ಕೆಆರ್ಎಸ್, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ: ನಾಲೆಗಳ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ. ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ನಾಲೆಗಳ ಅಭಿವೃದ್ಧಿಗೆ ಅನುದಾನ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ.

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್(KRS) ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು. ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.
ಇನ್ನು ಕಾರ್ಯಕ್ರಮದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರ ಬೆಂಬಲಿಸಿಕೊಂಡು ಬಂದಿದೆ. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರವಿಲ್ಲದಿದ್ದಾಗ ಮತ್ತೊಂದು ರೀತಿ. ಕಾಂಗ್ರೆಸ್ನವರು ಖಾಯಂ ಆಗಿ ಪ್ರತಿಭಟನೆ ಮಾಡುತ್ತಲೇ ಇರಬೇಕು. ದೇಶದಲ್ಲಿ ಈಗ ಕಾಂಗ್ರೆಸ್ಗೆ ಅಂತಹ ಸ್ಥಿತಿ ಬಂದಿದೆ ಎಂದರು.
ನಾಲೆಗಳ ಅಭಿವೃದ್ಧಿಗೆ ಅನುದಾನ ಕೊಡುವ ಭರವಸೆ
ಮತ್ತೊಂದೆಡೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ. ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ನಾಲೆಗಳ ಅಭಿವೃದ್ಧಿಗೆ ಅನುದಾನ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಆಷಾಢ ಮಾಸದಲ್ಲಿ ಜಲಾಶಯ ತುಂಬಿರೋದು ವಿಶೇಷವಾಗಿದೆ. ರೈತರು ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ 8800 ಕಿ.ಮೀ. ನಾಲೆ ಇವೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಅಭಿವೃದ್ಧಿಗೆ ಸೂಚಿಸಿದ್ದೆ. ಕಾವೇರಿ ಜಲಾನಯನ ಪ್ರದೇಶದ 2500 ಕಿ.ಮೀ. ಅಭಿವೃದ್ಧಿ ಆಗಿದೆ ಎಂದರು.
Published On - 4:23 pm, Wed, 20 July 22




