ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಮಂಡ್ಯದಲ್ಲಿ ಮೇಸ್ತ್ರಿಯೊಬ್ಬನನ್ನು ಸಹ ಕೆಲಸಗಾರ ಕತ್ತು ಕೊಯ್ದು ಬೀಕರವಾಗಿ ಕೊಲೆ ಮಾಡಿದ್ದಾನೆ.

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 07, 2023 | 2:29 PM

ಮಂಡ್ಯ, (ನವೆಂಬರ್ 07): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ಜು ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಸಹ ಮೇಸ್ತ್ರಿಯೋರ್ವನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ (Mordred) ಮಾಡಲಾಗಿದೆ. ಮಂಡ್ಯ(Mandya) ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಹ ಕೆಲಸಗಾರ ಕಬ್ಬನಹಳ್ಳಿಯ ರವಿ ಎನ್ನುವಾತ ತನ್ನ ಮೇಸ್ತ್ರಿ ಮಂಟೇಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇವರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಈ ಹಿಂದೆ ಗಲಾಟೆ ನಡೆದಿತ್ತು. ಆದ್ರೆ, ರವಿ ನಿನ್ನೆ ಪ್ಲ್ಯಾನ್ ಮಾಡಿ ಮಾತುಕತೆಗೆಂದು ಮನೆಯಲ್ಲಿದ್ದ ಮಂಟೇಸ್ವಾಮಿಯನ್ನು ಆಚೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಮಂಡ್ಯ ರಸ್ತೆ ಪಕ್ಕದ ಜಮೀನಿನೊಂದರ ಬಳಿ ಮಂಟೇಸ್ವಾಮಿಯ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಮಾಜಿ ಕಾರು ಚಾಲಕ ಕಿರಣ್ ಎನ್ನುವಾತ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದ. ಇದೇ ಮಾದರಿಯಲ್ಲಿ ಮೇಸ್ತ್ರಿ ಮಂಟೇಸ್ವಾಮಿಯನ್ನು ಸಹ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಇನ್ನು ಈ ಬಗ್ಗೆ ಕೆ ಎಂ ದೊಡ್ಡಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇನ್ನು ಪರಾರಿಯಾಗಿರುವ ಕೊಲೆ ಆರೋಪಿ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೈಕ್ ಸವಾರರು ಸಾವು

ಕೊಡಗು, (ನವೆಂಬರ್ 07): ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ, ಪರಿಣಮಾ ಬೈಕ್​ನಲ್ಲಿದ್ದ ಸುಂಟಿಕೊಪ್ಪ ನಿವಾಸಿಗಳಾದ ಚಂದನ್(22), ಉದಯ್(25) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:27 pm, Tue, 7 November 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ