ಒಬ್ಬನೇ ಒಬ್ಬ ಶಾಸಕ ಕೂಡ ನಮ್ಮ ಪಕ್ಷ ಬಿಟ್ಟು ಹೋಗಲ್ಲ: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 4 ತಿಂಗಳಾಯ್ತು. ಮೊದಲು ವಿರೋಧ ಪಕ್ಷದ ನಾಯಕರನ್ನ ಆಯ್ಕೆ ಮಾಡಲು ಬಿಜೆಪಿಯವರಿಗೆ ಹೇಳಿ. ಒಬ್ಬನೇ ಒಬ್ಬ ಶಾಸಕ ಕೂಡ ನಮ್ಮ ಪಕ್ಷ ಬಿಟ್ಟು ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪರೇಷನ್ ಕಮಲ ವದಂತಿಗಳಿಗೆ ತಿರುಗೇಟು ನೀಡಿದರು.

ಒಬ್ಬನೇ ಒಬ್ಬ ಶಾಸಕ ಕೂಡ ನಮ್ಮ ಪಕ್ಷ ಬಿಟ್ಟು ಹೋಗಲ್ಲ: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
ಸಿದ್ದರಾಮಯ್ಯ
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Oct 31, 2023 | 9:43 PM

ಮಂಡ್ಯ, ಅಕ್ಟೋಬರ್ 31: ಬಿಜೆಪಿಯವರು ನಮ್ಮ ಸರ್ಕಾರ ಬೀಳಿಸುವ ಕನಸು ಕಾಣ್ತಿದ್ದಾರೆ. ಆದರೆ, ಒಬ್ಬನೇ ಒಬ್ಬ ಶಾಸಕ ಕೂಡ ನಮ್ಮ ಪಕ್ಷ ಬಿಟ್ಟು ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮಂಡ್ಯ (Mandya) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 4 ತಿಂಗಳಾಯ್ತು. ಮೊದಲು ವಿರೋಧ ಪಕ್ಷದ ನಾಯಕರನ್ನ ಆಯ್ಕೆ ಮಾಡಲು ಬಿಜೆಪಿಯವರಿಗೆ ಹೇಳಿ ಎಂದರು. ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಸಿಎಂಗೆ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ. ಯಾವುದೇ ಪತ್ರ ನನಗೆ ಬಂದಿಲ್ಲ. ಒಂದುವೇಳೆ ಪತ್ರ ಬಂದರೆ ಪ್ರತಿಕ್ರಿಯೆ ಕೊಡುತ್ತೇನೆ ಎಂದರು.

ಅಪೂರ್ಣಗೊಂಡ ರಾಷ್ಟ್ರೀಯ ಹೆದ್ದಾರಿ ಕೆಳಸೇತುವೆ ಕಾಮಗಾರಿ ಪೂರ್ಣ ಮಾಡಲು ಸೂಚನೆ ನೀಡಿದ ಮುಖ್ಯಮಂತ್ರಿಗಳು, ಅಪೂರ್ಣಗೊಂಡ ಮಳವಳ್ಳಿ ಕುಡಿಯುವ ನೀರು ಯೋಜನೆ ಬಗ್ಗೆಯೂ ಪ್ರತಿಕ್ರಿಯಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಬೇಕು ಎಂದು ಸೂಚನೆ ನೀಡಿದರು.

ಕಾವೇರಿ ಕೊಳ್ಳದ ಜಲಾಶಯದಲ್ಲಿದೆ 48TMC ನೀರು ಇದೆ. 18-20 TMC ಬೆಳೆಗಳಿಗೆ ಅವಶ್ಯಕತೆ ಇದೆ. ಕುಡಿಯುವ ನೀರಿಗೆ ಉಳಿಸಿಕೊಂಡು ಬೆಳೆ ರಕ್ಷಣೆ ಮಾಡಲು ಹೇಳಿದ್ದೇನೆ. ಮಣ್ಣಿನ ಫಲವತ್ತತೆ ಹೆಚ್ಚಿಸಲು ಸಂಶೋಧನೆ ನಡೆಸಲು ಆದೇಶ ನೀಡಲಾಗಿದೆ ಎಂದು ಅವರು ಹೇಳಿದರು.

ಕೆಲವು ಇಲಾಖೆಗಳು ಸರಿಯಾಗಿ ಕೆಲಸ ಮಾಡ್ತಿಲ್ಲ. ಬದಲಾವಣೆ ಆಗದಿದ್ರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೃಷಿ ಅಧಿಕಾರಿಗಳು ರೈತರ ಜೊತೆ ಸಂಪರ್ಕದಲ್ಲಿದ್ದು ಮಾರ್ಗದರ್ಶನ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಮಂಡ್ಯಕ್ಕೆ ವಿಶೇಷ ಅನುದಾನ ನಿರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಪರಾಮರ್ಶೆ ಮಾಡಲು ಬಂದಿರುವುದೇ ವಿನಃ ಸ್ಪೆಷಲ್ ಪ್ಯಾಕೇಜ್ ಘೋಷಣೆ ಮಾಡಲು ಅಲ್ಲ. ಮಂಡ್ಯದಲ್ಲಿ 1 ಕೋಟಿ 7 ಲಕ್ಷ ಜನರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ. ರಾಜ್ಯದಲ್ಲಿ ಕೆಲ‌ ಸಮಸ್ಯೆ ಇದೆ, ಬಗೆಹರಿಸಲಾಗುವುದು ಎಂದರು.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ವೇ ಎಂಟ್ರಿ, ಎಕ್ಸಿಟ್ ಕ್ಲೋಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅಗತ್ಯ ಇರುವ ಕಡೆ ಎಂಟ್ರಿ ಹಾಗೂ ಎಕ್ಸಿಟ್ ಕೊಡಲು ಹೇಳಿದ್ದೇನೆ ಎಂದರು.

ಹಿಂಗಾರು ಬೆಳೆ ಬಿತ್ತನೆ ಮಾಡದಿರಲು ರೈತರಿಗೆ ಸಿದ್ದರಾಮಯ್ಯ ಮನವಿ

ನಮ್ಮ ಬಳಿಯೇ ನೀರಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿಯವರು (CWRC) ತಮಿಳುನಾಡಿಗೆ ನೀರು ಕೊಡಲು ಹೇಳಿದ್ದಾರೆ. ನಾವು ಹೇಗೆ ಕೊಡ್ತೀವಿ ಎಂದು ಹೇಳಲು ಸಾಧ್ಯವಿಲ್ಲ. ರೈತರ ರಕ್ಷಣೆ ನಮ್ಮ ಜವಬ್ದಾರಿ. ಪ್ರತಿಭಟನೆ ಕೈ ಬಿಡಲು ಮನವಿ ಮಾಡಲಾಗಿದೆ. ಮುಂದಿನ ಬೆಳೆಗೆ ನೀರು ಬಿಡಲು ಸಾಧ್ಯವಿಲ್ಲ, ನೀರು ಇದ್ದರೆ ಅಲ್ವಾ ಕೊಡಲು ಸಾಧ್ಯ? ಹಿಂಗಾರು ಬೆಳೆ ಹಾಕದಿರಲು ರೈತರಿಗೆ ಹೇಳಿದ್ದೇವೆ. ಬೆಳೆದ ಬೆಳೆಗಳನ್ನು ಉಳಿಸುವ ಕೆಲಸ ಮಾಡ್ತೀವಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನ 66 ಶಾಸಕರ ಪಟ್ಟಿ ಸಿದ್ಧಪಡಿಸಿದ ಬಿಜೆಪಿ: ಆಪರೇಷನ್​ ಕಮಲದ ಬಗ್ಗೆ ‘ಕೈ’ ನಾಯಕರಿಗೆ ಸುಳಿವು?

ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇನೆ. ಬರ, ಕುಡಿಯುವ ನೀರು, ವಿದ್ಯುತ್, ಆಸ್ಪತ್ರೆ ಸಮಸ್ಯೆ ಬಗ್ಗೆ ಚರ್ಚೆಯಾಗಿದೆ. ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಲು ಸೂಚಿಸಿದ್ದೇನೆ. ಒಂದುವೇಳೆ ಸಮಸ್ಯೆ ಎದುರಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತೇನೆ. ಕೆ.ಆರ್.ಪೇಟೆಯ ಒಂದು ಹಳ್ಳಿ ಬಿಟ್ಟರೆ ಬೇರೆಲ್ಲೂ ಸಮಸ್ಯೆ ಇಲ್ಲ. ವಿದ್ಯುತ್ 7 ತಾಸು ಕೊಡಲು ಸೂಚಿಸಿದ್ದೇವೆ. ಅಭಾವ ಇರುವುದರಿಂದ 5 ಗಂಟೆ ಅಷ್ಟೇ ವಿದ್ಯುತ್ ನೀಡಲಾಗುತ್ತಿದೆ. ಮೂರು ಶಿಫ್ಟ್‌ಗಳಲ್ಲಿ ತ್ರಿಫೇಸ್ ಕರೆಂಟ್ 5 ತಾಸು ನೀಡಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಲೋಡ್​ಶೆಡ್ಡಿಂಗ್ ಆಗದಂತೆ ಕ್ರಮಕ್ಕೆ ಸೂಚನೆ‌ ನೀಡಲಾಗಿದೆ. ಮಿಮ್ಸ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ವಾಟರ್ ಬಿಲ್ ಕಡಿಮೆ ಮಾಡಲು ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ