AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಹಾಗೂ ರಾಜ್ಯ ಸಚಿವರ ನಡುವೆ ಜಟಾಪಟಿ: ಮಂಡ್ಯದಲ್ಲಿ ನೂತನ ಸಕ್ಕರೆ ಕಾರ್ಖಾನೆಗೆ ವಿರೋಧ

ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ, ರಾಜ್ಯದ ಏಕೈಕ ಸರ್ಕಾರಿ ಸಾಮ್ಯದ ಸಕ್ಕರೆ ಕಾರ್ಖಾನೆ. ಈ ಕಾರ್ಖಾನೆ ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ನಷ್ಟದಲ್ಲಿ ಇದ್ದ ಕಾರ್ಖಾನೆಗೆ ಸರ್ಕಾರ ಜೀವ ತುಂಬಿತ್ತು. ಅಷ್ಟೇ ಅಲ್ಲದೆ ಹೊಸ ಕಾರ್ಖಾನೆ ಸ್ಥಾಪನೆಗೂ ಕೂಡ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ನೂತನ ಕಾರ್ಖಾನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕೇಂದ್ರ ಸಚಿವ ಹಾಗೂ ರಾಜ್ಯ ಸಚಿವರ ಜಟಾಪಟಿಗೂ ಕೂಡ ಕಾರಣವಾಗಿದೆ.

ಕೇಂದ್ರ ಹಾಗೂ ರಾಜ್ಯ ಸಚಿವರ ನಡುವೆ ಜಟಾಪಟಿ: ಮಂಡ್ಯದಲ್ಲಿ ನೂತನ ಸಕ್ಕರೆ ಕಾರ್ಖಾನೆಗೆ ವಿರೋಧ
ಸಕ್ಕರೆ ಕಾರ್ಖಾನೆ
ಪ್ರಶಾಂತ್​ ಬಿ.
| Edited By: |

Updated on: Jun 24, 2024 | 3:40 PM

Share

ಮಂಡ್ಯ, ಜೂನ್.24: ಮಂಡ್ಯ ಜಿಲ್ಲೆಯ ರೈತರ ಜೀವನಾಡಿ, ರಾಜ್ಯದ ಏಕೈಕ ಸರ್ಕಾರಿ ಸಾಮ್ಯದ ಸಕ್ಕರೆ ಕಾರ್ಖಾನೆ (Mandya Sugar Factory) ಅಂದರೆ ಅದು ಮಂಡ್ಯ ಮೈ ಶುಗರ್ ಸಕ್ಕರೆ ಕಾರ್ಖಾನೆ. ಸಾಕಷ್ಟು ವಿವಾದ, ನಷ್ಟ, ಭ್ರಷ್ಟಚಾರದಿಂದಾಗಿ ಸಾಕಷ್ಟು ಖ್ಯಾತಿಯನ್ನು ಕೂಡ ಪಡೆದಿದೆ. ಅಷ್ಟೇ ಅಲ್ಲದೆ ಮುಚ್ಚಿ ಹೋಗಿದ್ದ ಕಾರ್ಖಾನೆಗೆ ಸರ್ಕಾರ ಮರು ಜೀವ ತುಂಬಿದೆ. ಆರ್ಥಿಕ ಸಹಾಯ ನೀಡಿ, ಮತ್ತೆ ಕಾರ್ಖಾನೆ ಪುನಶ್ಛೇತನ ಮಾಡಲಾಗಿದೆ. 2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಕೂಡ ಸಜ್ಜಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರ ನೂತನ ಕಾರ್ಖಾನೆ ತೆರೆಯಲು ಕೂಡ ಮುಂದಾಗಿದೆ.

ಸುಮಾರು 500 ಕೋಟಿ ರೂ ವೆಚ್ಚದಲ್ಲಿ ಹೊಸ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದೆ. ಬಜೆಟ್ ನಲ್ಲೂ ಕೂಡ ಘೋಷಣೆ ಮಾಡಲಾಗಿದೆ. ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಂಡ್ಯದ ಸಂಸದರು, ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೂಡ ವ್ಯಂಗವಾಡಿದ್ದಾರೆ. ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆಗೆ ಮುಂದಾಗಿದ್ದಾರೆ. ಅದು ಸ್ಥಾಧ್ಯನಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪತ್ನಿಗೆ ಹೆರಿಗೆಯಾಗುತ್ತಿದ್ದಂತೆ ಅವಳಿ ಹೆಣ್ಣು ಶಿಶುಗಳನ್ನು ಕದ್ದು, ಕೊಂದು, ಹೂತು ಹಾಕಿದ ಪಾಪಿ ತಂದೆ

ಅಂದಹಾಗೆ 1932ರಲ್ಲಿ ಸ್ಥಾಪನೆಯಾಗಿರೋ ಮೈ ಶುಗರ್ ಸಕ್ಕರೆ ಕಾರ್ಖಾನೆ ಸಾಕಷ್ಟು ಹಳೆಯದಾಗಿದೆ. ಕಾರ್ಖಾನೆಯಲ್ಲಿ ಹಳೆಯದಾದ ಯಂತ್ರೋಪಕರಣಗಳು ಕೂಡ ಇವೆ. ಅಲ್ಲದೆ ಆಗಾಗ ಸಾಕಷ್ಟು ನಷ್ಟು ಕೂಡ ಉಂಟಾಗುತ್ತಿದೆ. ಹೀಗಾಗಿ ಸುಮಾರು 500 ರೂ ಕೋಟಿ ರೂ ವೆಚ್ಚದಲ್ಲಿ ಮಂಡ್ಯದ ಹೊರವಲಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನೇನೂ ಕೆಲವೇ ದಿನಗಳಲ್ಲಿ ಶಂಕುಸ್ಥಾಪನೆಗೂ ಕೂಡ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರೇ ಕೇಂದ್ರದಿಂದ ಅನುದಾನ ತಂದು ಕಾರ್ಖಾನೆ ಸ್ಥಾಪನೆ ಮಾಡಲಿ. ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

ಒಟ್ಟಾರೆ ಮಂಡ್ಯದಲ್ಲಿ ನೂತನ ಸಕ್ಕರೆ ಕಾರ್ಖಾನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಾಕಷ್ಟು ವಿರೋಧಗಳು ಕೂಡ ಕೇಳಿ ಬರುತ್ತಿವೆ. ಹಾಗಾದ್ರೆ ಕಾರ್ಖಾನೆ ಸ್ಥಾಪನೆ ಆಗುತ್ತಾ ಇಲ್ವಾ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ