ಮಂಡ್ಯ, ಡಿಸೆಂಬರ್ 11: ಬರಗಾಲದಲ್ಲೂ (Drought) ತಮಿಳುನಾಡಿಗೆ (Tamilnadu) ನೀರಿ ಹರಿಸುತ್ತಿರುವುದು ಕಾವೇರಿ (Cauvery) ಕೊಳ್ಳದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ (Mandya) ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 98 ದಿನಗಳಿಂದ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಆದರೂ ಕೂಡ ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗುತ್ತಿಲ್ಲವೆಂದು ರೈತರು (Farmers) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಸದನದಲ್ಲಿ ಕಾವೇರಿ ವಿಚಾರ ಪ್ರಸ್ತಾಪಿಸಿಲ್ಲ, ರಾಜಕೀಯ ವಿಚಾರ ಮಾತ್ರ ಚರ್ಚೆಯಾಗುತ್ತಿದೆ. ಸಚಿವರು, ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಲಿ. ರೈತರ ಬಗ್ಗೆ ಚರ್ಚೆಯಾಗದ ಅಧಿವೇಶನ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.
ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉಸ್ತುವಾರಿ ಸಚಿವರು ಸೀಪೇಜ್ ವಾಟರ್ ಎಂದು ನೀರು ಹರಿಸುತ್ತಾರೆ. ನಾಲೆಗಳ ಮೂಲಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಸದನದಲ್ಲೂ ಸಹ ಕಾವೇರಿ ವಿಚಾರ ಪ್ರಸ್ತಾಪವಾಗುತ್ತಿಲ್ಲ. ಬರೀ ರಾಜಕೀಯ ಪ್ರತಿಷ್ಟಿತ ಚರ್ಚೆ ನಡೆಯುತ್ತಿವೆ. ಹೋರಾಟ ಹಾಗೂ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಸಚಿವರು, ಶಾಸಕರು ತಕ್ಷಣವೇ ರಾಜಿನಾಮೆ ಕೊಡಲಿ. ರೈತರ ಬಗ್ಗೆ ಚರ್ಚೆಯಾಗದ ಅಧಿವೇಶನ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಭಾರಿ ಕುಸಿತ: ರೈತ ಚಿಂತಾಕ್ರಾಂತ
ಸೇವಾ ಖಾಯಂ, ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ಪ್ರತಿಭಟನೆ ಮಾಡುತ್ತಿದ್ದಾರೆ. ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿ ಬಗ್ಗೆ ಚರ್ಚಿಸಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಅತಿಥಿ ಉಪನ್ಯಾಸಕರು ನಿರ್ಧರಿಸಿದ್ದಾರೆ ಎಂದು ಬಾಗಲಕೋಟೆಯಲ್ಲಿ ಅತಿಥಿ ಉಪನ್ಯಾಸಕರು ಹೇಳಿದರು.
ಇನ್ನೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕೂಡ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಕೊಟ್ಟ ಮಾತು ಈಡೇರಿಸಬೇಕು. ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:36 pm, Mon, 11 December 23