಜನಪ್ರತಿನಿಧಿಗಳು ರಾಜಿನಾಮೆ ನೀಡಲಿ ಎಂದ ಮಂಡ್ಯ ರೈತರು

ಕರ್ನಾಟಕದಲ್ಲಿ ಸಮರ್ಪಕವಾಗಿ ಮಳೆಯಾಗಿಲ್ಲ. ಇದರಿಂದ ರಾಜ್ಯದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಅದರಂತೆ ಕೆಆರ್​ಎಸ್​ ಆಣ್ಣೆಕಟ್ಟೆಗೂ ಒಳಹರಿವು ಕಡಿಮೆಯಾಗಿದ್ದು, ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಆದರೂ ಕೂಡ ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.

Belagavi Session: ಚರ್ಚೆಯಾಗಾದ ಕಾವೇರಿ ವಿಚಾರ: ಜನಪ್ರತಿನಿಧಿಗಳು ರಾಜಿನಾಮೆ ನೀಡಲಿ ಎಂದ ಮಂಡ್ಯ ರೈತರು
ರೈತರ ಪ್ರತಿಭಟನೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2023 | 6:42 PM

ಮಂಡ್ಯ, ಡಿಸೆಂಬರ್ 11: ಬರಗಾಲದಲ್ಲೂ (Drought) ತಮಿಳುನಾಡಿಗೆ (Tamilnadu) ನೀರಿ ಹರಿಸುತ್ತಿರುವುದು ಕಾವೇರಿ (Cauvery) ಕೊಳ್ಳದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ (Mandya) ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 98 ದಿನಗಳಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಆದರೂ ಕೂಡ ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗುತ್ತಿಲ್ಲವೆಂದು ರೈತರು (Farmers) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಸದನದಲ್ಲಿ ಕಾವೇರಿ ವಿಚಾರ ಪ್ರಸ್ತಾಪಿಸಿಲ್ಲ, ರಾಜಕೀಯ ವಿಚಾರ ಮಾತ್ರ ಚರ್ಚೆಯಾಗುತ್ತಿದೆ. ಸಚಿವರು, ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಲಿ. ರೈತರ ಬಗ್ಗೆ ಚರ್ಚೆಯಾಗದ ಅಧಿವೇಶನ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.

ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉಸ್ತುವಾರಿ ಸಚಿವರು ಸೀಪೇಜ್​​​ ವಾಟರ್​​ ಎಂದು ನೀರು ಹರಿಸುತ್ತಾರೆ. ನಾಲೆಗಳ ಮೂಲಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಸದನದಲ್ಲೂ ಸಹ ಕಾವೇರಿ ವಿಚಾರ ಪ್ರಸ್ತಾಪವಾಗುತ್ತಿಲ್ಲ. ಬರೀ ರಾಜಕೀಯ ಪ್ರತಿಷ್ಟಿತ ಚರ್ಚೆ ನಡೆಯುತ್ತಿವೆ. ಹೋರಾಟ ಹಾಗೂ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಸಚಿವರು, ಶಾಸಕರು ತಕ್ಷಣವೇ ರಾಜಿನಾಮೆ ಕೊಡಲಿ. ರೈತರ ಬಗ್ಗೆ ಚರ್ಚೆಯಾಗದ ಅಧಿವೇಶನ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಭಾರಿ ಕುಸಿತ: ರೈತ ಚಿಂತಾಕ್ರಾಂತ

ಅತಿಥಿ ಉಪನ್ಯಾಸಕರ ಧರಣಿ

ಸೇವಾ ಖಾಯಂ, ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ಪ್ರತಿಭಟನೆ ಮಾಡುತ್ತಿದ್ದಾರೆ. ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿ ಬಗ್ಗೆ ಚರ್ಚಿಸಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಅತಿಥಿ ಉಪನ್ಯಾಸಕರು ನಿರ್ಧರಿಸಿದ್ದಾರೆ ಎಂದು ಬಾಗಲಕೋಟೆಯಲ್ಲಿ ಅತಿಥಿ ಉಪನ್ಯಾಸಕರು ಹೇಳಿದರು.

ಇನ್ನೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕೂಡ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಕೊಟ್ಟ ಮಾತು ಈಡೇರಿಸಬೇಕು. ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:36 pm, Mon, 11 December 23

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ